ಮೈಸೂರು[ಡಿ.07]: ಮೈಸೂರಿನ ನಂಜನಗೂಡಿನಲ್ಲಿ ದಿವ್ಯಾ ಸ್ಪಂದನ (24) ವರ್ಷದ ವಿವಾಹಿತ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ನಂಜನಗೂಡು ಪಟ್ಟಣದ ದೇವಿರಮ್ಮನ ಹಳ್ಳಿ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಮೃತ ಮಹಿಳೆ ಶಿಕ್ಷಣ ಇಲಾಖೆಯ ಅಧಿಕಾರಿ ನಂಜುಂಡಾರಾಧ್ಯ ಅವರ ಪತ್ನಿಯಾಗಿದ್ದಾರೆ. ಮೃತ ಮಹಿಳೆಗೆ ಸುಮಾರು ಆರು ವರ್ಷದ ಹೆಣ್ಣು ಮಗುವಿದೆ.

ನಂಜುಂಡಾರಾಧ್ಯ ಎಂಬುವರು ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಈಗ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಡಯಟ್ ಶಿಕ್ಷಣ ಇಲಾಖೆಯಲ್ಲಿ ಉನ್ನತ ಅಧಿಕಾರಿಯಾಗಿ ಸೇವೆ ಮಾಡುತ್ತಿದ್ದಾರೆ. 

ದಿವ್ಯಾ ಸ್ಪಂದನರನ್ನು ಪೋಷಕರಿಂದ ಕೊಲೆ ಆರೋಪ ಕೇಳಿ ಬಂದಿದ್ದು, ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಆನಂದ್ ಮತ್ತು ವೃತ್ತ ನಿರೀಕ್ಷಕ ಶೇಖರ್ ಮೃತ ಮಹಿಳೆಯ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.