ಶಿವಮೊಗ್ಗದಲ್ಲಿ ಭಾರೀ ಮಳೆ : ಜಲಾಶಯದಲ್ಲಿ ಏರಿದ ನೀರಿನ ಮಟ್ಟ
ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಲೆನಾಡು ಪ್ರದೇಶಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಿದೆ.
ಶಿವಮೊಗ್ಗ (ಸೆ.20): ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಿಸಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಹೆಚ್ಚಿದೆ.
ಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ಒಟ್ಟು 50 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಈ ಬಗ್ಗೆ ಬಿಆರ್‌ಪಿ ಎಇಇ ಮಂಜುನಾಥ್ ಮಾಹಿತಿ ನೀಡಿದ್ದು, ಈ ಮೊದಲು ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗಿದ್ದು, ಮತ್ತೆ 30 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ ಎಂದು ಹೇಳಿದ್ದಾರೆ.
ಭಾರೀ ಮಳೆ : ಕೃಷ್ಣ ಮಠಕ್ಕೆ ನುಗ್ಗಿದ ನೀರು, ಪ್ರವಾಹ ಸದೃಶ ವಾತಾವರಣ
ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಮತ್ತೆ 45 ಸಾವಿರ ಕ್ಯೂಸೆಕ್ಸ್ ನೀರನ್ನು ಕ್ರಸ್ಟ್ ಗೇಟ್ ಮೂಲಕ ಬಿಡಲಾಗುತ್ತಿದೆ. ಇನ್ನು ಇದೇ ವೇಳೆಯಲ್ಲಿ 5 ಕ್ಯೂಸೆಕ್ ನೀರನ್ನು ಕೆನಾಲ್ ಮೂಲಕ ಹರಿಸಲಾಗುತ್ತಿದೆ ಎಂದರು.
ಮಲೆನಾಡು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 50 ಸಾವಿರ ನಿರು ಹರಿದು ಬಂದಿದೆ.
"