Asianet Suvarna News Asianet Suvarna News

Mandya : ವಿಧಾನಸಭಾ ಚುನಾವಣೆಯಲ್ಲಿ ದರ್ಶನ್‌ ಪುಟ್ಟಣ್ಣಯ್ಯ ಗೆಲ್ಲಿಸುವುದೇ ಗುರಿ'

ತಾಲೂಕು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತಸಂಘ ತೊರೆಯುವುದಾಗಿ ಕೆಲವರು ನನ್ನ ವಿರುದ್ಧ ಕ್ಷೇತ್ರದಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ರೈತಸಂಘ ನಿಕಟಪೂರ್ವ ಅಧ್ಯಕ್ಷ ಚಿಕ್ಕಾಡೆ ಹರೀಶ್‌ ಹೇಳಿದರು.

I am not leaving Raitha Sangh: I will not resign Says Chikkade Harish snr
Author
First Published Dec 2, 2022, 5:23 AM IST

 ಪಾಂಡವಪುರ: (ಡಿ. 02):  ತಾಲೂಕು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತಸಂಘ ತೊರೆಯುವುದಾಗಿ ಕೆಲವರು ನನ್ನ ವಿರುದ್ಧ ಕ್ಷೇತ್ರದಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ರೈತಸಂಘ ನಿಕಟಪೂರ್ವ ಅಧ್ಯಕ್ಷ ಚಿಕ್ಕಾಡೆ ಹರೀಶ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರೈತ ನಾಯಕ ದಿ.ಕೆ.ಎಸ್‌.ಪುಟ್ಟಣ್ಣಯ್ಯ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಂಡು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದರ್ಶನ್‌ ಪುಟ್ಟಣ್ಣಯ್ಯ (Darshan Puttannaiah)  ಅವರನ್ನು ಗೆಲ್ಲಿಸುವುದೇ ನಮ್ಮ ಮುಖ್ಯ ಗುರಿ ಎಂದರು.

ನನ್ನ ಕಾರ್ಯವೈಖರಿ ಮತ್ತು ನಡವಳಿಕೆ ಕೆಲವರಿಗೆ ಅಸಮಾಧಾನ ತಂದಿರಬಹುದು. ವೈಯಕ್ತಿಕ ಕಾರಣಗಳಿಗಿಂತ ಸಂಘಟನೆ ಮುಖ್ಯ ಎಂಬ ಉದ್ದೇಶದಿಂದ ಇನ್ನೂ ಒಂದು ವರ್ಷ ಅಧಿಕಾರಾವಧಿ ಇದ್ದರೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.

ರೈತಸಂಘ (Raith Sangh)  ಬಿಡುವ ಪ್ರಶ್ನೆಯೂ ಇಲ್ಲ. ಸಂಘಟನೆಗೆ ಒಡಕು ತರುವ ಕೆಲಸವನ್ನೂ ನಾನು ಎಂದಿಗೂ ಮಾಡಲ್ಲ. ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳ ವಿಚಾರದಲ್ಲಿ ನನದೇನೂ ಅಭ್ಯಂತರವಿಲ್ಲ. ಆದರೆ, ಆಯ್ಕೆ ವಿಚಾರದಲ್ಲಿ ತಾರತಮ್ಯ ನಡೆದಿದೆ ಎಂದರು.

ಎಲ್ಲರನ್ನು ಒಗ್ಗೂಡಿಸಿಕೊಂಡು ತಾಲೂಕು ಕಾರ್ಯಕರ್ತರ ಸಭೆ ಕರೆದು ಚರ್ಚೆ ನಡೆಸಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕಿತ್ತು. ಅದನ್ನು ಬಿಟ್ಟು ಧರಣಿ ನಡೆಯುವ ಸ್ಥಳದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದಾರೆ. ನಾಯಕರಿಗಿಂತ ಕಾರ್ಯಕರ್ತರು ಮತ್ತು ಸಂಘಟನೆ ಮುಖ್ಯ ಎಂದರು.

ಹೋರಾಟ ಮುಖ್ಯ

ಭಾರತೀನಗರ (ಅ.03):ರೈತರ ಬದುಕು ಅಸನಾಗಲು ರೈತಸಂಘಟನೆ ಹೋರಾಟ ಅತಿಮುಖ್ಯ ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ದರ್ಶನ್‌ ಪುಟ್ಟಣ್ಣಯ್ಯ ಹೇಳಿದರು.

ಅಣ್ಣೂರು ಗ್ರಾಮದಲ್ಲಿ ರೈತಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುವ ಮೊದಲೇ ಎಚ್ಚೆತ್ತುಕೊಂಡು ರೈತರ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡಬೇಕಾಗಿದೆ ಎಂದರು.

ರೈತಸಂಘದಲ್ಲಿ ದುಡಿಯುವಂತಹ ಕಾರ್ಯಕರ್ತರು ಯಾವುದೇ ಸ್ವಾರ್ಥಗಳನ್ನು ಇಟ್ಟುಕೊಳ್ಳಬಾರದು. ರೈತರ (Farmers ) ಬದುಕಿಗಾಗಿ ಹೋರಾಟ ನಡೆಸಬೇಕು. ಅಂತಹವರಿಗೆ ಮಾತ್ರ ರೈತ ಸಂಘ ಮನ್ನಣೆ ನೀಡುತ್ತದೆ. ಇಲ್ಲದಿದ್ದರೆ ಸಂಘದಿಂದ ಉಚ್ಚಾಟನೆಗೊಳಿಸಲಾಗುವುದು ಎಂದರು.

ರಾಜ್ಯರೈತ ಸಂಘದ ಮುಖಂಡ ಪ್ರಸನ್ನ ಎನ್‌.ಗೌಡ ಮಾತನಾಡಿ, ರೈತರು ಕಬ್ಬು (Sugar Cane) ಬೆಳೆದು ನಷ್ಟಕೊಳಗಾಗುತ್ತಿದ್ದಾರೆ. ಟನ್‌ ಕಬ್ಬಿಗೆ 5700 ರು. ರೈತರಿಗೆ ಖರ್ಚು ಬೀಳುತ್ತಿದೆ. ಸರ್ಕಾರವನ್ನು ಒತ್ತಾಯಿಸಿದರೆ ಯಾವುದೇ ಪ್ರತಿಫಲ ಸಿಗುತ್ತಿಲ್ಲ. ಇದಕ್ಕೆಲ್ಲಾ ನಮ್ಮ ಜನಪ್ರತಿನಿಧಿಗಳೇ ಕಾರಣರಾಗಿದ್ದಾರೆ. ಕನಿಷ್ಠ ಟನ್‌ ಕಬ್ಬಿಗೆ 4500 ರು. ನಿಗಧಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕೆಆರ್‌ಎಸ್‌ ಅಣೆಕಟ್ಟೆಸುತ್ತ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಇದನ್ನು ತಡೆಯಲು ಮುಂದಾಗಬೇಕು. ರೈತರ ಅಭಿವೃದ್ಧಿ, ಕೈಗಾರಿಕಾ ಪ್ರದೇಶ ಅಭಿವೃದ್ಧಿ ಹಾಗೂ ಇನ್ನಿತರೆ ಉದ್ದೇಶಗಳ ಅಭಿವೃದ್ಧಿಗಾಗಿ ರೈತಸಂಘ ಹೋರಾಟ ಅತಿ ಮುಖ್ಯವಾಗಿದೆ ಎಂದರು.

ಜಲಜೀವನ್‌ ಮೀಷನ್‌ ಯೋಜನೆಯಡಿ ಮೀಟರ್‌ ಅಳವಡಿಕೆ ಮತ್ತು ರೈತರ ಬೋರ್‌ ವೆಲ್‌ಗೆ (Borewell) ಮೀಟರ್‌ ಅಳವಡಿಕೆಗೆ ಬಂದರೆ ಅಧಿಕಾರಿಗಳನ್ನು ಕಂಬಕ್ಕೆ ಕಟ್ಟಿಹಾಕಿ ಮೀಟರ್‌ ಅಳವಡಿಕೆಗೆ ಅವಕಾಶಕೊಡಬೇಡಿ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ರೈತ ಸಂಘದ ಮುಖಂಡ ಎಸ್‌.ಸಿ.ಮಧುಚಂದನ್‌ ಮಾತನಾಡಿ, ರೈತರ ಬೇಡಿಕೆಗಳ ಈಡೇರಿಕೆಗಾಗಿ ಅ.5ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಲ್ಲೆಯ 5 ಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ರೈತರು ಆಗಮಿಸಿ ಬೆಂಬಲ ನೀಡಬೇಕು ಎಂದು ಕೋರಿದರು.

ಕಾರ್ಯಕ್ರಮಕ್ಕೂ ಮೊದಲು ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ಹೆದ್ದಾರಿಯಿಂದ ಎತ್ತಿನಗಾಡಿಯ ಮೂಲಕ ರೈತಮುಖಂಡರನ್ನು ಮೆರವಣಿಗೆ ನಡೆಸಿ ಪಟಾಕಿ ಸಿಡಿಸಿ ಗ್ರಾಮಕ್ಕೆ ಬರಮಾಡಿಕೊಂಡರು. ಗ್ರಾಮದ ಮುಖ್ಯದ್ವಾರದಲ್ಲಿ ಗ್ರಾಮಘಟಕದ ನಾಮಫಲಕ ಅನಾವರಣಗೊಳಿಸಿದರು.

ನಮ್ಮ ನಾಯಕರಾದ ದರ್ಶನ್‌ ಪುಟ್ಟಣ್ಣಯ್ಯ ವಿದೇಶದಿಂದ ಬಂದ ನಂತರ ಕೂಲಂಕುಶವಾಗಿ ಚರ್ಚಿಸಿ ಕೈಗೊಳ್ಳಬೇಕಿದ್ದ ತೀರ್ಮಾನಗಳನ್ನು ತರಾತುರಿಯಾಗಿ ಆಯ್ಕೆ ಮಾಡಿದ್ದಾರೆ. ಈ ಎಲ್ಲ ವಿಚಾರಗಳು ಸಂಘದ ಜಿಲ್ಲಾಧ್ಯಕ್ಷ ಎ.ಎಲ ಕೆಂಪೂಗೌಡರಿಗೂ ಗೊತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರೈತಸಂಘ ಮುಖಂಡರಾದ ಬೀರಶೆಟ್ಟಹಳ್ಳಿ ಗಿರೀಶ್‌, ಡಿಂಕಾ ನಂಜೇಗೌಡ, ಡಾಮಡಹಳ್ಳಿ ಪ್ರಭುಸ್ವಾಮಿ, ಚಿಕ್ಕಾಡೆ ನಾಗರಾಜು, ಮಲ್ಲಿಗೆರೆ ರಾಜು, ಕೆರೆತೊಣ್ಣೂರು ಹರೀಶ್‌, ಗಾಣದಹೊಸೂರು ಪುನೀತ್‌, ಕಾರ್ತಿಕ್‌ ಇತರರು ಇದ್ದರು.

Follow Us:
Download App:
  • android
  • ios