ಹುಬ್ಬಳ್ಳಿ(ನ.13): ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ‌ಕಮಿಷನರ್‌ ಲಾಬುರಾಮ್‌ಅವರು ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಬುಧವಾರ ರಾತ್ರಿ ಏರ್‌ಲಿಫ್ಟ್‌ ಮಾಡಲಾಗಿದೆ.

ಆರ್‌.ದಿಲೀಪ್ ‌ಅವರ ವರ್ಗಾವಣೆ ಹಿನ್ನೆಲೆ ಹು-ಧಾ ಮಹಾನಗರ ಪೊಲೀಸ್‌ ಆಯುಕ್ತರಾಗಿ ಕಳೆದ 10 ದಿನಗಳ ಹಿಂದೆಯಷ್ಟೇ ನೇಮಕವಾಗಿದ್ದ ಲಾಬುರಾಮ್‌ ಅವರು ಸಿಬ್ಬಂದಿಗಳಲ್ಲಿ ಸಮನ್ವಯತೆ ಸೃಷ್ಟಿಸಿದ್ದರು.

ವಿನಯ್‌ ಕುಲಕರ್ಣಿ ಬಂಧನ: 'ಮುಜುಗರ ತಪ್ಪಿಸಿಕೊಳ್ಳಲು ಬಿಜೆಪಿ ಮೇಲೆ ಆರೋಪ'

ಇದೀಗ ಕಳೆದ ಎರಡು ದಿನಗಳಿಂದ ಗಂಟಲು ನೋವು ಹಾಗೂ ಬಿಳಿ ರಕ್ತ ಕಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಬುಧವಾರ ರಾತ್ರಿ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.