Asianet Suvarna News Asianet Suvarna News

ದೈಹಿಕ ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲೆಗೆ ಬೀಗ ಜಡಿದ ಗ್ರಾಮಸ್ಥರು

ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಸರಕಾರಿ ಮಾದರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ವರ್ಗಾವಣೆ ಮಾಡಿದ ಕ್ರಮ ವಿರೋಧಿಸಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.

Hubli taluk moraba villagers and students are Protest against School teacher transfer sat
Author
First Published Jun 28, 2023, 9:58 PM IST

ಹುಬ್ಬಳ್ಳಿ (ಜೂ.28):  ಶಾಲೆ ಆರಂಭವಾಗಿ ಇನ್ನೂ ಒಂದು ತಿಂಗಳು ಕೂಡ ಪೊರೈಸಿಲ್ಲ. ಈ ನಡುವೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗವೊಂದು ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಸರಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ.

ದೈಹಿಕ ಶಿಕ್ಷಣ ಶಿಕ್ಷಕರ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಗ್ರಾಮಸ್ಥರು, ಶಾಲಾ ಸಮಿತಿಯ ಸದಸ್ಯರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದ ದೈಹಿಕ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೊರಬದ ಶಾಲೆಯಲ್ಲಿ 1 ರಿಂದ 7ನೇ ತರಗತಿಯವರೆಗೆ ಸುಮಾರು 200 ಮಕ್ಕಳು ಕಲಿಯುತ್ತಿದ್ದು, ಶತಮಾನ ಕಂಡ ಶಾಲೆಯಾಗಿದೆ ಇದಾಗಿರುವುದರಿಂದ. ಮೊದಲೇ ಮುಖ್ಯ ಶಿಕ್ಷಕರ ನೇಮಕಾತಿಯಾಗಿಲ್ಲ. ಇದಕ್ಕೆ ಪರ್ಯಾಯವಾಗಿ ಯಾವುದೇ ಶಿಕ್ಷಕರನ್ನು ನೇಮಕ ಮಾಡಿಲ್ಲ. 

ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್: ಮುಂದಿನ ವರ್ಷ ಸ್ತ್ರೀ ಶಕ್ತಿ ಸಂಘದ ಸಾಲ ಮನ್ನಾ

ರಾಷ್ಟ್ರಮಟ್ಟದ ಸಾಧನೆ ಮಾಡಿದ ವಿದ್ಯಾರ್ಥಿಗಳು:  ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮೊದಲಿನಿಂದಲೂ ವಿಶೇಷ ಸಾಧನೆ ಮಾಡಿ, ರಾಷ್ಟ್ರಮಟ್ಟದ ವಾಲಿಬಾಲ್‌ ಆಟಗಾರರು, ರಾಜ್ಯಮಟ್ಟದ ಕಬ್ಬಡಿ ಆಟದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಲೆಯಲ್ಲಿ ಸುಸಜ್ಜಿತ ಆಟದ ಮೈದಾನವಿದ್ದು, ಇಷ್ಟೆಲ್ಲ ಇದ್ದಾಗಲೂ ದೈಹಿಕ ಶಿಕ್ಷಣ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಮಾಡಬೇಕು. ಮುಖ್ಯ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಡಿಡಿಪಿಐ ಹಾಗೂ ಬಿಇಓ ಅವರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು. 

ಮಕ್ಕಳಿಂದ ಮೈದಾನದಲ್ಲಿಯೇ ಓದು:  ಸ್ಥಳಕ್ಕೆ ಆಗಮಿಸಿದ ಬಿಇಓ ಎಸ್.ಬಿ. ಮಲ್ಲಾಡ್ ಅವರು ಆಗಮಿಸಿ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಗ್ರಾಮಸ್ಥರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರೆಯಿತು. ಮಕ್ಕಳು ಮೈದಾನದಲ್ಲಿಯೇ ಕುಳಿತು ಓದುತ್ತ ಪ್ರತಿಭಟನೆಯಲ್ಲಿ ಭಾಗಿಯಾದರು. 

ನೆಚ್ಚಿನ ಶಿಕ್ಷಕಿ ವರ್ಗಾವಣೆಗೆ ಭಾರಿ ವಿರೋಧ: ಉತ್ತರಕನ್ನಡ (ಜ.24): ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ನಡೆಸಲು ಸರಕಾರ ಆದೇಶಿಸಿರುವ ಹಿನ್ನೆಲೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಖರ್ವಾ ಗ್ರಾಮದ ಯಲಗುಪ್ಪಾದಲ್ಲಿ ಭಾರೀ ವಿರೋಧ ಕಾಣಿಸಿಕೊಂಡಿದೆ. ಯಲಗುಪ್ಪಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 70 ಮಕ್ಕಳಿದ್ದು, ಈ ಮಕ್ಕಳನ್ನು ಶಾಲೆಯಿಂದ ವಾಪಾಸ್ ಕರೆದೊಯ್ಯುವ ಮೂಲಕ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

Bengaluru: ಗೃಹ ಪ್ರವೇಶದ ಮನೆಗೆ ನುಗ್ಗಿ ಬಟ್ಟೆ ಎತ್ತಿ ತೋರಿಸಿದ ಮಂಗಳಮುಖಿಯರು

ಇಂಗ್ಲೀಷ್‌ ಶಿಕ್ಷಕಿ ವರ್ಗಾವಣೆಗೆ ವಿರೋಧ:  ಈ ಶಾಲೆಯ ಇಂಗ್ಲಿಷ್ ವಿಷಯದ ಶಿಕ್ಷಕಿ ಲಕ್ಷ್ಮೀ ಎಂಬವರಿಗೆ ವರ್ಗಾವಣೆಯಾಗಿದ್ದು, ಆ ಶಿಕ್ಷಕಿಯನ್ನು ಶಾಲೆಯ ಸೇವೆಯಲ್ಲಿ ಇರಿಸಬೇಕೆಂದು ಒತ್ತಾಯಿಸಿ ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಬೇಕೆಂದು ಸರಕಾರವೇ ಹೇಳುತ್ತದೆ.‌ ಆದರೆ, ಉತ್ತಮ ಶಿಕ್ಷಕರನ್ನು ಹೆಚ್ಚುವರಿ ನೆಪದಲ್ಲಿ ಬೇರೆಡೆ ವರ್ಗಾವಣೆ ಮಾಡಲಾಗ್ತಿದೆ. ಖಾಸಗಿ ಶಾಲೆಗಳ ಮುಂದೆ ಬಡವರ ಮಕ್ಕಳು ಬೆಳೆಯುವುದಾದರೂ ಹೇಗೆ? ಈಗಾಗಲೇ ಜನಪ್ರತಿನಿಧಿಗಳು, ಜಿಲ್ಲಾಡಳಿತಕ್ಕೆ ಮನವಿ ಕೂಡಾ ಸಲ್ಲಿಸಿದ್ರೂ ಪ್ರಯೋಜನವಾಗಿಲ್ಲ. ಈ ಶಾಲೆಯ ಶಿಕ್ಷಕರ ವರ್ಗಾವಣೆ ನಿಲ್ಲಿಸದಿದ್ರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಇಲ್ಲ. ಶಿಕ್ಷಕಿಯ ವರ್ಗಾವಣೆಯನ್ನು ನಿಲ್ಲಿಸುವ ಬೇಡಿಕೆ ಈಡೇರದಿದ್ದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುವುದು ಎಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.

Follow Us:
Download App:
  • android
  • ios