ಬೆಂಗಳೂರು[ಮಾ.13]: ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುವವರ ಚಿಕಿತ್ಸಾ ವೆಚ್ಚವನ್ನು ‘ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ’ ಯೋಜನೆಯಡಿ ಭರಿಸಲು ಅಗತ್ಯ ಕ್ರಮ ವಹಿಸಿರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಪ್ರಸ್ತುತ ‘ಆಯುಷ್ಮಾನ್ ಯೋಜನೆಯಡಿ 1600 ಪ್ರಾಥಮಿಕ, ದ್ವಿತೀಯ ಹಂತದ ಹಾಗೂ ಸಂಕೀರ್ಣ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಕೊರೋನಾ ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆ

ಇವುಗಳನ್ನು 1600 ಪ್ರೊಸೀಜರ್ಸ್‌ ಎಂದು ಪರಿಗಣಿಸಿದ್ದು, ಪ್ರಸ್ತುತ ಕೊರೋನಾ ಸೋಂಕಿನಿಂದ  ಉಂಟಾಗುವ ವಿವಿಧ ಕಾಯಿಲೆಗಳನ್ನು ಗುರುತಿಸಿ ಪ್ರೊಸೀಜರ್ ಕೋಡ್ ನೀಡಲಾಗಿದೆ. ಇನ್‌ಫ್ಲ್ಯುಯೆಂಜಾಗೆ ಸಂಬಂಧಿಸಿದ ಕಾಯಿಲೆಗಳನ್ನು ಗುರುತಿಸಿ ಆರೋಗ್ಯ ಕರ್ನಾಟಕದಡಿ ವೆಚ್ಚ ಭರಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.