*   ಬಿಬಿಎಂಪಿಗೆ ಹೈಕೋರ್ಟ್‌ ನ್ಯಾಯಾಂಗ ನಿಂದನೆ ಎಚ್ಚರಿಕೆ*  ರಸ್ತೆ ಗುಂಡಿ ಮುಚ್ಚಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ*  ಬಿಬಿಎಂಪಿಗೆ ತರಾಟೆ 

ಬೆಂಗಳೂರು(ಜೂ.01): ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.

ನಗರದ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ವಿಜಯನ್‌ ಮೆನನ್‌ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ರಸ್ತೆ ಗುಂಡಿ ಮುಚ್ಚಲು ಹೈಕೋರ್ಟ್‌ ನೀಡಿರುವ ಆದೇಶವನ್ನು ಬಿಬಿಎಂಪಿ ಪಾಲಿಸುತ್ತಿಲ್ಲ. ನಿಮ್ಮ ಸಮಸ್ಯೆ ಏನಾದರೂ ಇರಬಹುದು. ಅದು ನ್ಯಾಯಾಲಯಕ್ಕೆ ಬೇಕಿಲ್ಲ. ರಸ್ತೆ ರಿಪೇರಿಯಾಗಬೇಕಷ್ಟೆ. ನ್ಯಾಯಾಲಯದ ಆದೇಶಗಳನ್ನು ಬಿಬಿಎಂಪಿ ಪಾಲಿಸುತ್ತಿಲ್ಲ. ಜೂನ್‌ 2ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ ಎನ್ನಲಾಗುತ್ತಿದ್ದರೂ ಯಾವುದೇ ಕೆಲಸವಾಗಿಲ್ಲ. ಪಾಲಿಕೆ ಸೂಕ್ತ ಪರಿಹಾರಗಳೊಂದಿಗೆ ಬರಬೇಕು. ತಪ್ಪಿದರೆ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತೀಕ್ಷ್ಣವಾಗಿ ನುಡಿಯಿತು.

ಪತ್ನಿಗೆ ಆದಾಯವಿದ್ದರೂ ಪತಿ ಜೀವನಾಂಶದಿಂದ ವಂಚಿತಳಾಗಲು ಸಾಧ್ಯವಿಲ್ಲ, ಹೈಕೋರ್ಟ್ ಮಹತ್ವದ ತೀರ್ಪು!

ಗುಂಡಿ ಮುಚ್ಚಲು ಗಂಟೆಗೆಷ್ಟುಪಾವತಿ?; ಲೆಕ್ಕ ಕೇಳಿದ ಹೈಕೋರ್ಟ್‌

ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಬಳಸಲಾಗುತ್ತಿರುವ ಪೈಥಾನ್‌ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟು ಹಣ ಪಾವತಿಸಲಾಗುತ್ತದೆ ಎಂಬ ಬಗ್ಗೆ ವೈಯಕ್ತಿಕವಾಗಿ ಪರಿಶೀಲನೆ ನಡೆಸಿ ಜೂ.6ರಂದು ವರದಿ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ಹಾಜರಾಗಿ, ಬಿಬಿಎಂಪಿ ಮುಖ್ಯ ಆಯುಕ್ತರು, ಪೈಥಾನ್‌ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟುಹಣ ಪಾವತಿಸಲಾಗುತ್ತದೆ ಎಂಬ ಬಗ್ಗೆ ವೈಯಕ್ತಿಕವಾಗಿ ಪರಿಶೀಲನೆ ನಡೆಸಿ ನಿರ್ಧರಿಸಲು ಉದ್ದೇಶಿಸಿದ್ದಾರೆ. ಅಲ್ಲದೆ, ಫೈಥಾನ್‌ ಯಂತ್ರ ಬಳಸಿ ಗುಂಡಿ ಮುಚ್ಚುವ ಕಾರ್ಯದ ಗುತ್ತಿಗೆ ಪಡೆದಿರುವ ಅಮೆರಿಕನ್‌ ರೋಡ್‌ ಟೆಕ್ನಾಲಜೀಸ್‌ ಸೊಲ್ಯೂಷನ್ಸ್‌ಗೆ (ಎಆರ್‌ಟಿಸಿ) ಬಾಕಿ ಹಣ ಪಾವತಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು ಎಂಬ ಕೋರಿದರು. ಆ ಮನವಿ ಒಪ್ಪಿ ಜೂನ್‌ 6ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ನ್ಯಾಯಪೀಠ, ಅಂದೇ ವರದಿ ಸಲ್ಲಿಸಬೇಕು ಎಂದು ಪಾಲಿಕೆಯ ಮುಖ್ಯ ಆಯುಕ್ತರಿಗೆ ಸೂಚಿಸಿತು.

ಲೋಕೋಪಯೋಗಿ ಇಲಾಖೆಯಿಂದ .1,249 ನಿಗದಿ

ಇದಕ್ಕೂ ಮುನ್ನ ಎಆರ್‌ಟಿಎಸ್‌ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ವಾದ ಮಂಡಿಸಿ, 182 ಕಿ.ಮೀ ರಸ್ತೆ ಗುಂಡಿ ಮುಚ್ಚುವ ಕೆಲಸವನ್ನು ಎಆರ್‌ಟಿಎಸ್‌ ಪೂರ್ಣಗೊಳಿಸಿದೆ. ಆದರೆ, ರಸ್ತೆ ಗುಂಡಿ ಮುಚ್ಚಲು ಪೈಥಾನ್‌ ಯಂತ್ರ ಬಳಸಿರುವುದಕ್ಕೆ ಪ್ರತಿ ಗಂಟೆಗೆ ಎಷ್ಟುಹಣ ಪಾವತಿಸಲಾಗುತ್ತದೆ ಎಂಬುದನ್ನು ಬಿಬಿಎಂಪಿ ಇನ್ನೂ ನಿರ್ಧರಿಸಿಲ್ಲ. ಇದರಿಂದ ಈಗಾಗಲೇ ರಸ್ತೆ ಗುಂಡಿ ಮುಚ್ಚಿರುವುದಕ್ಕೆ ಯಾವುದೇ ಹಣ ನೀಡಿಲ್ಲ ಎಂದು ತಿಳಿಸಿದರು.

Divorce Fight ಮದ್ವೆಯಾಗಿ 6 ವರ್ಷವಾದ್ರೂ ನಡೆದಿಲ್ಲ ಫಸ್ಟ್ ನೈಟ್, ಬೀದಿಜಗಳವಾದ ಸೆಲೆಬ್ರೆಟಿ ಡಿವೋರ್ಸ್!

ಅಲ್ಲದೆ, ರಸ್ತೆ ಗುಂಡಿ ಮುಚ್ಚಲು ಪೈಥಾನ್‌ ಯಂತ್ರ ಬಳಸುವುದಕ್ಕೆ ಲೋಕೋಪಯೋಗಿ ಇಲಾಖೆ ನಿಗದಿಪಡಿಸಿರುವ ಪ್ರತಿ ಗಂಟೆಗೆ 1,249 ರು. ನೀಡುವಂತೆ ಎಆರ್‌ಟಿಎಸ್‌ ಕೋರಿದೆ. ಬಿಬಿಎಂಪಿ ಕಡಿಮೆ ಹಣ ನೀಡಲು ಮುಂದಾಗಿದೆ. ಈ ಬಗ್ಗೆ ಸಮಾಲೋಚಿಸಲು ಮೇ 27ರಂದು ಕರೆದಿದ್ದ ಸಭೆಯಲ್ಲಿ ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್‌ ಬಿ.ಎಸ್‌. ಪ್ರಹ್ಲಾದ್‌, ಎಆರ್‌ಟಿಎಸ್‌ ಕಂಪನಿಯ ವ್ಯವಸ್ಥಾಪಕಿಯ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದವರೂ ಕಂಪನಿಯ ಓರ್ವ ನಿರ್ದೇಶಕರಾಗಿದ್ದಾರೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪ್ರಹ್ಲಾದ್‌ ವಿರುದ್ಧ ಲಿಖಿತ ದೂರು ನೀಡಲಾಗಿದೆ ಎಂದು ತಿಳಿಸಿದರು. ಅದನ್ನು ಗಂಭೀರವಾಗಿ ಪರಗಣಿಸಿದ ಹೈಕೋರ್ಟ್‌, ಪ್ರಹ್ಲಾದ್‌ ವಿರುದ್ಧದ ದೂರಿನ ಬಗ್ಗೆ ಮುಖ್ಯ ಆಯುಕ್ತರು ಕೈಗೊಂಡಿರುವ ಕ್ರಮಗಳ ಕುರಿತು ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ಸೂಚಿಸಿತು.