Asianet Suvarna News Asianet Suvarna News

ಸಂತ್ರಸ್ತರಿಗೆ ತಿಂಗಳೊಳಗೆ ಪರಿಹಾರ ನೀಡಿ: ಹೈಕೋರ್ಟ್‌

ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟೀಸ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ| ಸಂತ್ರಸ್ತರಿಗೆ ಪರಿಹಾರ ಮೊತ್ತವಾದ 14,100 ರು. ಹಾಗೂ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಡಲು ನಿಗದಿಪಡಿಸಿರುವ 29,000 ರು. ಅನ್ನು ಒಂದು ತಿಂಗಳಲ್ಲಿ ಪಾವತಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್| 

High Court Has Directed to Government for Give Victims Relief within Month grg
Author
Bengaluru, First Published Dec 2, 2020, 7:09 AM IST

ಬೆಂಗಳೂರು(ಡಿ.02): ಅಕ್ರಮ ಬಾಂಗ್ಲಾ ವಲಸಿಗರೆಂದು ಸ್ಥಳೀಯ ವಲಸೆ ಕಾರ್ಮಿಕರನ್ನು ಬಲವಂತವಾಗಿ ತೆರವುಗೊಳಿಸಿದ ಪ್ರಕರಣದಲ್ಲಿ ಸೂರು ಕಳೆದುಕೊಂಡವರಿಗೆ ತಾತ್ಕಾಲಿಕ ಶೆಡ್‌ ನಿರ್ಮಿಸಲು ನಿಗದಿಪಡಿಸಿರುವ ಮೊತ್ತವನ್ನು ಒಂದು ತಿಂಗಳಲ್ಲಿ ಪಾವತಿಸುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟೀಸ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು.

ಶಾಕಿಂಗ್;  ಕರ್ನಾಟಕದ ಮಾಜಿ ಸಚಿವರನ್ನೇ ಕಿಡ್ನಾಪ್ ಮಾಡಿ ಹಲ್ಲೆ!

ಸಂತ್ರಸ್ತರಿಗೆ ಪರಿಹಾರ ಮೊತ್ತವಾದ 14,100 ರು. ಹಾಗೂ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಡಲು ನಿಗದಿಪಡಿಸಿರುವ 29,000 ರು. ಅನ್ನು ಒಂದು ತಿಂಗಳಲ್ಲಿ ಪಾವತಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತು. ಅಲ್ಲದೆ, ಅರ್ಹ ಸಂತ್ರಸ್ತರು ಪರಿಹಾರ ಪಡೆಯಲು ತಮ್ಮ ಬ್ಯಾಂಕ್‌ ವಿವರಗಳನ್ನು ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು 2021ರ ಜ.13ಕ್ಕೆ ಮುಂದೂಡಿತು.
 

Follow Us:
Download App:
  • android
  • ios