Asianet Suvarna News Asianet Suvarna News

ಇ- ಖಾತಾ ಗೊಂದಲ ಪರಿಹರಿಸಲು ಎಆರ್‌ಒ ಕಚೇರಿಗಳಲ್ಲಿ ಹೆಲ್ಪ್‌ಡೆಸ್ಕ್‌: ಸಚಿವ ಕೃಷ್ಣ ಬೈರೇಗೌಡ

ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ ಎಂದು ಸ್ಪಷ್ಟಪಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ 

Helpdesk at ARO offices to resolve e khatha queries in bengaluru Says Minister Krishna Byre Gowda grg
Author
First Published Oct 10, 2024, 11:17 AM IST | Last Updated Oct 10, 2024, 11:17 AM IST

ಬೆಂಗಳೂರು(ಅ.10): ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ- ಖಾತಾ ಪಡೆಯಲು ಆಗುತ್ತಿರುವ ತೊಂದರೆ ಬಗೆಹರಿಸಲು ಎಲ್ಲಾ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಕಚೇರಿಗಳಲ್ಲಿ ಹೆಲ್ಸ್ ಡೆಸ್ಕ್ ತೆರೆಯಲಾಗುತ್ತಿದೆ. ಇ-ಖಾತಾ ಪಡೆಯಲು ಯಾವುದೇ ಅಂತಿಮ ಗಡುವು ಇಲ್ಲ. ಹೀಗಾಗಿ ಆತುರ ಹಾಗೂ ಆತಂಕವಿಲ್ಲದೆ ಖಾತಾ ಪಡೆಯಿರಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕರೆ ನೀಡಿದ್ದಾರೆ. 

ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾಗೆ ಸರ್ಕಾರ ಸರ್ಕಾರ ಸಮಯ ನಿಗದಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ. ಆದರೆ, ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ ಎಂದು ಸ್ಪಷ್ಟಪಡಿಸಿದರು. 

ಬೆಂಗಳೂರಿನ ಎ-ಖಾತಾ, ಬಿ-ಖಾತಾ ಆಸ್ತಿಗಳನ್ನು ಡಿಜಿಟಲ್ ಇ-ಖಾತಾ ಮಾಡಿದ ಬಿಬಿಎಂಪಿ: ಡೌನ್‌ಲೋಡ್ ಭಾರಿ ಸುಲಭ!

ನಕಲಿ ನೋಂದಣಿ ಪ್ರಕರಣಗಳನ್ನು ತಡೆವ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ- ಖಾತಾ ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರ ಸೂಚನೆ ಮೇರೆಗೆ ಪಾಲಿಕೆಯ ವಿಶೇಷ ಆಯುಕ್ತರ ಜೊತೆ ಚರ್ಚಿಸಿ ಇ-ಖಾತಾ ಪ್ರಕ್ರಿಯೆಯನ್ನೂ ಸರಳೀಕರಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಸೂಕ್ತ ಕ್ರಮ ಜರುಗಿಸಲಾಗಿದೆ ಎಂದರು. 

ಮನೆಯಿಂದಲೇ ಪಡೆಯಬಹುದು ಇ-ಖಾತಾ: 

ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌಗ್ಲೋಡ್ ಮಾಡಿಕೊಳ್ಳಬಹುದು. ಕಾವೇರಿ-2 ಹಾಗೂ ಬಿಬಿಎಂಪಿ ಸಹಯೋಗದಲ್ಲಿ ರೂಪಿಸಿರುವ ಬಿಬಿಎಂಪಿ ವೆಬ್ ಸೈಟ್‌ನಲ್ಲಿನ ಆಯ್ಕೆಗೆ ಹೋಗಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಖಾತಾ ಪಡೆಯಬಹುದು ಎಂದು ತಿಳಿಸಿದರು.ಇ-ಖಾತಾ ಕುರಿತು ಗೊಂದಲಗಳಿಗೆ ಸಹಾಯವಾಣಿ: 080-68265316 ಸಂಪರ್ಕಿಸಿ.

Latest Videos
Follow Us:
Download App:
  • android
  • ios