Asianet Suvarna News Asianet Suvarna News

ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಸಚಿವ ಪರಮೇಶ್ವರ್ ಸೂಚನೆ

ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರಲ್ಲದೇ ಪ್ರತಿಯೊಂದು ದಾಖಲೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದ ಗೃಹ ಸಚಿವ ಜಿ.ಪರಮೇಶ್ವರ್ 

Home Minister Dr G Parameshwar Instructed to Monitor Fake News and Social Media grg
Author
First Published Nov 20, 2023, 8:59 PM IST

ಬೆಳಗಾವಿ(ನ.20):  ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು.

ಸಾಮಾಜಿಕ ಜಾಲತಾಣಗಳ ನಿಗಾ ಘಟಕಕ್ಕೆ ಭೇಟಿ ನೀಡಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.  ಇದಾದ ಬಳಿಕ ನಗರ ನಿಯಂತ್ರಣ ಕೊಠಡಿಯನ್ನು ಹಾಗೂ ವೈರ್ ಲೆಸ್ ವಿಭಾಗದ ಕಾರ್ಯಚಟುವಟಿಕೆಗಳನ್ನು ಹಾಗೂ ದಾಖಲೆ ಕೊಠಡಿಯನ್ನು ಖುದ್ದಾಗಿ ವೀಕ್ಷಿಸಿದರು. ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರಲ್ಲದೇ ಪ್ರತಿಯೊಂದು ದಾಖಲೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಕರ್ನಾಟಕಕ್ಕೆ ಪ್ರತ್ಯೇಕ ವಿಮಾನಯಾನ, ರೈಲ್ವೆ ಸಂಸ್ಥೆ ರಚನೆಗೆ ಮನವಿ: ಕಲರ್‌ ಡಿಸೈನ್‌ ಮಾಡಿಕೊಟ್ಟ ಗುತ್ತೇದಾರ್!

ಸಂಚಾರ ನಿಯಮ ಉಲ್ಲಂಘನೆ ಕ್ರಮಕ್ಕೆ ನಿರ್ದೇಶನ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಕಟ್ಟಲು ಏಳು ದಿನಗಳ ಕಾಲಾವಕಾಶ ನೀಡಬೇಕು. ಇದಾದ ಬಳಿಕ ನ್ಯಾಯಾಲಯದಿಂದ ಸಮನ್ಸ್ ಹೋಗಬೇಕು; ದಂಡ ಕಟ್ಟದಿದ್ದರೆ ಅಥವಾ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ವಾಹನ ಸೀಜ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ನಿರ್ದೇಶನ ನೀಡಿದರು. ಸಂಚಾರ ನಿಯಮ ಉಲ್ಲಂಘನೆ ದಂಡ ವಿಧಿಸುವ ವಿಧಾನ, ಚಲನ್ ಜನರೇಟ್ ಮಾಡುವ ವಿಧಾನವನ್ನು ಪರಿಶೀಲಿಸಿದರು.

ಸಿಸಿಟಿವಿ ದೃಶ್ಯಾವಳಿ ವೀಕ್ಷಣೆ:

ಬೆಳಗಾವಿ ನಗರದ ವಿವಿಧ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಗೃಹಸಚಿವ ಜಿ.ಪರಮೇಶ್ಚರ ವೀಕ್ಷಿಸಿದರು. ಸಿಸಿಟಿವಿ ಮೇಲೆ ನಿಗಾವಹಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಯೊಂದು ಕ್ಯಾಮೆರಾ ಅಳವಡಿಸಿರುವ ವೃತ್ತ ಮತ್ತು ರಸ್ತೆ ಕುರಿತು ಸಂಪೂರ್ಣ ಮಾಹಿತಿ ಇರಬೇಕು. ಇದಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳ ಮೇಲೆ ಕೂಡ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು. ಪೊಲಿಸ್ ಆಯುಕ್ತರಾದ ಎಸ್.ಎನ್.ಸಿದ್ದರಾಮಪ್ಪ ಅವರು, ವಿವಿಧ ಘಟಕಗಳ ಕಾರ್ಯನಿರ್ವಹಣೆ ಕುರಿತು ವಿವರಿಸಿದರು.

ಲೋಕಸಭೆಯ 28 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ: ಶಾಸಕ ರಾಜು ಕಾಗೆ

ಸಾಮಾಜಿಕ ಜಾಲತಾಣ ನಿಗಾ ಘಟಕವು ಕ್ರಿಯಾಶೀಲವಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾವಹಿಸಲಾಗಿದೆ. ಇತ್ತೀಚೆಗೆ ಪ್ರಕರಣಗಳನ್ನು ಕೂಡ ದಾಖಲಿಸಲಾಗಿದೆ ಎಂದರು.

ಇದಲ್ಲದೇ ಅಧಿವೇಶನ ಸಂದರ್ಭದಲ್ಲೂ ಯಾವುದೇ ರೀತಿಯ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರಾದ ಸಿದ್ದರಾಮಪ್ಪ ತಿಳಿಸಿದರು.

ನಗರದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಗಳು, ಕೋಮುಭಾವನೆ ಕೆರಳಿಸುವ ಪೋಸ್ಟ್, ಪ್ರಚೋದಾತ್ಮಕ ಹೇಳಿಕೆ, ಘಟನೆಗಳು ಕಂಡುಬಂದರೆ ಕೂಡಲೇ ಐಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ವಿವರಿಸಿದರು.

Follow Us:
Download App:
  • android
  • ios