ಬೆಂಗಳೂರು (ಫೆ.23):  ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದೂ ಗುಡುಗು ಸಹಿತ ಧಾರಾಕಾರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ದಕ್ಷಿಣ ಒಳನಾಡು ಭಾಗದಲ್ಲಿ ಕಳೆದ ಮೂರು ದಿನದಿಂದಲೂ ಮಳೆ ಸುರಿದಿದೆ. ಇದೀಗ ಮತ್ತದೇ ಭಾಗದ ಎಲ್ಲ ಜಿಲ್ಲೆಗಳಲ್ಲಿ   ಗುಡುಗು ಸಹಿತ ಮಳೆ ಸುರಿಯಲಿದೆ. ನಂತರ ಮಳೆಯ ಪ್ರಮಾಣ ತುಸು ತಗ್ಗಲಿದ್ದು, ಫೆ.24ರಂದು ಅಲ್ಲಲ್ಲಿ ಹಗುರ ಮಳೆಯ ಸಿಂಚನವಾಗಬಹುದು. 

ಕೊಡಗಿನಲ್ಲಿ ಸುರಿದ ಆಲಿಕಲ್ಲು ಮಳೆ: ದಕ್ಷಿಣ ಕಾಶ್ಮೀರದಲ್ಲಿ ಸ್ನೋ ಫಾಲ್ ರೀತಿ .

ಈ ಮಳೆ ನಿರೀಕ್ಷಿತ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಆಗಾಗ ಬಿಸಿಲು, ಮೋಡ ಕವಿದ ವಾತಾವರಣ ಕಂಡುಬರಲಿದೆ. ತಾಪಮಾನ ಕನಿಷ್ಠ 17ರಿಂದ 19 ಹಾಗೂ ಗರಿಷ್ಠ 27ರಿಂದ 30 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು ಎಂದು ವರದಿಯಾಗಿದೆ.

ಶಿವಮೊಗ್ಗ, ಶೃಂಗೇರಿ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಕೆಲವು ಪ್ರದೇಶಗಳಲ್ಲಿ  ಮಳೆ ಬಿದ್ದಿದೆ.