ಹೊನ್ನಾಳಿ(ಜು.08): ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಸಿಬ್ಬಂದಿ ಸರಿಯಾದ ಸಮಯಕ್ಕೆ ಬರುತ್ತಿಲ್ಲವೆಂದು ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಚೇರಿಗೆ ಮಂಗಳವಾರ ಧಿಡೀರ್‌ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಹಾಗೂ, ತಡವಾಗಿ ಬಂದ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡರು.

ಕಚೇರಿಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬಾರದ ಹಿನ್ನೆಲೆ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಶಾಸಕರಿಗೆ ರೈತರು, ಸಾರ್ವಜನಿಕರು ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಕಚೇರಿಗಿಂದು ಭೇಟಿ ನೀಡಿದ ಶಾಸಕರು ಸರಿಯಾದ ಸಮಯಕ್ಕೆ ಕಚೇರಿಗೆ ಬಾರದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು. ಮಹತ್ಮಾಗಾಂಧಿ ರಾಷ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ 4,881 ರೈತರಿಗೆ ಅಡಿಕೆ,ಬಾಳೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, 68 ಕೋಟಿ ರೂಪಾಯಿ ಮಂಜೂರು ಮಾಡಲಾಗಿದ್ದು, 18500 ಮಾನವ ದಿನಗಳು ಮಂಜೂರಾಗಿದೆ. ಆದರೆ, ಫಲಾನುಭವಿ ರೈತರು ಪ್ರತಿನಿತ್ಯ ಕಚೇರಿಗೆ ಬಂದರೆ ಇಲ್ಲಿ ಕಚೇರಿ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೇ ರೈತರು ಸಾಕಷ್ಟುತೊಂದರೆ ಅನುಭಸುತ್ತಿದ್ದರಲ್ಲದೇ, ಇಲಾಖೆಯಲ್ಲಿ ಬ್ರೋಕರ್‌ಗಳ ಹಾವಳಿ ಹೆಚ್ಚಾಗಿದೆ ಎಂದು ರೈತರು ಶಾಸಕರ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರು ಕಚೇರಿಗೆ ದಿಢೀರ್‌ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು.

ದಾವಣಗೆರೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ, 6 ಪಾಸಿಟಿವ್‌

ಕಚೇರಿಯಲ್ಲಿ 11 ಜನ ಸಿಬ್ಬಂದಿಗಳಿದ್ದು ಯಾರೂ ಕೂಡ ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿರಲಿಲ್ಲಾ.ಇದರಿಂದ ರೈತರಿಗೆ ಸಮಸ್ಯೆಯಾಗುತ್ತಿದ್ದು, ಇನ್ನಾದರೂ ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂಧಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಸೂಚನೆ ನೀಡಿದರು. ಇನ್ನು ಗೋವಿನಕೋವಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ಹಾಗೂ ತೋಟಗಾರಿಕೆ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ನರಸಿಂಹಪ್ಪ ಕಚೇರಿಗೆ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಕಾರಣ ಕೇಳಿ ಇಲಾಖೆಯಿಂದ ನೋಟಿಸ್‌ ನೀಡಿದ್ದರೂ ಕೂಡ ನೋಟಿಸ್‌ಗೆ ಅವರು ಉತ್ತರ ನೀಡಿರಲಿಲ್ಲಾ. ಈ ಬಗ್ಗೆ ಶಾಸಕರ ಗಮನಕ್ಕೆ ಬಂದ ಕೂಡಲೇ ನೋಟಿಸ್‌ಗೆ ಉತ್ತರ ನೀಡದ ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಜಿಲ್ಲಾ ಪಂಚಾುತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿದರು. ತೋಟಗಾರಿಕೆ ಇಲಾಖೆಯಲ್ಲಿ ರೈತರ ಜಿಯೋ ಟ್ಯಾಂಗ್‌, ಜಿಪಿಎಸ್‌ ವರ್ಕ ಅಪ್‌ ಲೋಡ್‌ ಮಾಡಲು ವರ್ಕ ಟೆಕ್ನೀಷಿಯನ್‌ ಹಾಗೂ ಕಂಪ್ಯೂಟರ್‌ ಆಪರೇಟರ್‌ ಕೊರತೆ ಇದ್ದು, ಈ ಬಗ್ಗೆ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದ ಕಾರಣ, ಕೂಡಲೇ ಸಿಬ್ಬಂದಿಗಳನ್ನು ನಿಯೋಜನೆ ಮಾಡುವಂತೆ ಸಂಬಂಧ ಪಟ್ಟಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಜಿ.ಶಂಕರ್‌ ಇತರರು ಇದ್ದರು.