ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವೆಡೆ ಮಳೆ, ಕೆಲವೆಡೆ ಬಿಸಿಲು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದ್ದು, ಇನ್ನೂ ಕೆಲವೆಡೆ ಬಿಸಿಲಿನ ವಾತಾವರಣವಿತ್ತು. ಪ್ರವಾಹದ ನಂತರ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಮಾತ್ರ ಗುಡುಗು ಸಹಿತ ಭಾರೀ ಮಳೆಯಾಗಿದೆ.

Heavy rain lashes in several Parts of Chikkamagaluru

ಚಿಕ್ಕಮಗಳೂರು(ಆ.20): ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದ್ದು, ಇನ್ನೂ ಕೆಲವೆಡೆ ಬಿಸಿಲಿನ ವಾತಾವರಣವಿತ್ತು. ಪ್ರವಾಹದ ನಂತರ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಮಾತ್ರ ಗುಡುಗು ಸಹಿತ ಭಾರೀ ಮಳೆಯಾಗಿದೆ.

ಜಿಲ್ಲೆಯ ಕೆಲವೆಡೆ ತುಂತುರು ಮಳೆ ಬಂದಿದ್ದು, ಹಲವೆಡೆ ಬಿಸಿಲಿನ ವಾತಾವರಣ ಇತ್ತು. ಆದರೆ, ಚಿಕ್ಕಮಗಳೂರು ನಗರದಲ್ಲಿ ಮಧ್ಯಾಹ್ನ 12 ಗಂಟೆಯ ವೇಳೆಗೆ ಗುಡುಗು ಸಹಿತ ಮಳೆ ಬಂದಿತು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿಯಿತು. ಬಳಿಕ ಬಿಸಿಲು ಮುಂದುವರಿಯಿತು. ಚಿಕ್ಕಮಗಳೂರು ಗ್ರಾಮಾಂತರ ಪ್ರದೇಶದಲ್ಲೂ ಮಳೆ ಬಂದಿತು. ಮೂಡಿಗೆರೆ, ಎನ್‌.ಆರ್‌.ಪುರ, ಶೃಂಗೇರಿ ತಾಲೂಕುಗಳಲ್ಲಿ ಬೆಳಗ್ಗೆ ತುಂತುರು ಮಳೆಬಂದಿತು.

ಚಿಕ್ಕಮಗಳೂರು: ನೆರೆ ಸಂತ್ರಸ್ತರ ಮನೆಗಳಿಗೆ ಹಾಸಿಗೆ, ಸ್ಟೌ, ಬಟ್ಟೆ

Latest Videos
Follow Us:
Download App:
  • android
  • ios