ಕೆ.ಆರ್‌. ನಗರ ಕ್ಷೇತ್ರದಿಂದ ನಾನು ಪ್ರಬಲ ಆಕಾಂಕ್ಷಿ- ಕೆ.ವಿ. ರಾಘವನ್‌ಗೌಡ

ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ತಾಲೂಕು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ವಿ. ರಾಘವನ್‌ ಗೌಡ ಹೇಳಿದರು.

  I am a strong aspirant from kr Nagar constituency KV Raghavan Gowda snr

  ಸಾಲಿಗ್ರಾಮ :  ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ತಾಲೂಕು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ವಿ. ರಾಘವನ್‌ ಗೌಡ ಹೇಳಿದರು.

ನಾನು ಕಳೆದ ಎರಡು ದಶಕಗಳಿಂದಲೂ ಬಿಜೆಪಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದೇನೆ. ಕ್ಷೇತ್ರದಲ್ಲಿ ನಡೆದ ಯಾವುದೇ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವ ಮೂಲಕ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸುವ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪಕ್ಷದ ವರಿಷ್ಠರು ನನಗೊಂದು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ತಾಲೂಕು ಎಸ್ಸಿ ಮೋರ್ಚಾ ಅಧ್ಯಕ್ಷ ರಾಚಯ್ಯ ಮಾತನಾಡಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಕೆ.ವಿ. ರಾಘವನ್‌ಗೌಡ ಅವರಿಗೆ ಈ ಬಾರಿ ಬಿಜೆಪಿ ಹೈಕಮಾಂಡ್‌ ಅಭ್ಯರ್ಥಿಯಾಗಿ ಮಾಡಬೇಕು ಎಂದು ವರಿಷ್ಠರಲ್ಲಿ ಮನವಿ ಮಾಡಿದರು.

ಬೇರಿಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜಶೇಖರ್‌, ರೈತ ಮೋರ್ಚ ಸದಸ್ಯ ಕೋಟೆಗೌಡ, ಎಸ್ಸಿ ಮೋರ್ಚಾ ಸದಸ್ಯ ಸಂತೋಷ್‌ ಇದ್ದರು.

ಬಿಜೆಪಿಗೆ  ಹೋಗಿ ತಪ್ಪು ಮಾಡಿದೆ

ಗುರುಮಠಕಲ್‌(ಮಾ.26):  ಬಿಜೆಪಿಗೆ ಹೋಗಿ ನಾನು ತಪ್ಪು ಮಾಡಿದೆ. ಇನ್ನು ಮುಂದೆ ಮಲ್ಲಿಕಾರ್ಜುನ ಖರ್ಗೆಯವರ ಮಾರ್ಗದರ್ಶನದಲ್ಲೇ ಮುಂದುವರೆಯುವೆ ಎಂದು ಮಾಜಿ ಸಚಿವ, ಕೋಲಿ ಸಮಾಜದ ಪ್ರಭಾವಿ ನಾಯಕ ಬಾಬುರಾವ್‌ ಚಿಂಚನಸೂರು ಹೇಳಿದರು.

ಗುರುಮಠಕಲ್‌ ಮತಕ್ಷೇತ್ರದ ಸೈದಾಪುರದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೆಸ್ಸೆಸ್‌ ಸಿದ್ಧಾಂತ ಹೊಂದಿರುವ ಬಿಜೆಪಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡುವುದಿಲ್ಲ. ನರೇಂದ್ರ ಮೋದಿಯಿಂದ ಬಡವರ ಕಲ್ಯಾಣವಾಗಲು ಸಾಧ್ಯವಿಲ್ಲ ಎಂದರು.

ಜೆಡಿಎಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿ ಯೋಜನೆ ಜಾರಿ: ಬಂಡೆಪ್ಪ ಖಾಶೆಂಪೂರ್

ಕಲ್ಯಾಣ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಭದ್ರಕೋಟೆ. ಈ ಭಾಗದಲ್ಲಿ ಬಿಜೆಪಿ ಹುನ್ನಾರ ನಡೆಯುವುದಿಲ್ಲ. ತಂದೆಗೆ ತಕ್ಕ ಮಗನಾಗಿ ಉತ್ತಮ ಕೆಲಸಕ್ಕೆ ಖ್ಯಾತಿ ಪಡೆದಿರುವ ಪ್ರಿಯಾಂಕ್‌ ಖರ್ಗೆ ಚಿತ್ತಾಪುರದಲ್ಲಿ ಈ ಬಾರಿಯೂ ಗೆಲುವಿನ ನಗೆ ಬೀರಲಿದ್ದಾರೆ ಎಂದ ಬಾಬುರಾವ್‌, ನಾನು ಕಾಂಗ್ರೆಸ್ಸಿಗೆ ಮರಳಿದ ನಂತರ ಬಿಜೆಪಿ ಅಲ್ಲಿ ಉಳಿಯುವುದಿಲ್ಲ ಎಂದು ಲೇವಡಿ ಮಾಡಿದರು.

ಗುರುಮಠಕಲ್‌ ಕ್ಷೇತ್ರವಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿನ ಸೀಟುಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ. ಇದರೊಟ್ಟಿಗೆ ಖರ್ಗೆ ಅವರ ಕೀರ್ತಿ ಪತಾಕೆ ಹಾರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios