ಮಳೆಗಾಲವಾಗಿದ್ದರೂ ರಾಜ್ಯದ ಹಲವು ಕಡೆ ಕುಡಿಯುವ ನೀಡಿಗೆ ಸಮಸ್ಯೆ ಇದ್ದು, ಬರಗಾಲ ಹಾಗೂ ಪ್ರಕೃತಿ ವಿಕೋಪಗಳನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಲ್ಪ್‌ಲೈನ್ ವ್ಯವಸ್ಥೆ ಮಾಡಲಾಗಿದೆ.
ತುಮಕೂರು(ಆ.01): ಮಳೆಗಾಲವಾಗಿದ್ದರೂ ರಾಜ್ಯದ ಹಲವು ಕಡೆ ಕುಡಿಯುವ ನೀಡಿಗೆ ಸಮಸ್ಯೆ ಇದ್ದು, ಬರಗಾಲ ಹಾಗೂ ಪ್ರಕೃತಿ ವಿಕೋಪಗಳನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಲ್ಪ್‌ಲೈನ್ ವ್ಯವಸ್ಥೆ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಲ್ಲಿನ ಉಪವಿಭಾಗ ವ್ಯಾಪ್ತಿಗೊಳಪಡುವ ತುಮಕೂರು, ಗುಬ್ಬಿ ಹಾಗೂ ಕುಣಿಗಲ್ ತಾಲೂಕುಗಳಲ್ಲಿ ಪ್ರಕೃತಿ ವಿಕೋಪ ಹಾಗೂ ಬರಗಾಲದ ಸಮರ್ಪಕ ನಿರ್ವಹಣೆಗಾಗಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಪ್ರಕೃತಿ ವಿಕೋಪ ಹಾಗೂ ಬರಗಾಲಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 0816-2278493ನ್ನು ಸಂಪರ್ಕಿಸಬಹುದೆಂದು ಉಪವಿಭಾಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
