ಕಾಡಾನೆ-ಮಾನವ ಸಂಘರ್ಷಕ್ಕೆ ಕೊನೆ ಇಲ್ಲ; ಕಾಫಿನಾಡಲ್ಲಿ ಮತ್ತೊಬ್ಬ ಬಲಿ!
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರು ತಾಲೂಕು ಆಲ್ದೂರು ಸಮೀಪದ ಕಂಚಿನಕಲ್ ದಯರ್ಗದ ಬಳಿ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ.
ಚಿಕ್ಕಮಗಳೂರು (ಮೇ.5): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರು ತಾಲೂಕು ಆಲ್ದೂರು ಸಮೀಪದ ಕಂಚಿನಕಲ್ ದಯರ್ಗದ ಬಳಿ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ.
ಆಲ್ದೂರು ಹೋಬಳಿ, ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿವ್ಯಾಪ್ತಿಯಕಂಚಿನಕಲ್ ದುರ್ಗ ಸಮೀಪದ ಕೆಸುವಿನಕಲ್ ಕಾಫಿಎಸ್ಟೇಟ್ ನಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಕೂಲಿ ಕಾರ್ಮಿಕ ಆನಂದ ಪೂಜಾರಿ(55 ವರ್ಷ) ಕಾಡಾನೆ ದಾಳಿಯಿಂದ ಮೃತಪಟ್ಟವರು. ಇಂದು ಮುಂಜಾನೆ ಆನಂದ ಪೂಜಾರಿ ಅವರು ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು ಕಾಡಾನೆ ದಾಳಿಯಿಂದ ಆನಂದ ಪೂಜಾರಿಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೂರ್ ಅಹಮ್ಮದ್ ಎಂಬುವರಿಗೆ ಸೇರಿದ ಕೆಸುವಿನಕಲ್ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಆನಂದ ಪೂಜಾರಿ(Ananda pujary dies after wild attack) ಯವರು ಹಲವು ವರ್ಷಗಳಿಂದ ಈ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ತಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ, ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರು..!
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ :
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾ.ಪಂ.ಸದಸ್ಯ ರಾಜು ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಎಫ್ಓ ರಮೇಶ್ ಬಾಬು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಬಿಸಿಲಿನ ತಾಪ, ಕುಡಿಯುವ ನೀರು ಸಿಗದೆ ಕನಕಪುರದಲ್ಲಿ 2 ಕಾಡಾನೆಗಳ ಸಾವು
ಗ್ರಾಮಸ್ಥರು ಆಕ್ರೋಶ :
ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ನಿರಂತರವಾಗಿ ಜೀವ ಹಾನಿಯಾಗುತ್ತಿದ್ದು ಈಗ ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ.ಇತ್ತೀಚೆಗೆ ಕೆಲ ತಿಂಗಳ ಹಿಂದೆ ಆಲ್ದೂರು ಭಾಗದಲ್ಲಿ ಇಬ್ಬರನ್ನು ಕಾಡಾನೆ ತುಳಿದು ಸಾಯಿಸಿತ್ತು. ಮಲೆನಾಡಿನಲ್ಲಿ ನಿರಂತರವಾಗಿ ಕಾಡಾನೆ ದಾಳಿ ಆಗುತ್ತಿದ್ದರು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕಾಡಿನಿಂದ ನಾಡಿನತ್ತ ಮುಖ ಮಾಡಿರುವ ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದರು.