ಬೆಂಗಳೂರು(ಫೆ.22): ರಾಷ್ಟ್ರೀಯ ಪೌರತ್ವ ತಿದ್ದುಪಡಿ (ಸಿಎಎ) ಕಾಯ್ದೆ ನೆಪದಲ್ಲಿ ವಿರೋಧ ಪಕ್ಷಗಳು ದೊಡ್ಡ ಪ್ರಮಾಣದಲ್ಲಿ ಕುಮ್ಮಕ್ಕು ನೀಡಿ ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಈ ರೀತಿ ಷಡ್ಯಂತ್ರ ರೂಪಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಫ್ಜಲ್‌ ಗುರುವನ್ನು ಗಲ್ಲಿಗೇರಿಸುವ ಸಂದರ್ಭದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದರು. ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗಿತ್ತು. ವಿದೇಶದಿಂದ ಕೆಲವು ಸಂಸ್ಥೆಗಳಿಗೆ ಕೋಟ್ಯತರ ರೂಪಾಯಿ ಹರಿದು ಬಂದಿರುವ ಬಗ್ಗೆ ಇಡಿ ಸಂಸ್ಥೆ ನಡೆಸುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡು ಇಂತಹ ಕೃತ್ಯಕ್ಕೆ ಕೈ ಹಾಕಿರುವುದು ಆತಂಕಕಾರಿ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂತಹವರಿಗೆ ಕಠಿಣ ಶಿಕ್ಷೆ ಕೊಡಿಸಲು ಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.