ಮೈಸೂರು(ಫೆ.19): ಮೈಸೂರಿನಲ್ಲಿ ಉದ್ಯೋಗ ಮೆಳ ನಡೆಯುತ್ತಿದ್ದು, 100ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ. ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳ ಇದಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆಯಬಹುದು.

ಕೌಶಲಾಭಿವೃದ್ದಿ, ಉದ್ಯಮಶೀಲತೆ, ಜಿಲ್ಲಾಡಳಿತದಿಂದ ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆದಿದ್ದು, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪರಿಮಳ ಶ್ಯಾಂ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದೆ.

SSLC ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

ಮೈಸೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಉದ್ಯೋಗ ಮೇಳ ನಡೆಯುತ್ತಿದ್ದು, ಮೇಳದಲ್ಲಿ ಸಾವಿರಾರು ಉದ್ಯೋಗ ಆಕಾಂಕ್ಷಿಗಳು ಭಾಗಿಯಾಗುವ ಸಾಧ್ಯತೆ ಇದೆ. ಇನ್ಫೋಸಿಸ್, ವಿಪ್ರೋ, ಹೋಂಡಾ, ಜೆ.ಕೆ.ಟೈರ್ಸ್, ಏಷಿಯನ್ ಪಾಯಿಂಟ್ಸ್ ಸೇರಿ ಹಲವು ಪ್ರತಿಷ್ಠಿತ ಸಂಸ್ಥೆಗಳು ಭಾಗಿಯಾಗಲಿವೆ. 

KSRTC ನೇಮಕಾತಿ: 3745 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮೇಳದಲ್ಲಿ ಸುಮಾರು 100ಕ್ಕೂ ಹೆಚ್ಚು ಸಂಸ್ಥೆಗಳು ಭಾಗಿಯಾಗಲಿದ್ದು, ಉದ್ಯೋಗ ಮೇಳಕ್ಕೆ ಅಭ್ಯರ್ಥಿಳು ಹೆಸರು ನೊಂದಾಯಿಸಿಕೊಳ್ಳಲು 10ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದೆ. ಮೇಳದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು‌ ಭಾಗಿಯಾಗುವ ಸಾಧ್ಯತೆ ಇದೆ. ಕಾರ್ಯಕ್ರಮದಲ್ಲಿ ಮೇಯರ್ ತಸ್ನೀಂ, ಎಡಿಸಿ ಪೂರ್ಣಿಮಾ, ಜಿ.ಪಂ.ಸಿಇಒ ಜ್ಯೋತಿ, ಭವ್ಯ,ಜಿ.ಪಂ.ಸದಸ್ಯ ಚಂದ್ರಿಕ ಸುರೇಶ್ ಭಾಗಿಯಾಗಿದ್ದರು.