ಹುಬ್ಬಳ್ಳಿ(ಡಿ.28): ಸರ್ಕಾರದಲ್ಲಿ ಮಂತ್ರಿಯಾಗುವ ಆಸೆ ಎಲ್ಲರಿಗೂ ಇರುತ್ತೆ, ಕೆಲವೊಮ್ಮೆ ಆಸೆ ಪಟ್ಟಂತೆ ಎಲ್ಲವೂ ಆಗುವುದಿಲ್ಲ. ನಾನು ಆಶಾದಾಯಕವಾಗಿದ್ದೇನೆ. ಸಂಪುಟದಲ್ಲಿ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವೆ ಎಂದು ಹಿರೆಕೇರೂರು ಶಾಸಕ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ. 

ಗೃಹ ಇಲಾಖೆ ಬಿ.ಸಿ.ಪಾಟೀಲ್ ಪಟ್ಟು ಹಿಡಿದಿರುವ ವಿಚಾರದ ಬಗ್ಗೆ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲಿಸುವ ಜಾಯಮಾನ ನನ್ನದಲ್ಲ. ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಹೋರಾಟ ನಡೆದಿದೆ. ಈ ಕಾರಣದಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಜನೆವರಿ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳಲಿದ್ದಾರೆ. ಸಿಎಂ ದೆಹಲಿಯಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಂಕ್ರಾಂತಿ ಹಬ್ಬದ ಬಳಿಕ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದ್ದಾರೆ.