ಚಿತ್ರದುರ್ಗ (ಜ.30): ಕಸಾಯಿಖಾನೆಗೆ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಜಾನುವಾರುಗಳನ್ನು ಭಜರಂಗದಳ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. 

ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕೃೀ ಮಾರುಕಟ್ಟೆ ಬಳಿಯಲ್ಲಿ ಲಾರಿಯಲ್ಲಿ ಕಸಾಯಿಖಾನೆಗೆ ಸಾಗಿಸುವಾಗ 19 ಕರುಗಳು ಹಾಗೂ 2 ಹಸುಗಳನ್ನು ರಕ್ಷಣೆ ಮಾಡಲಾಗಿದೆ. 

ಕಸಾಯಿ ಖಾನೆಗೆ ಸಾಗಿಸುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾರಿಯನ್ನು ತಡೆದು ಎಲ್ಲಾ ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. 

ಗರ್ಭಧರಿಸಿದ್ರು ಬಿಡದೇ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದವ ಅರೆಸ್ಟ್..

ಬಳಿಕ ಈ ಬಗ್ಗೆ ಹೊಸದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಸು ಕರುಗಳನ್ನು ವಶಕ್ಕೆ ಪಡೆದಿದ್ದಾರೆ.