Asianet Suvarna News Asianet Suvarna News

Hindi Diwas: ರಾಜ್ಯದಲ್ಲಿ ಹಿಂದಿ ದಿವಸ ಆಚರಿಸುವವರು ಅಭಿಮಾನಶೂನ್ಯರು

ಕೇಂದ್ರ ಸರ್ಕಾರವು ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿದ್ದು, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಇದು ಸರಿಯಲ್ಲ ಎಂದು ಹಿಂದಿ ಹೇರಿಕೆ ವಿರೋಧಿಸಿ ನಗರದಲ್ಲಿ ಜೆಡಿಎಸ್ ಪಕ್ಷವು ಪ್ರತಿಭಟನೆ ನಡಸಿತು. ನಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜಾತ್ಯಾತೀತ ಜನತಾ ದಳ ಪಕ್ಷವು ಎಸಿಗೆ ಮನವಿ ಸಲ್ಲಿಸಿದರು.

Hindi diwas jds protest against who celebrate Hindi Diwas in karnatak rav
Author
First Published Sep 14, 2022, 9:57 PM IST

ವರದಿ: ವರದರಾಜ್ ಏಷ್ಯಾನೆಟ್ ಸುವರ್ಣನ್ಯೂಸ್, ದಾವಣಗೆರೆ

ದಾವಣಗೆರೆ (ಸೆ.14) :  ಕೇಂದ್ರ ಸರ್ಕಾರವು ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿದ್ದು, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಇದು ಸರಿಯಲ್ಲ ಎಂದು ಹಿಂದಿ ಹೇರಿಕೆ ವಿರೋಧಿಸಿ ನಗರದಲ್ಲಿ ಜೆಡಿಎಸ್ ಪಕ್ಷವು ಪ್ರತಿಭಟನೆ ನಡಸಿತು. ನಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜಾತ್ಯಾತೀತ ಜನತಾ ದಳ ಪಕ್ಷವು ಎಸಿಗೆ ಮನವಿ ಸಲ್ಲಿಸಿದರು.

Hindi Diwas: ''ಅಧಿಕೃತ ಭಾಷೆ ಹಿಂದಿ ದೇಶವನ್ನು ಒಗ್ಗೂಡಿಸುತ್ತದೆ'' ಎಂದ ಅಮಿತ್ ಶಾ

ಈ ವೇಳೆ ಮಾತನಾಡಿದ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಬಾತಿ ಶಂಕರ್  ಹಿಂದಿನಿಂದಲೂ ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಸರ್ಕಾರವಿದೆ. ಕೆಲವರ  ಕುತಂತ್ರದಿಂದ ಸೆಪ್ಟೆಂಬರ್ 14ರ ದಿನವನ್ನು "ಹಿಂದಿ  ದಿವಸ್‌ (Hindi diwas)' ಮಾಡುತ್ತಾ ಬಂದಿದೆ. ಕೇವಲ 400 ವರ್ಷಗಳ ಇತಿಹಾಸ  ಇರುವ ಹಿಂದಿ ಭಾಷೆಗೆ ಹಬ್ಬ ಮಾಡುವ ಇವರಿಗೆ 2500 ವರ್ಷ ಇತಿಹಾಸವಿರುವ ಕನ್ನಡ(Kannada) ನೆನಪಿಗೆ ಬಂದಿಲ್ಲ ಎಂದು ಕಿಡಿಕಾರಿದರು. 

ಕರ್ನಾಟಕ(Karnataka) ರಾಜ್ಯವು ಕನ್ನಡ, ಕೊಂಕಣಿ, ತುಳು, ಕೊಡವ ಸೇರಿದಂತೆ ಹತ್ತಾರು ಭಾಷೆಗಳ ತವರೂರು, ವೈವಿಧ್ಯಮಯ ಸಂಸ್ಕೃತಿ ಹೊಂದಿರುವ ಈ ರಾಜ್ಯವೇ ಒಂದು ಅದ್ಭುತ ಪ್ರಪಂಚ. ಇಂತಹ ಪುಣ್ಯ ಭೂಮಿಯಲ್ಲಿ ನಮಗೆ ಸಂಬಂಧವೇ ಇಲ್ಲದ ಭಾಷೆಯ ಆಚರಣೆ ಎನ್ನುವುದು ಘೋರ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದಿ ದಿವಸ, ಹಿಂದಿ ಭಾಷಿಕ ರಾಜ್ಯಗಳಿಗೆ ಸೀಮಿತವಾಗಲಿ. ನಮಗೆ ಅದರ ಅವಶ್ಯಕತೆ ಇಲ್ಲ. ಹೊರಗಿನವರ ದಾಳಿ ಪ್ರಯತ್ನಕ್ಕೆ ಕನ್ನಡಿಗರು ಹಿಂದಿನಿಂದಲೂ ಸರಿಯಾದ ಉತ್ತರ ಕೊಡುತ್ತಾ ಬಂದಿದ್ದಾರೆ. ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ 560ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ದೇಶದಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯ ಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ರಾಜ್ಯ ಸರ್ಕಾರವು ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ  ಹಿಂದಿ ದಿವಸ ಆಚರಣೆ ಮಾಡಬಾರದೆಂದು ಆಗ್ರಹಿಸಿದರು. ಕನ್ನಡ ನೆಲ, ಜಲ, ಭಾಷೆ ಮತ್ತು ಪ್ರದೇಶದ ಗಡಿಗಳು ಈ ವಿಷಯ ವಸ್ತುಗಳಿಗೆ ಸಂಬಂಧಪಟ್ಟಂತೆ ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜಾತ್ಯಾತೀತ ಜನತಾದಳದ ಕಟ್ಟಕಡೆಯ ಕಾರ್ಯಕರ್ತನು ಸಹ ತನ್ನ ರಕ್ತವನ್ನು ಚೆಲ್ಲಿ ನಾಡನ್ನು ರಕ್ಷಿಸಲು ಬದ್ಧವಾಗಿರುತ್ತದೆ ಎಂದು ತಿಳಿಸಿದರು.

ಕನ್ನಡ, ಕನ್ನಡಿಗರ ಧ್ವನಿಯಾದ ಕುಮಾರಣ್ಣ, ಹಿಂದಿ ದಿವಸ ಆಚರಣೆ ವಿರೋಧಿಸಿ ಸಿಎಂಗೆ ಪತ್ರ

ಪ್ರತಿಭಟನೆಯಲ್ಲಿ  ಸೈಯದ್ ಫಕೃದ್ದೀನ್ ದೊಡ್ಡಮನಿ, ಟಿ.ಗಣೇಶ್ ದಾಸಕರಿಯಪ್ಪ, ಜೆ.ಅಮಾನುಲ್ಲಾ ಖಾನ್, ಟಿ.ಅಸ್ಗರ್, ಮನ್ಸೂರ್ ಅಲಿ, ಶೀಲಾಕುಮಾರ್, ಕಿರಣ್ ಹುಲ್ಮನಿ, ಟಿ.ಚಂದ್ರಪ್ಪ, ನರಸಿಂಹಮೂರ್ತಿ, ಬಿ.ದಾದಾಪೀರ್, ರವೀಂದ್ರ ಇತರರು ಇದ್ದರು.

Follow Us:
Download App:
  • android
  • ios