Mysuru: ವಸ್ತ್ರಸಂಹಿತೆ ಜಾರಿಗಿಂತ, ತಾವೇ ಸೂಕ್ತ ವಸ್ತ್ರಧರಿಸುವುದು ಒಳ್ಳೆಯದು: ಪ್ರತಾಪ್ ಸಿಂಹ
ದೇವಸ್ಥಾನಕ್ಕೆ ಹೋಗಬೇಕಾದರೆ ಶ್ರದ್ಧಾಭಕ್ತಿಯಿಂದ ಹೋಗಬೇಕು. ಈ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವುದಕ್ಕಿಂತ ಭಕ್ತರು ತಾವೇ ವಸ್ತ್ರಸಂಹಿತೆ ಅಳವಡಿಸಿಕೊಂಡರೆ ಒಳ್ಳೆಯದು ಎಂದು ಸಂಸದ ಪ್ರತಾಪ ಸಿಂಹ ಮನವಿ ಮಾಡಿದರು.
ಮೈಸೂರು (ಡಿ.28): ದೇವಸ್ಥಾನಕ್ಕೆ ಹೋಗಬೇಕಾದರೆ ಶ್ರದ್ಧಾಭಕ್ತಿಯಿಂದ ಹೋಗಬೇಕು. ಈ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವುದಕ್ಕಿಂತ ಭಕ್ತರು ತಾವೇ ವಸ್ತ್ರಸಂಹಿತೆ ಅಳವಡಿಸಿಕೊಂಡರೆ ಒಳ್ಳೆಯದು ಎಂದು ಸಂಸದ ಪ್ರತಾಪ ಸಿಂಹ ಮನವಿ ಮಾಡಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಅಭಿಯಾನ ಆರಂಭವಾಗಿದೆ. ಇದಕ್ಕೆ ನನ್ನ ಬೆಂಬಲವಿದೆ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಡ್ರೆಸ್ ಕೋಡ್ ನಿಗದಿ ಮಾಡುವ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೂ ತಂದಿದ್ದರು.
ಕೆಲವು ವೇಳೆ ಬೆಟ್ಟಕ್ಕೆ ಬರುವವರು ಬೇರೆ ಬೇರೆ ವಸ್ತ್ರಗಳನ್ನು ಧರಿಸಿ ಬರುವುದನ್ನು ನೋಡಿದ್ದೇನೆ. ಕೇರಳದಲ್ಲಿ ಯಾವುದೇ ದೇವಸ್ಥಾನಕ್ಕೆ ಹೋದರೂ ಪುರುಷರು ಮತ್ತು ಮಹಿಳೆಯರಿಗೆ ನಿಗದಿತ ಡ್ರೆಸ್‌ಕೋಡ್ ಕಡ್ಡಾಯವಿದೆ ಎಂದರು. ದೇವಸ್ಥಾನಕ್ಕೆ ಹೋಗಬೇಕಾದರೆ ಶ್ರದ್ದಾಭಕ್ತಿಯಿಂದ ಹೋಗಬೇಕು. ಈ ರೀತಿಯ ಅಭಿಯಾನವನ್ನು ಚಾಮುಂಡಿಬೆಟ್ಟದಲ್ಲೂ ಮಾಡಿ ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ಹೊರಟಿರುವುದು ಒಳ್ಳೆಯ ಬೆಳವಣಿಗೆ, ಇದಕ್ಕೆ ನನ್ನ ಬೆಂಬಲವೂ ಇದೆ. ಇಂತಹ ಕಟ್ಟುಪಾಡುಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುವುದಕ್ಕಿಂತ ಬೆಟ್ಟಕ್ಕೆ ಬರುವ ಭಕ್ತರು ಸೂಕ್ತ ವಸ್ತ್ರ ಧರಿಸಿ ಬರುವಂತೆ ನಾನು ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮೊಟಕು ಸಾಧ್ಯತೆ: ಸಚಿವ ಗೋಪಾಲಯ್ಯ
ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದಕ್ಕೆ ನಾವು ಭಯ ಪಡುವ ಅಗತ್ಯವಿಲ್ಲ. ಚೀನಾದಲ್ಲಿ ಕೋವಿಡ್ ಹೆಚ್ಚಾದ ಮಾತ್ರಕ್ಕೆ ಇಲ್ಲಿಗೆ ಭೂತ ಬಂತು ಭೂತ ಎನ್ನುವ ಕತೆ ಬೇಡ. ಚೀನಾದಲ್ಲಿನ ಪರಿಸ್ಥಿತಿ ಬೇರೆ ನಮ್ಮ ಪರಿಸ್ಥಿತಿ ಬೇರೆ ಇದೆ. ಚೀನಾದಲ್ಲಿ ಏನಾಗುತ್ತಿದೆ ಎಂದು ಯಾರಿಗೂ ತಿಳಿಯುತ್ತಿಲ್ಲ. ಕೋವಿಡ್ ನಿಭಾಯಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಎರಡು ವರ್ಷಗಳ ಅನುಭವವಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ದೇಶಕ್ಕಿಂತ ಮುಂಚೆ ಸ್ವದೇಶಿ ತಯಾರಿತ ಕೋವಿಡ್ ವ್ಯಾಕ್ಸಿನ್ ಕೊಡಿಸಿದ್ದರಿಂದ ಜನರು ಅಪಾಯದಿಂದ ಪಾರಾಗಿದ್ದಾರೆ. ಕೋವಿಡ್ ವಿಚಾರದಲ್ಲಿ ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಕೋವಿಡ್ ವಿಚಾರದಲ್ಲಿ ಅನಗತ್ಯ ರೀತಿಯ ಆತಂಕ ಬೇಡ ಎಂದು ಅವರು ಹೇಳಿದರು.
ದಶಪಥ ಎಕ್ಸ್‌ಪ್ರೆಸ್ ಹೆದ್ದಾರಿಗೆ ‘ಕಾವೇರಿ’ ಹೆಸರಿಡಲು ಮನವಿ: ಮೈಸೂರು ಬೆಂಗಳೂರು ದಶಪಥ ಎಕ್ಸ್‌ಪ್ರೆಸ್ ರಾಷ್ಟ್ರೀಯ ಹೆದ್ದಾರಿಗೆ ‘ಕಾವೇರಿ ಎಕ್ಸ್‌ಪ್ರೆಸ್ ವೇ’ ಎಂದು ಹೆಸರಿಡಲು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಮುಕ್ತಾಯದ ಹಂತದಲ್ಲಿರುವ ಮೈಸೂರು ಬೆಂಗಳೂರು ನಡುವಿನ 119 ಕಿಲೋ ಮೀಟರ್ ಅಂತರದ ದಶಪಥ ಹೆದ್ದಾರಿಗೆ ಕಾವೇರಿ ಹೆಸರನ್ನು ಇಟ್ಟು ಕಾವೇರಿ ಎಕ್ಸ್‌ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು.
ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಪಂಚರತ್ನ ಜಾರಿಗೆ: ನಿಖಿಲ್ ಕುಮಾರಸ್ವಾಮಿ
ಕೊಡಗಿನ ತಲಕಾವೇರಿಯಲ್ಲಿ ಜನಿಸಿ ಕರ್ನಾಟಕದ ಜೀವನದಿ ಎನಿಸಿರುವ ಕಾವೇರಿಯೊಂದಿಗೆ ಕೊಡಗು ಮೈಸೂರು ಮಂಡ್ಯ ಮತ್ತು ಬೆಂಗಳೂರು ಜನತೆಗೆ ಭಾವನಾತ್ಮಕ ಸಂಬಂಧವಿದೆ. ಪಶ್ಚಿಮಘಟ್ಟದಲ್ಲಿ ಉಗಮಿಸುವ ಕಾವೇರಿ ಎಂಬ ಪವಿತ್ರ ಹೆಸರನ್ನೇ ಹೆದ್ದಾರಿಗೆ ಇಡುವುದು ಅತ್ಯಂತ ಸೂಕ್ತ ಎಂದು ಪ್ರತಾಪ್ ಸಿಂಹ ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ಮನವಿಗೆ ಸಚಿವ ನಿತಿನ್ ಗಡ್ಕರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.