ಭಾರೀ ಮಳೆ, ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜಾ

ಮಲೆನಾಡು. ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಭಾರೀ ಮಳೆ  ಕಾರಣಕ್ಕೆ ಹಲವು ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.

Heavy Rain Shivamogga Uttarara Kannada Bagalkot, Belagavi chikkamagaluru schools Shut

ಮಂಗಳೂರು/ಕಾರವಾರ/ಬೆಳಗಾವಿ[ಆ. 05] ಭಾರೀ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಮುನ್ನಚ್ಚರಿಕೆ ಕ್ರಮಗಳನ್ನು ತಿಳಿಸಿದೆ. ಮುಂಜಾಗೃತಾ ಕ್ರಮವಾಗಿ ಯಾವ ಯಾವ ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಇಲ್ಲಿದೆ ವಿವರ. 

ದ.ಕನ್ನಡ ಜಿಲ್ಲೆಯ ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲೆಗಳಿಗೆ ರಜೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ ತಾಲೂಕಿನ ಶಾಲೆಗಳಿಗೆ 2 ದಿನ[ಆ. 6,7] ರಜೆ ಘೋಷಿಸಲಾಗಿದೆ.

ಕೊಡಗಿನಲ್ಲಿ ರೆಡ್ ಅಲರ್ಟ್

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದಿ ಇಡೀ ಜಿಲ್ಲೆಯ ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ,  ಎನ್.ಆರ್.ಪುರ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದ್ದು ನ ಶನಿವಾರ ಪೂರ್ಣ ಪ್ರಮಾಣದ ಶಾಲೆ ನಡೆಸಲು ಡಿಡಿಪಿಐ ಆದೇಶ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ  ನೀಡಲಾಗಿದೆ. ಇನ್ನು ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೂ ರಜೆ ನೀಡಲಾಗಿದೆ.

Latest Videos
Follow Us:
Download App:
  • android
  • ios