ಜಿಟಿಡಿ ಭೇಟಿಯಾಗಿ ಬೆಂಬಲ ಕೋರಿದ ವಿಶ್ವನಾಥ್
ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್. ವಿಶ್ವನಾಥ್ ಮಂಗಳವಾರ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರನ್ನು ಭೇಟಿಯಾಗಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಮೈಸೂರು(ನ.20): ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್. ವಿಶ್ವನಾಥ್ ಮಂಗಳವಾರ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರನ್ನು ಭೇಟಿಯಾಗಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಸದ್ಯ ಮಾಜಿ ಸಚಿವ ಜಿ.ಟಿ ದೇವೇಗೌಡರು ಜೆಡಿಎಸ್ ಕಾರ್ಯಕ್ರಮಗಳಿಂದ ದೂರು ಉಳಿದಿದ್ದು, ಜತೆಗೆ ಹುಣಸೂರು ಕ್ಷೇತ್ರ ಉಪಚುನಾವಣಾ ವಿಚಾರದಲ್ಲಿ ತಟಸ್ಥವಾಗಿದ್ದಾರೆ. ಈ ಹಿಂದೆ ಎರಡು ಬಾರಿ ಹುಣಸೂರಿನಿಂದ ಆಯ್ಕೆಯಾಗಿದ್ದ ಮಾಜಿ ಸಚಿವ ಜಿ.ಟಿ ದೇವೇಗೌಡರ ಬೆಂಬಲ ಸಿಕ್ಕರೇ ಗೆಲುವಿಗೆ ಅನುಕೂಲವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.
'ಸಿದ್ದು ಸಿಎಂ ಆದಾಗ ಉತ್ತರ ಕರ್ನಾಟಕದ ಕುರಿಗಳೆಲ್ಲಾ ಬ್ಯಾ ಅಂತ ಕುಣಿದವು'..!
ಹೀಗಾಗಿ ವಿಶ್ವನಾಥ್ ಅವರು ಜಿ.ಟಿ ದೇವೇಗೌಡ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಜಿಟಿಡಿ ಭೇಟಿ ಬಳಿಕ ಮಾಧ್ಯಮದ ಜತೆ ಮಾತನಾಡಿದ ವಿಶ್ವನಾಥ್, ನನ್ನ ಮತ್ತು ಜಿಟಿ ದೇವೇಗೌಡರ ನಡುವೆ ಅವಿನಾಭಾವ ಸಂಬಂಧವಿದೆ. ಚುನಾವಣೆಯಲ್ಲಿ ನಮಗೆ ಬೆಂಬಲ ನೀಡುವಂತೆ ಜಿಟಿ ದೇವೇಗೌಡರಿಗೆ ಮನವಿ ಮಾಡಿದ್ದೇನೆ. ಜಿಟಿಡಿ ಅವರ ಕುಟುಂಬದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ. ಬೆಂಬಲಿಗರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ನನ್ನನ್ನು ಏನು ಕೇಳಬೇಡಿ- ಜಿಟಿಡಿ
ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಸುಮ್ಮನೆ ಇರಲು ಬಿಡಿ. ನನ್ನನ್ನು ಏನು ಕೇಳಬೇಡಿ ಎನ್ನುವ ಮೂಲಕ ಶಾಸಕ ಜಿ.ಟಿ. ದೇವೇಗೌಡ ಅವರು ಎಚ್. ವಿಶ್ವನಾಥ್ ಭೇಟಿ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಹುಣಸೂರು: ಉಪಸಮರದ ತ್ರಿಕೋನ ಸ್ಪರ್ಧೆಗೆ ವೇದಿಕೆ ಸಜ್ಜು