ಹಾಸನ ಜಿಲ್ಲೆಯಲ್ಲಿ ಡೆಡ್ಲಿ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಈ ಸಂಬಂಧ ಹಾಸನ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಹಾಸನ(ಜು.02): ಹಾಸನ ಜಿಲ್ಲೆಯಲ್ಲಿ ಡೆಡ್ಲಿ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಈ ಸಂಬಂಧ ಹಾಸನ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಜುಲೈ 4 ರಿಂದ ಹೋಂ ಸ್ಟೇ, ರೆಸಾರ್ಟ್ ಬಂದ್ ಆಗಲಿದೆ ಎಂದು ಹಾಸನ ಡಿಸಿ ಆರ್ .ಗಿರೀಶ್ ಆದೇಶಿಸಿದ್ದಾರೆ. ಸೋಂಕು ಹರಡುತ್ತಿದ್ದರೊ ದೊಡ್ಡ ಸಂಖ್ಯೆಯಲ್ಲಿ ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರನ್ನು ತಡೆಯಲು ಈ ರೀತಿ ಮಾಡಲಾಗಿದೆ.

ಕ್ವಾರೆಂಟೈನ್ ಸೆಂಟರ್ ಆಗಿದ್ದ ರೆಸಾರ್ಟ್‌ನಲ್ಲಿ ಪ್ರವಾಸಿಗರ ಮೋಜು ಮಸ್ತಿ..!

ಸೋಂಕು ತಡೆಗೆ ಹೋಂ ಸ್ಟೇ, ರೆಸಾರ್ಟ್ ಬಂದ್ ಮಾಡಲು ಒತ್ತಾಯಿಸಿದ್ದ ಸ್ಥಳೀಯರ ಒತ್ತಾಯಕ್ಕೆ ಮಣಿದು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಆಲೂರು, ಸಕಲೇಶಪುರ, ಬೇಲೂರು ತಾಲೂಕಿನ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್ ಬಂದ್ ಆಗಲಿದೆ. ಜುಲೈ ‌4 ರಿಂದ ಮುಂದಿನ ಆದೇಶದವರೆಗೆ ಬಂದ್ ಮುಂದುವರಿಯಲಿದೆ.

#NewsIn100Seconds | ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"