Hijab Row: ಹಿಜಾಬ್‌ಗೆ ಅವಕಾಶ ಮಾಡಿಕೊಟ್ಟ ಗದಗದ 7 ಶಿಕ್ಷಕರು ಸಸ್ಪೆಂಡ್
* ಹಿಜಾಭ್ ಗೆ ಅವಕಾಶ ಮಾಡಿಕೊಟ್ಟ ಏಳು ಶಿಕ್ಷಕರ ಅಮಾನತು
* ಗದಗ ಜಿಲ್ಲೆಯಲ್ಲಿ ನಡೆದಿದ್ದ ಪರೀಕ್ಷೆ ವೇಳೆ ಹಿಜಾಬ್ ಗೆ ಅವಕಾಶ ನೀಡಿದ್ದರು
* ಹೈಕೋರ್ಟ್ ಆದೇಶ ಪಾಲನೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು
* SSLC ಪರೀಕ್ಷೆ ವೇಳೆ ಹಿಜಾಬ್ ಧರಿಸಿ ಬಂದಿದ್ದರು
ಗದಗ/ ಬೆಂಗಳೂರು(ಮಾ. 30) ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಹಿಜಾಬ್ (HIjab) ಧರಿಸಿದ್ದ ವಿದ್ಯಾರ್ಥಿನಿಯರಿಗೆ (Students) ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟ ಏಳು ಜನ ಶಿಕ್ಷಕರನ್ನು ಅಮಾನತು (Suspend) ಮಾಡಲಾಗಿದೆ.
ಉಡುಪಿಯಿಂದ ಆರಂಭಗೊಂಡ ಹಿಜಾಬ್ ವಿಚಾರ ಇಡೀ ದೇಶದಲ್ಲಿ ಸದ್ದು ಮಾಡಿತ್ತು. ಕರ್ನಾಟಕ ಹೈಕೋರ್ಟ್ (Karnataka High Court) ತ್ರಿಸದಸ್ಯ ಪೀಠ ಮಾರ್ಚ್ 15 ರಂದು ಸಮವಸ್ತ್ರ ಕಡ್ಡಾಯ ಎಂಬುದನ್ನು ತಿಳಿಸಿತ್ತು. ಈ ಮೂಲಕ ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಉಡುಗೆಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿತ್ತು.
ಶಿಕ್ಷಣಕ್ಕಿಂತ ಧರ್ಮ ಮೇಲು ಎಂಬುದನ್ನು ಸಾಬೀತು ಮಾಡಿದ ಉಡುಪಿ ಹಿಜಾಬ್ ಹೋರಾಟಗಾರ್ತಿಯರು
ಗದಗ ನಗರದ ಸಿ.ಎಸ್. ಪಾಟೀಲ ಪ್ರೌಢಶಾಲೆಯಲ್ಲಿ ಮಾರ್ಚ್ 28 ರಂದು ನಡೆದಿದ್ದ ಪ್ರಥಮ ಭಾಷೆ ಪರೀಕ್ಷೆ ವೇಳೆ ಹಿಜಬ್‍ಗೆ ಅವಕಾಶ ನೀಡಲಾಗಿತ್ತು. ಪರೀಕ್ಷಾ ಕೊಠಡಿಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳೆ ಹಿಜಬ್, ಬುರ್ಖಾ ಧರಿಸಿದ್ದ ಕೆಲ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಹಿನ್ನೆಲೆ ಐವರು ಮೇಲ್ಚಿಚಾರಕರು ಸೇರಿ ಏಳು ಜನರನ್ನು ಅಮಾನತು ಮಾಡಲಾಗಿದೆ.
ಸಿಎಂಗೆ ಸಾಹಿತಿಗಳ ಪತ್ರ: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಬೇಕು, ವಸ್ತ್ರ ಸಂಹಿತೆ ಕಡ್ಡಾಯ ಸುತ್ತೋಲೆಯನ್ನು ವಾಪಸ್ ಪಡೆಯಬೇಕು, ಧರ್ಮದ ಹೆಸರಿನಲ್ಲಿ ವ್ಯಾಪಾರ ನಿರ್ಬಂಧಕ್ಕೆ ಅವಕಾಶ ನೀಡಬಾರದು, ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಪ್ರಸ್ತಾಪ ಕೈಬಿಡಬೇಕು, ಶಾಂತಿಗೆ ಭಂಗ ತರುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಸಾಃಇತಿಗಳು ಮತ್ತು ಬುದ್ಧಿಜೀವಿಗಳು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು.
ಡಾ.ಕೆ. ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬೊಳುವಾರ ಮಹಮದ್ ಕುಂಞ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಬಂಜಗೆರೆ ಜಯಪ್ರಕಾಶ್ ಸೇರಿದಂತೆ ಸುಮಾರು 61 ಸಾಹಿತಿಗಳು ಸಹಿ ಮಾಡಿರುವ ಪತ್ರವನ್ನು ಮುಖ್ಯಮಂತ್ರಿಯವರಿಗೆ ರವಾನಿಸಲಾಗಿತ್ತು.ಹಿಜಾಬ್‌ಗೆ ಅವಕಾಶ ನೀಡದಿರುವುದರಿಂದ ಮುಸ್ಲಿಂ ಹೆಣ್ಣು ಮಕ್ಕಳ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಕಳೆದ ಎರಡು ವರ್ಷದಿಂದ ಶಾಲೆಗಳೇ ನಡೆದಿಲ್ಲ. ಬೆಳೆಯುವ ಮಕ್ಕಳು ಹಳೆಯ ಸಮವಸ್ತ್ರಗಳನ್ನು ತೊಡಲು ಆಗುವುದಿಲ್ಲ ಎಂದು ಹೇಳಿದ್ದರು.
ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಹಿಜಾಬ್ ಹೋರಾಟ ನಂತರ ರಾಜ್ಯದ ಹಲವು ಕಡೆ ಸದ್ದು ಮಾಡಿತು. ಹಿಜಾಬ್ ಬೇಕು ಜತೆಗೆ ಶಿಕ್ಷಣವೂ ಬೇಕು ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಪಟ್ಟು ಹಿಡಿದು ಕುಳಿತುಕೊಂಡರು. ಇದರ ಹಿಂದೆ ಕೇಸರಿ ಶಾಲಿನ ಹೋರಾಟವೂ ಆರಂಭವಾಯಿತು. ಹಿಜಾಬ್ ಗೆ ಅವಕಾಶ ಮಾಡಿಕೊಡುವುದಾದರೆ ಕೇಸರಿ ಶಾಲಿಗೂ ಅವಕಾಶ ಮಾಡಿಕೊಡಿ ಎಂದು ಹಿಂದು ಪರ ಸಂಘಟನೆಗಳು ಬೀದಿಗೆ ಇಳಿದವು.
ಕರ್ನಾಟಕ ಹೈಕೋರ್ಟ್ ಸಹ ಒಂದು ವಾರ ಕಾಲ ವಿಚಾರಣೆ ನಡೆಸಿ ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂಬುದನ್ನು ಹೇಳಿತು. ಜೊತೆಗೆ ಶಾಲೆಯಲ್ಲಿ ಯಾವ ಧಿರಿಸು ಧರಿಸಬೇಕು ಎಂಬುದನ್ನು ಶಾಲೆಗೆ ಬಿಡಲಾಯಿತು. ಧಾರ್ಮಿಕ ಉಡುಗೆಗಳಿಗೆ ಅವಕಾಶ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಯಿತು .