ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಆಗುತ್ತಾ? ಸಚಿವ ಬೊಮ್ಮಾಯಿ ಹೀಗಂದ್ರು

ಲಾಕ್‌ಡೌನ್‌ ಹೇರುವ ಬಗ್ಗೆ ಚರ್ಚೆ ಮಾಡಿಲ್ಲ| ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನ ಬಂದ್‌ ಮಾಡಲ್ಲ| ಆಯಾ ರಾಜ್ಯದಲ್ಲಿ ಕೊರೋನಾ ಬಗ್ಗೆ ಅವರು ಕ್ರಮಗಳನ್ನ ಕೈಗೊಂಡಿದ್ದಾರೆ| ನಮ್ಮ ರಾಜ್ಯದಲ್ಲಿ ಲಾಕ್‌ಡೌನ್‌ ಬಗ್ಗೆ ತಜ್ಞರು ಚರ್ಚೆ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ| 

Home Minister Basavaraj Bommai Talks Over Again Lockdown in Karnataka grg

ಧಾರವಾಡ (ಮಾ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಲಾಕ್‌ಡೌನ್‌ ಹೇರುವ ಬಗ್ಗೆ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನ ಬಂದ್‌ ಮಾಡಲ್ಲ. ಆಯಾ ರಾಜ್ಯದಲ್ಲಿ ಕೊರೋನಾ ಬಗ್ಗೆ ಅವರು ಕ್ರಮಗಳನ್ನ ಕೈಗೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಲಾಕ್‌ಡೌನ್‌ ಬಗ್ಗೆ ತಜ್ಞರು ಚರ್ಚೆ ಮಾಡುತ್ತಿದ್ದಾರೆ. ಕೊರೋನಾ ನಿಯಂತ್ರಣ ಮಾಡಬೇಕು ಎಂಬ ವಿಚಾರದಲ್ಲಿ ಸರ್ಕಾರವಿದೆ ಅಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮೂರು ಕಡೆಯಲ್ಲೂ ಬಿಜೆಪಿ ಗೆಲ್ಲುತ್ತೆ, ಎರಡು ವಿಧಾನಸಭಾ, ಒಂದು ಲೋಕಸಭಾ ಕ್ಷೇತ್ರದಲ್ಲಿ ಭಾರಿ ಮುನ್ನಡೆಯಿಂದ ಬಿಜೆಪಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕ ಜನರು ತೋರಿದ ಪ್ರೀತಿಗೆ ನಾನು ಋಣಿ: ಸಚಿವ ಅಶೋಕ್‌

ಎಸ್‌ಐಟಿ ಸಿಎಂ, ಗೃಹ ಸಚಿವರ ಕೈಯಲ್ಲಿ ಕೆಲಸ ಮಾಡುತ್ತೆ ಎಂಬ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, 2016 ರಲ್ಲಿ ಸಚಿವರೊಬ್ಬರ ಸಿಡಿ ಪ್ರಕರಣ ನಡೆದಿತ್ತು, ಆ ಸಮಯದಲ್ಲಿ ರಾಜ್ಯ ಸರ್ಕಾರದ ಎಸ್‌ಐಟಿ ವಿಚಾರಣೆ ಮಾಡಿತ್ತು. ಯಾವಾಗಲೂ ಪೊಲೀಸರು ಕಾನೂನು ಪ್ರಕಾರವೇ ವಿಚಾರಣೆ ಮಾಡುತ್ತಿದ್ದಾರೆ. ಎಸ್‌ಐಟಿಯನ್ನ ಸ್ವತಂತ್ರವಾಗಿ ಬಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios