ಮಂಗಳೂರು [ಆ.26]: ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆ.30ರವರೆಗೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದ್ದು, ಉಳಿದಂತೆ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮೇಲ್ಮೈ ಸುಳಿಗಾಳಿ ಪ್ರಭಾವ ಕಡಿಮೆಯಾದ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣವೂ ತಗ್ಗಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದ ಮಳೆ ಮುಂದುವರೆಯಲಿದೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉಳಿದಂತೆ ರಾಜ್ಯಾದ್ಯಂತ ಸಾಧಾರಣದಿಂದ ಕೂಡಿದ ಚದುರಿದಂತೆ ಮಳೆಯಾಗಲಿದೆ. ಕೆಲವು ಕಡೆ ಮಾತ್ರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆ.26ರಿಂದ 28ವರೆಗೆ ಕರಾವಳಿಯ ಸಮುದ್ರ ತೀರದಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದೂ ಹೇಳಿದೆ.