ಆಲಮಟ್ಟಿ ಡ್ಯಾಂನಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಪ್ರವಾಹ ಭೀತಿ, ಕೃಷ್ಣಾನದಿ ತೀರದಲ್ಲಿ ಹೈ ಅಲರ್ಟ್..!
ಆಲಮಟ್ಟಿ ಡ್ಯಾಂನಿಂದ ನಿರಂತರವಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಡ್ಯಾಂಗೆ ಸದ್ಯ 3 ಲಕ್ಷ ಕ್ಯೂಸೆಕ್ ಒಳ ಹರಿವು ಇದೆ. ಹೀಗಾಗಿ ಯಾದಗಿರಿ ನಾರಾಯಣಪುರ ಡ್ಯಾಂಗೆ ನೀರು ರಿಲೀಸ್ ಮಾಡಲಾಗಿದೆ. ಕೃಷ್ಣಾನದಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ವಿಜಯಪುರ(ಜು.26): ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗಿತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿರುವ ಆಲಮಟ್ಟಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಆಲಮಟ್ಟಿ ಡ್ಯಾಂನಿಂದ ಮತ್ತೆ 3 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ.
ಆಲಮಟ್ಟಿ ಡ್ಯಾಂನಿಂದ ನಿರಂತರವಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಡ್ಯಾಂಗೆ ಸದ್ಯ 3 ಲಕ್ಷ ಕ್ಯೂಸೆಕ್ ಒಳ ಹರಿವು ಇದೆ. ಹೀಗಾಗಿ ಯಾದಗಿರಿ ನಾರಾಯಣಪುರ ಡ್ಯಾಂಗೆ ನೀರು ರಿಲೀಸ್ ಮಾಡಲಾಗಿದೆ.
ಆಲಮಟ್ಟಿ ಡ್ಯಾಂಗೆ ಅಪಾರ ಪ್ರಮಾಣದ ಒಳ ಹರಿವು: ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಭೀತಿ!
ಸದ್ಯ 2.09 ಲಕ್ಷ ಒಳ ಹರಿವು ಇದ್ದು, ಕೃಷ್ಣಾನದಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಎದುರಾಗುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳ ಹಾಗೂ ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.