Asianet Suvarna News Asianet Suvarna News

ತ್ರಿವಿಧ ದಾಸೋಹದಿಂದ ಸಿದ್ಧಗಂಗಾ ಮಠದ ಹಿರಿಮೆ ಹೆಚ್ಚಿದೆ: ಸಚಿವ ಡಾ.ಜಿ.ಪರಮೇಶ್ವರ್

ಸಿದ್ಧಗಂಗಾ ಮಠದಲ್ಲಿ ಸಾವಿರಾರು ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿಸಿ, ಅವರ ಜೀವನ ರೂಪಿಸಲಾಗುತ್ತಿದೆ. ಮಠದ ಹಿರಿಮೆ ಹೆಚ್ಚಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
 

Home Minister Dr G Parameshwar Talks Over Siddaganga Mutt At Tumakuru gvd
Author
First Published Dec 7, 2023, 9:43 PM IST

ತುಮಕೂರು (ಡಿ.07): ಸಿದ್ಧಗಂಗಾ ಮಠದಲ್ಲಿ ಸಾವಿರಾರು ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿಸಿ, ಅವರ ಜೀವನ ರೂಪಿಸಲಾಗುತ್ತಿದೆ. ಮಠದ ಹಿರಿಮೆ ಹೆಚ್ಚಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಸಿದ್ಧಗಂಗಾ ಮಠದ ಆವರಣದಲ್ಲಿ ವಿ. ಸೋಮಣ್ಣ ಪ್ರತಿಷ್ಠಾನದಿಂದ ನೂತನವಾಗಿ ನಿರ್ಮಿಸಿರುವ ಗುರುಭವನ ಲೋಕಾರ್ಪಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಸಿದ್ಧಗಂಗಾ ಮಠದಲ್ಲಿ ಹಾಗೂ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಸಾವಿರಾರು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಮಠದ ಹಿರಿಮೆ ಹೆಚ್ಚಿಸಿದ್ದಾರೆ ಎಂದು ಹೇಳಿದರು.

ಶಿವಕುಮಾರ ಸ್ವಾಮೀಜಿ ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಸಿದ್ಧಲಿಂಗ ಸ್ವಾಮೀಜಿ ಅವರು ಮಠವನ್ನು ಮುನ್ನಡೆಸುತ್ತ ಬರುತ್ತಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಮತ್ತಷ್ಟು ಸಮಾಜಮುಖಿ ಕೆಲಸ ನಡೆಯಲಿ ಎಂದು ಆಶಿಸಿದರು. ಶಿವಯೋಗಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಿವಕುಮಾರ ಸ್ವಾಮೀಜಿ ಅವರನ್ನು ಎಲ್ಲರೂ ಸ್ಮರಿಸಬೇಕಿದೆ. ನಾನು ಕೂಡ ಮಠದಲ್ಲಿ ಓದಿದವನು. ಶ್ರೀಗಳು ಇಂಗ್ಲೀಷ್ ಬಿ.ಎ. ಆನರ್ಸ್ ಪದವೀಧರರು ಆಗಿದ್ದರು. ನಾನು ಪ್ರೌಢಶಾಲೆಯಲ್ಲಿ ಓದುತ್ತಿರುವ ವೇಳೆ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಶ್ರೀಗಳಿಂದ ಪ್ರಥಮ ಬಹುಮಾನ ಪಡೆದಿದ್ದೇನೆ ಎಂದು ಸ್ಮರಿಸಿದರು.

ರಾಷ್ಟ್ರೀಯ ಹೆದ್ದಾರಿಯ 24 ಸ್ಥಳಗಳಲ್ಲಿ ಫುಟ್ ಓವರ್ ಬ್ರಿಡ್ಜ್ ನಿರ್ಮಾಣ: ಸಚಿವ ಸತೀಶ್‌ ಜಾರಕಿಹೊಳಿ

ನಾನು, ಎಲ್ಲಿಯೂ ದೇವರನ್ನು ನೋಡಿಲ್ಲ ಶಿವಕುಮಾರ ಸ್ವಾಮೀಜಿಗಳಲ್ಲಿ ದೇವರನ್ನು ಕಂಡಿದ್ದೇನೆ ಎಂದು ಹೇಳಿದರು. ಪ್ರಾಸ್ತಾವಿಕ ಮಾತನಾಡಿದ ವಿ. ಸೋಮಣ್ಣ ತ್ರಿವಿಧ ದಾಸೋಹಿ, ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಧ್ಯಯನ ಪೀಠವನ್ನು ಬೆಂಗಳೂರು ವಿ.ವಿ.ಯಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿದರು. ಶ್ರೀಗಳು ವ್ಯಾಸಂಗ ಮಾಡಿದ ಬೆಂಗಳೂರಿನ ಸೆಂಟ್ರಲ್ ಕಾಲೇಜು ಇಂದು ವಿಶ್ವವಿದ್ಯಾನಿಲಯವಾಗಿದೆ. ಈ ವಿಶ್ವವಿದ್ಯಾನಿಲಯದಲ್ಲಿ ಅವರ ಅಧ್ಯಯನ ಪೀಠ ಪ್ರಾರಂಭಿಸಬೇಕು ಎಂದರು. 

ನಮ್ಮೆಲ್ಲರ ನಡೆದಾಡುವ ದೇವರಾಗಿದ್ದ ಡಾ. ಶಿವಕುಮಾರ ಸ್ವಾಮೀಜಿಯವರು ಸೆಂಟ್ರಲ್ ಕಾಲೇಜಿನಲ್ಲ ಬಿ.ಎ., ಆನರ್ಸ್ ವ್ಯಾಸಂಗ ಮಾಡಿದ್ದರು. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಂಗಳೂರು ವಿವಿಯಲ್ಲಿ ಶ್ರೀಗಳ ಅಧ್ಯಯನ ಪೀಠ ಸ್ಥಾಪನೆ ಸಾಧ್ಯವಾಗಲಿಲ್ಲ. ಈಗಲಾದರೂ ಸ್ಥಾಪನೆ ಮಾಡುವಂತೆ ವೇದಿಕೆಯಲ್ಲಿದ್ದ ಸಚಿವರಿಗೆ ಮನವಿ ಮಾಡಿದರು. ಈ ಪವಿತ್ರ ಪುಣ್ಯ ಸ್ಥಳದಲ್ಲಿ ಸೋಮಣ್ಣನಲ್ಲಿರುವ ತಪ್ಪು ಸರಿಪಡಿಸುವ ಅವಕಾಶ ಮಾಡಿಕೊಟ್ಟಿದ್ದೀರಾ. ರಾಜಕಾರಣ ಬರುತ್ತೆ, ಹೋಗುತ್ತೆ. ಮುಂದೊಂದು ದಿನ ಇದರ ಬಗ್ಗೆ ಮಾತನಾಡ್ತೀನಿ ಎಂದ ಅವರು, ಶ್ರೀಮಠದಲ್ಲಿ ಶ್ರೀಗಳ ಗುರುವಂದನಾ ಕಾರ್ಯಕ್ರಮ, ಅಮೃತ ಮಹೋತ್ಸವ, ಶ್ರೀಗಳ ಜನ್ಮ ಶತಮಾನೋತ್ಸವ ಸೇರಿದಂತೆ ಹತ್ತಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. 

ಎಲ್ಲವೂ ಪವಾಡದಂತೆ ಶ್ರೀಮಠದಲ್ಲಿ ನಡೆದಿದೆ ಎಂದು ಅವರು ತಿಳಿಸಿದರು. ಸಿದ್ದಗಂಗಾ ಮಠದಲ್ಲಿ ಗುರುಭವನವನ್ನು ನಿರ್ಮಾಣ ಮಾಡುವ ಅವಕಾಶವನ್ನು ಶ್ರೀಮಠ ಕಲ್ಪಿಸಿರುವುದಕ್ಕೆ ಕೋಟಿ ಕೋಟಿ ನಮನ ಸಲ್ಲಿಸುತ್ತೇನೆ. ನಮ್ಮ ಕುಟುಂಬದ ಮೇಲೆ ಇರಿಸಿರುವ ವಿಶ್ವಾಸಕ್ಕೆ ಆಭಾರಿಯಾಗಿರುತ್ತೇನೆ ಎಂದು ಅವರು ಹೇಳಿದರು. ನಾನು ಶ್ರೀಗಳ ಆಶೀರ್ವಾದದಿಂದ ಮುಂದಿನ ಹದಿನೈದು ವರ್ಷಗಳ ಕಾಲ ಚಾಲನೆಯಲ್ಲಿ ಇರುತ್ತೇನೆ. ರಾಜಕಾರಣ ಬರುತ್ತದೆ ಹೋಗುತ್ತದೆ ಅನೇಕ ಸಂದರ್ಭದಲ್ಲಿ ರಾಜಕಾರಣದ ವಿಷಯದ ಕುರಿತು ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

ಅಂಬೇಡ್ಕರ್ ಮೀಸಲು ಮಾತ್ರವಲ್ಲ, ಮೂಲಭೂತ ಹಕ್ಕು ನೀಡಿದ್ದಾರೆ: ಬರಗೂರು ರಾಮಚಂದ್ರಪ್ಪ

ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಶ್ರೀ ಮಠದಲ್ಲಿರುವ ಪ್ರಸಾದ ನಿಲಯ, ವಿದ್ಯಾರ್ಥಿಗಳ ವಸತಿ ನಿಲಯ, ಅತಿಥಿ ಗೃಹ ನಿರ್ಮಿಸಲು ಭಕ್ತರು ಸ್ವಯಂ ಪ್ರೇರಿತರಾಗಿ ತಾವೇ ಮುಂದೆ ಬಂದು ಇಂತಹ ಸೇವಾ ಕಾರ್ಯ ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು. ಸೋಮಣ್ಣ ಪ್ರತಿಷ್ಠಾನದಿಂದ ಶ್ರೀಮಠದಲ್ಲಿ ಅನೇಕ ಕಾರ್ಯಕ್ರಮ ಮಾಡಲಾಗುತ್ತದೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡುವುದರ ಮೂಲಕ ಗೌರವಿಸಲಾಗುತ್ತದೆ ಎಂದು ಹೇಳಿದರು. ಲೋಕಸಭಾ ಕ್ಷೇತ್ರದ ಸದಸ್ಯ ಜಿ.ಎಸ್. ಬಸವರಾಜು ಮಾತನಾಡಿ, ಪರಮೇಶ್ವರ್ ಅವರು ಶಿಕ್ಷಣ ಭೀಷ್ಮರಾದ ಗಂಗಾಧರಯ್ಯ ಅವರ ಹಾಗೆ ಸಮಾಜಮುಖಿ ಕೆಲಸಗಳನ್ನು ಇಂದಿಗೂ ಮಾಡುತ್ತಾ ಬಂದಿದ್ದಾರೆ ಎಂದು ಹೇಳಿದರು.

Follow Us:
Download App:
  • android
  • ios