ಉಡುಪಿ(ಆ.02): ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು, ಶನಿವಾರದಿಂದ ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಗಾಳಿಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿವೆ.

ಈ ಸಂದರ್ಭದಲ್ಲಿ 115 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, ಆದ್ದರಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನವನ್ನು ಬಿಟ್ಟುಹೋಗಬಾರದು, ನದಿ ಮತ್ತು ಸಮುದ್ರ ತೀರದ ಜನರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಮಳೆಯ ಸಂದರ್ಭದಲ್ಲಿ ಜನರು ವಿದ್ಯುತ್‌ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಲ್ಲಿಯೇ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ.

ಯಡಿಯೂರಪ್ಪಗೆ ಕೌಂಟರ್ ಕೊಡೋಕೆ ಡಿಸಿಎಂಗಳನ್ನ ಮಾಡಿದ್ದು: ಜಾರಕಿಹೊಳಿ

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಇದ್ದರೂ ಶನಿವಾರ ಸಾಧಾರಣ ಮಳೆಯಾಗಿದೆ, ಶುಕ್ರವಾರ ರಾತ್ರಿ ಒಂದೆರೆಡು ಬಾರಿ ಲಘು ಮಳೆಯಾಗಿತ್ತು, ಶನಿವಾರ ಹಗಲಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಹನಿ ಮಳೆಯಾಗಿದೆ. ಶನಿವಾರ ಮುಂಜಾನೆವರೆಗೆ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 24.00 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 41.00 ಮಿ.ಮೀ., ಕುಂದಾಪುರ ತಾಲೂಕಿನಲ್ಲಿ 12.00 ಮಿ.ಮೀ., ಕಾರ್ಕಳ ತಾಲೂಕಿನಲ್ಲಿ 21.00 ಮಿ.ಮೀ. ಮಳೆ ದಾಖಲಾಗಿದೆ.