Asianet Suvarna News Asianet Suvarna News

ಗೋವಾ ರಾಜ್ಯಕ್ಕೆ ಬಸ್‌ ಸಂಚಾರ ಮತ್ತೆ ಪುನರಾರಂಭ

ಹುಬ್ಬಳ್ಳಿಯಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ ಸಂಚಾರ ಆರಂಭ| ಮೊದಲ ಹಂತದಲ್ಲಿ ಪಣಜಿಗೆ ನಾಲ್ಕು (1 ರಾಜಹಂಸ, 3 ವೇಗದೂತ) ಹಾಗೂ ವಾಸ್ಕೋ ಮತ್ತು ಮಡಗಾಂವಗೆ ತಲಾ ಒಂದು ಬಸ್‌ ಸಂಚಾರ ಆರಂಭ| 

Hubballi to Goa Bus Service Resumes
Author
Bengaluru, First Published Sep 5, 2020, 1:17 PM IST

ಹುಬ್ಬಳ್ಳಿ(ಸೆ.05): ನಗರದಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ್ಸುಗಳ ಸಂಚಾರವನ್ನು ಇಂದಿನಿಂದ(ಶನಿವಾರ) ಮತ್ತೆ ಆರಂಭಿಸಲಾಗುತ್ತದೆ. ಈ ಬಸ್‌ಗಳು ಗೋಕುಲ ರಸ್ತೆಯಲ್ಲಿರುವ ಹೊಸ ಬಸ್‌ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ತಿಳಿಸಿದ್ದಾರೆ.

ಲಾಕ್‌ಡೌನ್‌ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿದಿನ ಪಣಜಿಗೆ 1 ರಾಜಹಂಸ ಮತ್ತು 8 ವೇಗದೂತ ಸೇರಿ 9, ವಾಸ್ಕೋಗೆ 1 ಮತ್ತು ಮಡಗಾಂವಗೆ 1 ಒಟ್ಟು 11 ಬಸ್ಸುಗಳು ಗೋವಾ ರಾಜ್ಯಕ್ಕೆ ಸಂಚರಿಸುತ್ತಿದ್ದವು. ಮೊದಲ ಹಂತದಲ್ಲಿ ಪಣಜಿಗೆ ನಾಲ್ಕು (1 ರಾಜಹಂಸ, 3 ವೇಗದೂತ) ಹಾಗೂ ವಾಸ್ಕೋ ಮತ್ತು ಮಡಗಾಂವಗೆ ತಲಾ ಒಂದು ಬಸ್‌ ಸಂಚಾರವನ್ನು ಆರಂಭಿಸಲಾಗಿದೆ.

ಕೊರೋನಾ ಭೀತಿಯ ಮಧ್ಯೆ ಅಂತಾರಾಜ್ಯ ಬಸ್‌ ಸಂಚಾರ ಶೀಘ್ರ ಆರಂಭ

ಪಣಜಿಗೆ ಹೋಗುವ ರಾಜಹಂಸ ಬಸ್‌ ಬೆಳಗ್ಗೆ 8ಕ್ಕೆ ಮತ್ತು ವೇಗದೂತ ಬಸ್‌ಗಳು ಬೆಳಗ್ಗೆ 8.30, 10.30 ಮತ್ತು ರಾತ್ರಿ 11-45ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತವೆ. ಪಣಜಿಯಿಂದ ಹುಬ್ಬಳ್ಳಿಗೆ ಬರುವ ರಾಜಹಂಸ ಬಸ್‌ ಮಧ್ಯಾಹ್ನ 2.30ಕ್ಕೆ, ವೇಗದೂತ ಬಸ್ಸುಗಳು ಬೆಳಗ್ಗೆ 10.30, ಮಧ್ಯಾಹ್ನ 3 ಮತ್ತು ಸಂಜೆ 5.15ಕ್ಕೆ ಪಣಜಿಯಿಂದ ಹೊರಡುತ್ತವೆ. ಈ ಬಸ್‌ಗಳು ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಮಾರ್ಗವಾಗಿ ಸಂಚರಿಸುತ್ತವೆ.

ಮಡಗಾಂವಗೆ ಹೋಗುವ ಬಸ್‌ ಬೆಳಗ್ಗೆ 8.30ಕ್ಕೆ ಹುಬ್ಬಳ್ಳಿಯಿಂದ ಹೊರಟು ಕಲಘಟಗಿ, ಯಲ್ಲಾಪುರ, ಅಂಕೋಲಾ, ಕಾರವಾರ, ಸದಾಶಿವಗಡ, ಕಾಣಕೋಣ ಮಾರ್ಗವಾಗಿ ಮಧ್ಯಾಹ್ನ 230ಕ್ಕೆ ಮಡಗಾಂವ ತಲುಪುತ್ತದೆ. ಮಧ್ಯಾಹ್ನ 3ಕ್ಕೆ ಮಡಗಾಂವದಿಂದ ಹೊರಟು ರಾತ್ರಿ 9ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ.

ವಾಸ್ಕೊಗೆ ಹೋಗುವ ಬಸ್‌ ರಾತ್ರಿ 12.30ಕ್ಕೆ ಹುಬ್ಬಳ್ಳಿಯಿಂದ ಹೊರಟು ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಮಾರ್ಗವಾಗಿ ಬೆಳಗ್ಗೆ 6ಕ್ಕೆ ವಾಸ್ಕೊ ತಲುಪುತ್ತದೆ. ವಾಸ್ಕೊದಿಂದ ಮಧ್ಯಾಹ್ನ 1.30ಕ್ಕೆ ಹೊರಟು ಹುಬ್ಬಳ್ಳಿಗೆ ಸಂಜೆ 7.30ಕ್ಕೆ ಆಗಮಿಸುತ್ತದೆ. ಪ್ರಯಾಣಿಕರ ಬೇಡಿಕೆ ಗಮನಿಸಿ ಮುಂದಿನ ದಿನಗಳಲ್ಲಿ ಬಸ್‌ಗಳನ್ನು ಹೆಚ್ಚಿಸಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ಮಾಹಿತಿ ನೀಡಿದ್ದಾರೆ.
 

Follow Us:
Download App:
  • android
  • ios