ಕಾರ್ಮಿಕರ ಜೀವನ ಭದ್ರತೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಅವರಿಗೆ ಅನುಕೂಲವಾಗುವ ಕಾಯ್ದೆಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಹುಬ್ಬಳ್ಳಿ (ಮೇ.02): ಕಾರ್ಮಿಕರ ಜೀವನ ಭದ್ರತೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಅವರಿಗೆ ಅನುಕೂಲವಾಗುವ ಕಾಯ್ದೆಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ದೇಶದಲ್ಲಿ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಪರಸ್ಪರ ಉತ್ತಮವಾಗಿದ್ದಾರೆ. ಕೆಲಸ ಕೊಡುವವರು ಮತ್ತು ತೆಗೆದುಕೊಳ್ಳುವವರು ಇದ್ದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಸವಣ್ಣನವರು ಕಾಯಕವೇ ಕೈಲಾಸ ಎಂದು ಆ ಕಾಲದಲ್ಲಿ ನಮಗೆ ತಿಳಿಸಿಕೊಟ್ಟಿದ್ದಾರೆ. ದೇಶದಲ್ಲಿ ಕಾರ್ಮಿಕರ ಚಿಂತನೆಯಲ್ಲಿ ಬದಲಾವಣೆ ಆಗಬೇಕಿದೆ ಎಂದರು. ಬ್ರಿಟಿಷರ ಕಾಲದ ಕಾನೂನುಗಳು ಇಂದಿಗೂ ದೇಶದಲ್ಲಿವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳಾಗಿವೆ. ಭಾರತೀಯರಿಗೆ ಭಾರತೀಯತೆ ಇರುವ ಕಾನೂನು ಬೇಕಿದೆ. ಹಾಗಾಗಿಯೇ ಕೇಂದ್ರ ಸರ್ಕಾರ ಲೇಬರ್ ಕೋಡ್ ಜಾರಿಗೆ ತರಲಾಗುತ್ತಿದೆ ಎಂದರು.

ಸೌಲಭ್ಯಗಳು ದೊರೆಯಬೇಕು

ಇಂದಿಗೂ ಶೇ. 90ರಷ್ಟು ಕಾರ್ಮಿಕರು ಇಎಸ್ಐಸಿ ಮತ್ತು ಇಪಿಎಫ್‌ನಿಂದ ಹೊರಗಿದ್ದಾರೆ. ದೇಶದಲ್ಲಿ 80 ಕೋಟಿ ಜನರು ಮಾತ್ರ ಕೆಲಸ ಮಾಡುತ್ತಾರೆ. ಉಳಿದವರು ಮಕ್ಕಳು, ವೃದ್ಧರು, ಅಂಗವಿಕಲರಿದ್ದಾರೆ. ಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳು ಸಿಗುತ್ತವೆ. ಆದರೆ, ಅಸಂಘಟಿತ ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ. ಅವರಿಗೂ ಪಿಎಫ್, ಇಎಸ್ಐಸಿ ಸೌಲಭ್ಯಗಳು ದೊರೆಯಬೇಕು ಎಂದರು.

ಇಪಿಎಫ್, ಇಎಸ್‌ಐಸಿ ಕೇವಲ ಕೆಲವರಿಗೆ ಮಾತ್ರ ಸೀಮಿತ ಆಗಬಾರದು. ಮುಂದಿನ ದಿನಗಳಲ್ಲಿ ಇಎಸ್‌ಐಸಿ ಸೌಲಭ್ಯ, ಉಚಿತ ಚಿಕಿತ್ಸೆ ಎಲ್ಲ ವರ್ಗಕ್ಕೆ ಸಿಗಬೇಕು. ಕಾರ್ಮಿಕರು ಕೇವಲ ಇಎಸ್ಐಸಿಗೆ ಮಾತ್ರ ಅವಲಂಭಿತರಾಗದೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸಹ ಅದರ ವೆಚ್ಚ ಭರಿಸಲಾಗುವುದು. ಮುಂದಿನ ದಿನಗಳಲ್ಲಿ ಪಿಎಫ್ ಹಣವನ್ನು ಎಟಿಎಂ ಮೂಲಕ ಪಡೆಯಬಹುದು ಎಂದು ತಿಳಿಸಿದರು.

ಶಾಸಕ ಮಹೇಶ ಟೆಂಗಿನಕಾಯಿ‌ ಮಾತನಾಡಿ, ದೇಶದ ಆರ್ಥಿಕ ವ್ಯವಸ್ಥೆ ಸಬಲೀಕರಣ ಆಗಬೇಕಿದೆ. ಅದು ಕಾರ್ಮಿಕರಿಂದ ಮಾತ್ರ ಸಾಧ್ಯವಿದ್ದು ಅವರು ದೇಶದ ಆರ್ಥಿಕ ಬೆನ್ನೆಲುಬು ಆಗಿದ್ದಾರೆ. ಕಾರ್ಮಿಕರಿಗೂ ಕೂಡ ಹೆಚ್ಚಿನ ಸೌಲಭ್ಯ ಒದಗಿಸುವಂತಹ ಕಾರ್ಯಗಳಾಗಬೇಕು ಎಂದರು.