ಆಡಳಿತ, ಆಧ್ಯಾತ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ವಿಶ್ವಕ್ಕೆ ಮಾದರಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ನಮಗೆ ದೊರಕಿರುವುದು ನಮ್ಮ ಪುಣ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ (ಜ.23): ಆಡಳಿತ, ಆಧ್ಯಾತ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ವಿಶ್ವಕ್ಕೆ ಮಾದರಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ನಮಗೆ ದೊರಕಿರುವುದು ನಮ್ಮ ಪುಣ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಬಿಜೆಪಿ ಹೊನ್ನಾಳಿ ಮಂಡಲ ವತಿಯಿಂದ ಹಿರೇಮಠ ಗ್ರಾಮದ ವಾರ್ಡ್‌ನಲ್ಲಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್‌ ಸಂದರ್ಭದಲ್ಲಿ ನರೇಂದ್ರ ಮೋದಿಯವರು ತೆಗೆದುಕೊಂಡ ದಿಟ್ಟ ನಿರ್ಧಾರಗಳಿಗೆ ಪ್ರಪಂಚದ ಎಲ್ಲಾ ನಾಯಕರು ಮೆಚ್ಚಿಕೊಂಡಿದ್ದಾರೆ. 

ಶ್ರೀಮಂತ ರಾಷ್ಟ್ರಗಳಾದ ಅಮೆರಿಕಾ, ಬ್ರಿಟನ್‌ ಸೇರಿದಂತೆ ಇತರ ರಾಷ್ಟ್ರಗಳು ಕೋವಿಡ್‌ ನಂತರ ಸೊರಗಿ ಹೋದವು. ನಮ್ಮ ನೆರೆ ರಾಷ್ಟ್ರ ಪಾಕಿಸ್ತಾನ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಭಾರತ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಉತ್ತಮ ಸಾಧನೆಯತ್ತ ಸಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ದೃಢ ಸಂಕಲ್ಪ, ಉತ್ತಮ ನಿರ್ಧಾರಗಳನ್ನು ಕೈಗೊಳ್ಳುವ ಗುಣವನ್ನು ರೂಢಿಸಿಕೊಂಡಿರುವ ಪ್ರಧಾನಿ ಮೋದಿಯವರು ದೇಶದ ಸಮಗ್ರ ಅಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿದ್ದಾರೆ ಎಂದರು. 2023ರಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಗದ್ದುಗೆ ಏರುವುದಲ್ಲದೆ, 2024ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 3ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Bengaluru: ಕಾಲೇಜಿನ ಲೇಡಿಸ್ ಟಾಯ್ಲೆಟ್‌ಗೆ ನುಗ್ಗಿದ್ದ ಆರೋಪಿ ಬಂಧನ

ದೇಶದ ಭದ್ರತೆಗೆ ಹೆಚ್ಚು ಒತ್ತು ನೀಡಿರುವ ಮೋದಿಯವರು ಜಮ್ಮು ಕಾಶ್ಮೀರಕ್ಕೆ ಅನ್ವಯವಾಗುವ ಕಲಂ 370 ರದ್ದು, ದೇಶಕ್ಕೆ ಗಂಡಾಂತರ ತರುವ ಸಂಘ ಸಂಸ್ಥೆಗಳ ನಿಷೇಧ, ಭಯೋತ್ಪಾದನೆಗೆ ದಿಟ್ಟಉತ್ತರ ಸೇರಿದಂತೆ ಅನೇಕ ಜನಪರ ಯೋಜನೆಳನ್ನು ಜಾರಿ ಮಾಡಿದ್ದಾರೆ ಎಂದು ಹೇಳಿದರು. ಕಳೆದ 3 ವರ್ಷಗಳಲ್ಲಿ ನಾನು ಅವಳಿ ತಾಲೂಕುಗಳಿಗೆ ಹಮ್ಮಿಕೊಂಡಿರುವ ತುಂಗಭದ್ರಾ ನದಿಯಿಂದ 519 ಕೋಟಿ ರು. ಅನುದನಾದ ಕೆರೆ ತುಂಬಿಸುವ ಕಾಮಗಾರಿ ಸೇರಿದಂತೆ 1600ಕ್ಕೂ ಹೆಚ್ಚು ಅನುದಾನ ತಂದು ಶಿಕ್ಷಣ, ಆರೋಗ್ಯ, ಸ್ವಚ್ಛತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದು ಹೇಳಿದರು.

ವಿಜಯ ಸಂಕಲ್ಪ ಅಭಿಯಾನ ಜ. 21ರಿಂದ ಜ. 29ರವರೆಗೆ ನಡೆಯುತ್ತದೆ. ಪ್ರತಿ ಬೂತ್‌ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಕೆಎಸ್‌ಡಿಎಲ್‌ ನಿರ್ದೇಶಕ ಶಿವು ಹುಡೇದ್‌, ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್‌ ಮಾತನಾಡಿದರು. ಬಂಜಾರ ಅಭಿವೃದ್ಧಿ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಮುಖಂಡರಾದ ಅರಕೆರೆ ನಾಗರಾಜ್‌, ಪುರಸಭೆ ಸದಸ್ಯರಾದ ರಂಗನಾಥ್‌, ಬಾಬು ಹೋಬಳದಾರ್‌, ಮುಖಂಡರಾದ ನೆಲಹೊನ್ನೆ ಮಂಜುನಾಥ್‌, ವೇದಮೂರ್ತಿ ಇತರರು ಇದ್ದರು.

ಕಲಿಕೆ ಹಬ್ಬವಾದಾಗ ಶಿಕ್ಷಣಕ್ಕೆ ಮೆರುಗು: ಮಗು ತನ್ನ ಬಾಲ್ಯವನ್ನು ಸಂಭ್ರಮಿಸಬೇಕಾದರೆ ಅದು ಕಲಿಕೆಯಿಂದ ಸಾಧ್ಯ. ಕಲಿಕೆ ಎಂಬುದು ಹಬ್ಬವಾದಾಗ ಶಿಕ್ಷಣಕ್ಕೆ ಮೆರುಗು ಬರಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. ತಾಲೂಕಿನ ಚಟ್ನಹಳ್ಳಿ ಗ್ರಾಮದಲ್ಲಿ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನ್ಯಾಮತಿ ಹೊನ್ನಾಳಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್‌ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿ ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಗೊಳಿಸಲು ಕಲಿಕಾ ಹಬ್ಬ ಸಹಕಾರಿ. ಮಕ್ಕಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ನಾಡಿನ ಸತ್ಪ್ರಜೆಗಳಾಗಬೇಕು ಎಂದರು.

ನನ್ನನ್ನು ಟೀಕಿಸಿದ್ರೆ ಜನ ಕಾಂಗ್ರೆಸ್‌ಗೆ ಓಟ್‌ ಹಾಕೋದಿಲ್ಲ: ಸಿ.ಟಿ.ರವಿ

ಕಳೆದ ದಿನಗಳಲ್ಲಿ ಹರಡಿದ ಸಾಂಕ್ರಾಮಿಕ ರೋಗದಿಂದಾಗಿ ಸಾಕಷ್ಟುಮಕ್ಕಳು ಶಿಕ್ಷಣದಿಂದ ದೂರ ಉಳಿದಿವೆ. ಶಿಕ್ಷಣದ ಅಂತರ ಕಡಿಮೆ ಮಾಡುವ ದೃಷ್ಟಿಯಿಂದ ಕಲಿಕಾ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ. ಮಗು ತನ್ನನ್ನು ತಾನು ಸ್ವತಃ ತೊಡಗಿಸಿಕೊಳ್ಳುವ ಸ್ವ ಕಲಿಕೆಯ ಕಾರ್ಯಕ್ರಮ ಇದಾಗಿದ್ದು ಮಕ್ಕಳು ಮನೆಯಲ್ಲಿ ಯಾವ ರೀತಿ ಹಬ್ಬದ ದಿನಗಳಲ್ಲಿ ಸಂಭ್ರಮಿಸುತ್ತಾರೋ ಅದೇ ರೀತಿ ಕಲಿಕಾ ಹಬ್ಬದಲ್ಲೂ ಸಂಭ್ರಮಿಸಿ ಭಾಗವಹಿಸಬೇಕು ಎಂದರು.