ಬಾಗಲಕೋಟೆಯಲ್ಲಿ ಮನೆಯ ಮೇಲ್ಛಾವಣಿ ಕುಸಿತ: ಒಂದೇ ಕುಟುಂಬದ ಮೂವರ ಸಾವು

ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಇಬ್ಬರು ಪಾರಾದ ಘಟನೆ ತಾಲೂಕಿನ ಕಿರಸೂರ ಗ್ರಾಮದಲ್ಲಿ ಭಾನುವಾರ ನಡೆದಿದೆ| ರಾತ್ರಿಯಿಡೀ ನಿರಂತರ ಮಳೆ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದಿದ್ದರಿಂದ ಮನೆಯಲ್ಲಿ ಮಲಗಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ| 

House Roof Collapse in Bagalkot: Three People Dead

ಬಾಗಲಕೋಟೆ(ಅ.7): ಮನೆಯ ಮೇಲ್ಛಾವಣಿ ಕುಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಇಬ್ಬರು ಪಾರಾದ ಘಟನೆ ತಾಲೂಕಿನ ಕಿರಸೂರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತರನ್ನ ಹಡಪದ ಕುಟುಂಬಕ್ಕೆ ಸೇರಿದ ಈರಪ್ಪ(60), ಗೌರವ್ವ(55), ನಿಂಗಪ್ಪ (32) ಎಂದು ಗುರುತಿಸಲಾಗಿದೆ. 

ರಾತ್ರಿಯಿಡೀ ನಿರಂತರ ಮಳೆ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದಿದ್ದರಿಂದ ಮನೆಯಲ್ಲಿ ಮಲಗಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಿಂಗಪ್ಪನ ಪತ್ನಿ ಸವಿತಾ, ಮಗಳು 6 ವರ್ಷದ ತನು ಮನೆಯೊಳಗಿನ ಕೋಣೆಯಲ್ಲಿ ಮಲಗಿಕೊಂಡಿದ್ರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಗೆ ಮನೆ ಸೋರುತ್ತಿದ್ದಾಗ ತಂದೆ-ತಾಯಿ ಮಲಗಿದ್ದ ಕೋಣೆಗೆ ನಿಂಗಪ್ಪ ಬಂದಾಗ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. 

ನಿಂಗಪ್ಪ ಪತ್ನಿ ಸವಿತಾ,ಮಗಳು ತನು ಹೊರಬಂದು ಕೂಗಿಕೊಂಡಾಗ ಸ್ಥಳೀಯರು ಎದ್ದು ಬಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Latest Videos
Follow Us:
Download App:
  • android
  • ios