ಉಡುಪಿ(ಜು.02): ರಾಜ್ಯ ಹವಾಮಾನ ಇಲಾಖೆ ಉಡುಪಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ರಾಜ್ಯ ಹವಾಮಾನ ಇಲಾಖೆಯ ಸೂಚನೆ ನೀಡಿದ ಹವಾಮಾನ ಇಲಾಖೆ ಜುಲೈ 5ರವರೆಗೆ ಧಾರಾಕಾರ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

ಜುಲೈ ನಾಲ್ಕಕ್ಕೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಮೂರು ದಿನಗಳ ಕಾಲ ಎಲ್ಲೋ ಅಲರ್ಟ್ ಎಂದು ಹೇಳಿದೆ. ಕಳೆದ 24 ಗಂಟೆಯಲ್ಲಿ ಉಡುಪಿಯಲ್ಲಿ 34, ಕುಂದಾಪುರ 17 ಮಿಲಿ ಮೀಟರ್ ಮಳೆ ದಾಖಲಾಗಿದೆ. ಕಾರ್ಕಳ ತಾಲೂಕಿನಲ್ಲಿ 24 ಮಿಲಿ ಮೀಟರ್ ಮಳೆಯಾಗಿದೆ.

3 ಪರೀಕ್ಷೆ ಬರೆದು, ನಾಲ್ಕನೇ ಪರೀಕ್ಷೆ ತಯಾರಿಯಲ್ಲಿದ್ದ SSLC ವಿದ್ಯಾರ್ಥಿನಿಗೆ ಕೊರೋನಾ..!

ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಬೆಳಗ್ಗೆಯಿಂದ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಹಗಲಿನಲ್ಲಿ ವಿಶ್ರಾಂತಿ ಪಡೆಯುವ ಮಳೆ ಸಂಜೆಯಾಗುತ್ತಿದ್ದಂತೆ ಜೋರಾಗಿ ಸುರಿಯುತ್ತಿದೆ. ಬುಧವಾರ ಹಗಲಿನಲ್ಲಿ ಬಿಸಿಲಿತ್ತು. ರಾತ್ರಿ ಉತ್ತಮ ಮಳೆಯಾಗಿದೆ.

ಜು.4ರಂದು ಕುವೈಟ್‌ ಕನ್ನ​ಡಿ​ಗ​ರಿಗೆ ಮಂಗಳೂರಿಗೆ ಚಾರ್ಟರ್ಡ್ ವಿಮಾನ

ಇದರಿಂದ ಕೃಷಿಕರು ಉಲ್ಲಸಿತರಾಗಿ ಬೇಸಾಯದಲ್ಲಿ ತೊಡಗಿದ್ದಾರೆ. ಬುಧವಾರ ಮುಂಜಾನೆವರೆಗೆ ಜಿಲ್ಲೆಯಲ್ಲಿ ಸರಸಾರಿ 32.00 ಮಿ.ಮಿ. ಮಳೆಯಾಗಿದೆ. ಅದರಲ್ಲಿ ಉಡುಪಿ ತಾಲೂಕಿನಲ್ಲಿ 37.00 ಮಿ.ಮೀ., ಕುಂದಾಪುರ ತಾಲೂಕಿನಲ್ಲಿ 39.00 ಮಿ.ಮೀ. ಮತ್ತು ಕಾರ್ಕಳ ತಾಲೂಕಿನಲ್ಲಿ 20.00 ಮಿ.ಮೀ. ಮಳೆಯಾಗಿದೆ.