ಮೈಸೂರು(ಮೇ 22): ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಮೈಮುಲ್‌) ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸಾ.ರಾ. ಮಹೇಶ್‌ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ. ದೇವೇಗೌಡರು, ಅವನಿಗೆ ಎಲ್ಲ ಗೊತ್ತು. ಅವನಿಗಿರುವಷ್ಟುಬುದ್ದಿವಂತಿಕೆ ನನಗೆ ಇಲ್ಲ ಎಂದು ಪರೋಕ್ಷವಾಗಿ ಟಾಂಗ್‌ ನೀಡಿದರು.

ಗ್ರಾಪಂ, ತಾಪಂ, ಜಿಪಂ ಸದಸ್ಯರಿಗೆ ಅವರವರ ಕೆಲಸ ಮಾಡುವುದಕ್ಕೆ ನಾನು ಬಿಡುತ್ತೇನೆ. ಆದರೆ ನಾನೇ ಎಲ್ಲವನ್ನೂ ಮಾಡಬೇಕು ಎನ್ನುವುದು ಸಾ.ರಾ. ಮಹೇಶ್‌ ಬುದ್ಧಿ. ಅವನಿಗೆ ಗೊತ್ತು ಎಲ್ಲಿ ಏನಾಗಿದೆ ಎಂದು ತಿಳಿದಿದೆ. ಸಾ.ರಾ. ಮಹೇಶ್‌ ಏನು ಕೆಲಸ ಮಾಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತು. ಮೈಮುಲ್, ಡಿಸಿಸಿ ಬ್ಯಾಂಕ್‌ ಮುಂತಾದವು ಸ್ವಾಯತ್ತ ಸಂಸ್ಥೆಗಳು. ಅದನ್ನು ನಿರ್ವಹಣೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಕಿವಿಮಾತು ಹೇಳಿದರು.

ಕಾವೇರಿ ನದಿ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

ಎಲ್ಲವನ್ನೂ ನಾನೇಕೆ ಮಾಡಲಿ. ನನಗ ಮಾಡೋದಕ್ಕೆ ಬೇರೆ ಕೆಲಸ ಇಲ್ವಾ..? ಎಲ್ಲ ವಿಚಾರದಲ್ಲೂ ಮೂಗು ತೂರಿಸುವುದಕ್ಕೆ ನಾನು ಸಾ.ರಾ. ಮಹೇಶ್‌ ಅಲ್ಲ ಎಂದು ಟೀಕಿಸಿದರು.