ಬಳ್ಳಾರಿಯಲ್ಲಿ ಭಾರೀ ಮಳೆ : ಸೇತುವೆ ಮುಳುಗಿ ಸಂಪರ್ಕ ಕಡಿತ

ಬಳ್ಳಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ವೇದಾವತಿ ನದಿ ತುಂಬಿ ಹರಿಯುತ್ತಿದೆ. 

Heavy Rain Lashes in bellary

ಬೆಂಗಳೂರು (ಸೆ.14):  ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಬಹುತೇಕ ಕಡೆಗಳಲ್ಲಿ ಇಳಿಮುಖವಾಗಿದೆ. 

ಆದರೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ, ಕಂಪ್ಲಿ, ಬಳ್ಳಾರಿ ತಾಲೂಕುಗಳಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗಿದೆ. ಪರಿಣಾಮ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ವೇದಾವತಿ ನದಿ ತುಂಬಿ ಹರಿಯುತ್ತಿರುವುದರಿಂದ ತಾತ್ಕಾಲಿಕ ಸೇತುವೆ ಮುಳುಗಡೆಯಾಗಿದ್ದು ಆಂಧ್ರಪ್ರದೇಶ ಮತ್ತು ಕರ್ನಾಟಕ ಸಂಪರ್ಕ ಕಡಿತಗೊಂಡಿದೆ.

ಬಯಲುಸೀಮೆ ಸೇರಿ 6 ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ .

ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರವೂ ಮಳೆ ಮುಂದುವರಿದಿದ್ದು ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟಏರಿಕೆಯಾಗಿದೆ. 

ಇದೇ ವೇಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಕೊಂಚ ವಿರಾಮ ನೀಡಿದ್ದು ಅಲ್ಲಲ್ಲಿ ಅಲ್ಪಪ್ರಮಾಣದಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು,ಧಾರವಾಡ, ಹಾವೇರಿ, ಗದಗ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಿದೆ.

Latest Videos
Follow Us:
Download App:
  • android
  • ios