ಆಪ್ತ ಸಹಾಯಕಿಗೆ ಸೋಂಕು; ನಿಂಬಾಳ್ಕರ್ ಕ್ವಾರಂಟೈನ್
ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಕೊರೋನಾ ಬೆನ್ನು ಬಿಡದಂತೆ ಕಾಡುತ್ತಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರ ಕಚೇರಿ ಸಿಬ್ಬಂದಿಯೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಬೆಂಗಳೂರು(ಜು.28): ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಕೊರೋನಾ ಬೆನ್ನು ಬಿಡದಂತೆ ಕಾಡುತ್ತಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರ ಕಚೇರಿ ಸಿಬ್ಬಂದಿಯೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಆಡಳಿತ ವಿಭಾಗದ ಹೆಚ್ಚುವರಿ ಆಯುಕ್ತರಾಗಿರುವ ಐಪಿಎಸ್ ಅಧಿಕಾರಿ ನಿಂಬಾಳ್ಕರ್ ಅವರ ಆಪ್ತ ಸಹಾಯಕಿಯೊಬ್ಬರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನಿಂಬಾಳ್ಕರ್ ಅವರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಕರ್ನಾಟಕ ಶೀಘ್ರ ದೇಶದ ಕೊರೋನಾ ಹಾಟ್‌ಸ್ಪಾಟ್: ರಾಜ್ಯಕ್ಕೆ ಹೊಸ ಆತಂಕ!
ಕೊರೋನಾ ಅವಧಿಯಲ್ಲಿ ಬಹಳ ಎಚ್ಚರಿಕೆಯಿಂದ ಇರುವಂತೆ ಹಾಗೂ ಸೋಂಕು ತಗುಲಿದರೂ ಆತ್ಮಸ್ಥೆರ್ಯ ಕಳೆದುಕೊಳ್ಳದಂತೆ ಸಿಬ್ಬಂದಿಗೆ ಧೈರ್ಯ ತುಂಬಿದ್ದಾರೆ. ನಗರದಲ್ಲಿ ಸೋಮವಾರ 1,470 ಹೊಸ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 46,923ಕ್ಕೆ ಏರಿಕೆಯಾಗಿದೆ. 26 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ನಗರದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಒಟ್ಟು 917ಕ್ಕೆ ತಲುಪಿದೆ.