ಮಂಗಳೂರು(ಜೂ.18): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಇನ್ನಷ್ಟುಚುರುಕುಗೊಂಡಿದ್ದು ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಕರಾವಳಿಯಲ್ಲಿ ಬುಧವಾರ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದ ಹವಾಮಾನ ಇಲಾಖೆ ಜೂ.18ರ ಬಳಿಕ ನಾಲ್ಕೈದು ದಿನಗಳ ಕಾಲ ಹಳದಿ ಅಲರ್ಟ್‌ ಘೋಷಣೆ ಮಾಡಿದೆ.

ಜಿಲ್ಲೆಯಲ್ಲಿ ಬೆಳಗ್ಗಿನ ವೇಳೆ ಉತ್ತಮ ಮಳೆಯಾಗಿದ್ದು, ದಿನವಿಡಿ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಬಳಿಕ ಆಗಾಗ ಧಾರಾಕಾರ ಮಳೆ ಸುರಿದಿದೆ.

ಮಂಗಳೂರಿನ ಕೆ.ಎಸ್‌. ರಾವ್‌ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ಓಡಾಟ ನಡೆಸಲು ಬಹಳಷ್ಟುತ್ರಾಸವಾಗಿತ್ತು. ಉರ್ವದ ಕೊಟ್ಟಾರ ಬಳಿ ಮಳೆ ನೀರು ನಿಂತು ವಾಹನ ಸವಾರರಿಗೆ ಕಿರಿಕಿರಿ ತಂದರೆ ಪಂಪ್‌ವೆಲ್‌ ಮೇಲ್ಸೇತುವೆಯ ಕೆಳಭಾಗದಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ಹಳ್ಳದಂತಾಗಿತ್ತು.

14 ಕಲ್ಲಿನ ಕೋರೆಗಳಿಗೆ ಲೋಕಾಯುಕ್ತ ದಾಳಿ

ಪಡೀಲ್‌ ಅಂಡರ್‌ಪಾಸ್‌ನಲ್ಲೂ ಮಳೆ ನೀರು ನಿಂತು ಸಮಸ್ಯೆಯಾಗಿತ್ತು. ಮಂಗಳೂರಿನ ಬಹಳಷ್ಟುತಗ್ಗು ಪ್ರದೇಶದಲ್ಲಿ ಮಳೆ ನೀರು ನುಗ್ಗಿ ಸಮಸ್ಯೆಯಾಗಿರುವ ಕುರಿತು ದೂರುಗಳು ಜಿಲ್ಲಾ ಕಂಟ್ರೋಲ್‌ ರೂಂನಲ್ಲಿ ದಾಖಲಾಗಿವೆ. ಉಳಿದಂತೆ ಹೆಚ್ಚಿನ ಹಾನಿ ಸಂಭವಿಸಿಲ್ಲ.