ಹಾಸನ(ಆ.20): ಶಿಕಾರಿಪುರ ಒಂದೇ ತಾಲೂಕಿಗೆ 850 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಇದೇನು ಶಿಕಾರಿಪುರ ಬಜೆಟ್ಟಾ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಹಿಂದೆ ಯಡಿಯೂರಪ್ಪ ಹಾಸನ, ರಾಮನಗರ ಮತ್ತು ಮಂಡ್ಯ ಬಜೆಟ್‌ ಎಂದು ಹೇಳುತ್ತಿದ್ದರು. ಆದರೆ, ಈಗ ಶಿಕಾರಿಪುರ ಒಂದೇ ತಾಲೂಕಿಗೆ 850 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ ಎಂದರು.

ಗೌಡರ ಮಕ್ಕಳೇನೆಂದು ತೋರಿಸ್ತೀವಿ: ರೇವಣ್ಣ

ಒಟ್ಟು ಶಿವಮೊಗ್ಗ ಜಿಲ್ಲೆಗೆ 2 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಉತ್ತರ ಕರ್ನಾಟಕ ಪ್ರವಾಹ ಪರಿಹಾರಕ್ಕೆ ಸಿಎಂ ಹಣ ಇಲ್ಲ ಅಂತಾರೆ ಎಂದು ವಾಗ್ದಾಳಿ ನಡೆಸಿದರು. ಇದು ಯಾವ ಬಜೆಟ್‌, ಇದೇನು ಶಿಕಾರಿಪುರ ಬಜೆಟ್ಟಾಎಂದು ರೇವಣ್ಣ ಟೀಕಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ