ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚಳ ರಾಜ್ಯದಲ್ಲಿಯೇ ಅತ್ಯಧಿಕ ಕೋವಿಡ್‌ ಪ್ರಕರಣಗಳು ದ.ಕ.ದಲ್ಲಿ ಪತ್ತೆ

ಮಂಗಳೂರು(ಆ.09):  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಭಾನುವಾರ ರಾಜ್ಯದಲ್ಲಿಯೇ ಅತ್ಯಧಿಕ ಕೋವಿಡ್‌ ಪ್ರಕರಣಗಳು ದ.ಕ.ದಲ್ಲಿ ಪತ್ತೆಯಾಗಿವೆ. ಅಲ್ಲದೆ, ರಾಜ್ಯದಲ್ಲಿ ಭಾನುವಾರ ಮೃತಪಟ್ಟ20 ಮಂದಿಯಲ್ಲಿ 6 ಮಂದಿ ದಕ್ಷಿಣ ಕನ್ನಡದವರು!

ಶನಿವಾರ ಜಿಲ್ಲೆಯಲ್ಲಿ 342 ಮಂದಿಯಲ್ಲಿ ಕೋವಿಡ್‌ ಪಾಸಿಟಿವ್‌ ಕಂಡುಬಂದಿದ್ದರೆ, ಭಾನುವಾರ 438 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಇದು ಅತ್ಯಧಿಕ. ಬೆಂಗಳೂರು ನಗರದಲ್ಲಿ 348 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಉಡುಪಿಯಲ್ಲಿ 129, ಮೈಸೂರಲ್ಲಿ 98, ಹಾಸನ 80 ಮತ್ತು ಚಿಕ್ಕಮಗಳೂರಿನಲ್ಲಿ 52 ಪ್ರಕರಣಗಳು ಪತ್ತೆಯಾಗಿವೆ.

ಮತ್ತೆ ಕೊರೋನಾ ಹೆಚ್ಚಳ: ಆಸ್ಪತ್ರೆಗೆ ಸೇರುವ ಸೋಂಕಿತರ ಸಂಖ್ಯೆ ಏರಿಕೆ

ದ.ಕ. ಜಿಲ್ಲೆಯಲ್ಲಿ ಭಾನುವಾರ 311 ಮಂದಿ ಗುಣಮುಖರಾಗಿದ್ದಾರೆ. ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,03,184ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 98,303 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,466 ಸಾವು ವರದಿಯಾಗಿವೆ. ಪ್ರಸ್ತುತ 3,415 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ 83,353 ಮಾಸ್ಕ್ ಉಲ್ಲಂಘನೆ ಪ್ರಕರಣಗಳಲ್ಲಿ 1,01,18,517 ರು. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಉಡುಪಿ ಜಿಲ್ಲೆಯಲ್ಲಿ ಭಾನುವಾರ 5.018 ಮಂದಿಗೆ ಕೊವಿಡ್‌ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ 129 (ಶೇ 2.57) ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 8,15,543 ಮಂದಿಯನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 70,864 (ಶೇ 8.64) ಮಂದಿಗೆ ಸೋಂಕು ಪತ್ತೆಯಾಗಿದೆ. ಅವರಲ್ಲಿ 69,035 (ಶೇ 97.41) ಮಂದಿ ಗುಣಮುಖರಾಗಿದ್ದಾರೆ. ಈ ದಿನ 97 ಮಂದಿ ಗುಣಮುಖರಾಗಿದ್ದು, ಪ್ರಸ್ತುತ 1403 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

"

ಜಿಲ್ಲೆಯಲ್ಲಿ ಇದುವರೆಗೆ 426 (ಶೇ 0.60) ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಅಲ್ಲದೇ ಇದುವರೆಗೆ 50 ಸೋಂಕಿತರಲ್ಲಿ ಫಂಗಸ್‌ ಪತ್ತೆಯಾಗಿದ್ದು, ಅವರಲ್ಲಿ 5 ಮಂದಿ ಮೃತಪಟ್ಟಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona