ನಿಮ್ಮ ಸಮಸ್ಯೆ ಬಗೆಹರಿಸಲು ಜೀವನ ಮುಡಿಪಿಡುವೆ

2023ರ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಜೀವನ ಮುಡಿಪಾಗಿಡುತ್ತೇನೆ. ಪಂಚರತ್ನ ರಥಯಾತ್ರೆಯ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

I dedicated to my Life For  solving your problems HDK snr

  ಶಿರಾ (ಡಿ. 29):  2023ರ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಜೀವನ ಮುಡಿಪಾಗಿಡುತ್ತೇನೆ. ಪಂಚರತ್ನ ರಥಯಾತ್ರೆಯ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಬೆಂಚೆ ಗೇಟ್‌ನಿಂದ ಆರಂಭವಾದ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬಂದರೆ ರೈತರು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಪ್ರತಿ ಎಕರೆಗೆ 10 ಸಾವಿರ ರು.ಗಳನ್ನು ಪ್ರತಿ ಕುಟುಂಬಕ್ಕೆ ನೀಡಲಾಗುವುದು, ಪ್ರತಿಯೊಂದು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 30 ಹಾಸಿಗೆಗೆಳ ಆಸ್ಪತ್ರೆ ಆರಂಭಿಸಿ ತಜ್ಞ ವೈದ್ಯರನ್ನು ನೇಮಕ ಮಾಡಿ ಪ್ರತಿಕುಟುಂಬದ ಆರೋಗ್ಯದ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ರೈತರ ಸಾಲಮನ್ನಾ ಮಾಡಿದ್ದು ಇದೆ ಕುಮಾರ ಸ್ವಾಮಿ, ಈ ಬಾರಿ ಮಳೆಯಿಂದಾಗಿ ಉಂಟಾಗಿರುವ ನಷ್ಟವನ್ನು ಸರಿಪಡಿಸಲು ರೈತರಿಗೆ ಅನುಕೂಲ ಮಾಡಿಕೊಡುವೆ, ಯುವಕರು ಮತ್ತು ರೈತರ ಮಕ್ಕಳಿಗೆ ಅನುಕೂಲ ಮಾಡಿಕೊಡುವೆ, ಮನೆಯಿಲ್ಲದವರಿಗೆ ಪ್ರತಿಯೊಬ್ಬರಿಗೂ ಮನೆ ಕಟ್ಟಿಸಿಕೊಡುವೆ, ವೃದ್ಧರಿಗೆ ಪ್ರತಿ ತಿಂಗಳು ರು.5 ಸಾವಿರ ವೇತನ ಕೊಡಿಸುವೆ, ಪಂಚರತ್ನ ಯೋಜನೆಯಿಂದ ಪ್ರತಿಯೊಂದು ಕುಟುಂಬದಲ್ಲೂ ಬದಲಾವಣೆ ತರುವೆ. ಜೆಡಿಎಸ್‌ ಬೆಂಬಲಿಸಿ, ನಿಮ್ಮೆಲ್ಲರ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಎರಡು ಬಾರಿ ಹೃದಯ ಚಿಕಿತ್ಸೆ ಆಗಿದ್ದರೂ ಸಹ ಲೆಕ್ಕಿಸದೆ ಬಡವರ ಬದುಕನ್ನು ಹಸನು ಮಾಡಲು ಜೀವನ ಮುಡಿಪಾಗಿಟ್ಟು ಜನರ ಬಳಿಗೆ ತೆರಳಿ ಮತಯಾಚನೆ ಮಾಡುತ್ತಿದ್ದೇನೆ ಎಂದರು.

ಶಾಲಾ ಬ್ಯಾಗ್‌ ವಿಶೇಷ ಹಾರ: ಬುಕ್ಕಾಪಟ್ಟಣ ಹೋಬಳಿಯ ಕಂಚಿಗಾನಹಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ಆಗಮಿಸಿದಾಗ ಶಾಲಾ ಮಕ್ಕಳ ಬ್ಯಾಗ್‌ಗಳಿಂದ ತಯಾರಿಸಿದ್ದ ವಿಶಿಷ್ಠವಾದ ಹಾರವನ್ನು ಹಾಕಿ ಎಚ್‌.ಡಿ.ಕುಮಾಸ್ವಾಮಿಯವರನ್ನು ಬರಮಾಡಿಕೊಳ್ಳಲಾಯಿತು. ಆ ಮಾಲೆಯ ಮೇಲೆ ‘ಸರ್ಕಾರಿ ಶಾಲೆಗಳನ್ನು ಹೈಟೆಕ್‌ ಮಾಡಿಸಿ, ಬಡವರ ಮಕ್ಕಳಿಗೂ ಕಾನ್ವೆಂಟ್‌ ಶಿಕ್ಷಣ ಬೇಕ್ರಯ್ಯ’ಎಂದು ಬರೆದಿತ್ತು. ಈ ವಿಭಿನ್ನ ಹಾರವನ್ನು ಕಂಡ ಕುಮಾಸ್ವಾಮಿಯವರು ಆಶ್ಚರ್ಯಚಕಿತರಾದರು. 2ನೇ ಪಿಯುಸಿವರೆಗೆ ಅತ್ಯುತ್ತಮ ಗುಣಮಟ್ಟದ ಉಚಿತ ಶಿಕ್ಷಣ ನೀಡುವುದು ಪಂಚರತ್ನ ಯೋಜನೆಯ ಭಾಗವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಚಿಕ್ಕನಾಯಕನಹಳ್ಳಿ ಜೆಡಿಸ್‌ ಅಭ್ಯರ್ಥಿ ಸಿ.ಬಿ. ಸುರೇಶ್‌ ಬಾಬು, ರೇಷ್ಮೆ ನಿಗಮದ ಮಾಜಿ ಅಧ್ಯಕ್ಷರು ಹಾಗೂ ತುಮಕುರು ಹಾಲು ಒಕ್ಕೂಟದ ನಿರ್ದೇಶಕ ಎಸ್‌.ಆರ್‌.ಗೌಡ, ಜಿ.ಪಂ. ಮಾಜಿ ಸದಸ್ಯರಾದ ಜಯಪ್ರಕಾಶ್‌, ಶಿರಾ ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌.ಉಗ್ರೇಶ್‌, ಶಿರಾ ನಗರಸಭೆ ಅಧ್ಯಕ್ಷ ಬಿ.ಅಂಜಿನಪ್ಪ, ಕಲ್ಕೆರೆ ರವಿಕುಮಾರ್‌, ರವಿಶಂಕರ್‌, ಮುದ್ದುಗಣೇಶ್‌ ಸೇರಿದಂತೆ ಹಲವರು ಹಾಜರಿದ್ದರು.

ಮೀಸಲು ಚುನಾವಣಾ ಗಿಮಿಕ್

 ಮದ್ದೂರು:  ಪರಿಶಿಷ್ಟಜಾತಿ, ಪರಿಶಿಷ್ಟಪಂಗಡ ಹಾಗೂ ಪಂಚಮಸಾಲಿ ಸಮುದಾಯಗಳಿಗೆ ಮೀಸಲು ನೀಡುವ ವಿಚಾರದಲ್ಲಿ ರಾಜ್ಯಸರ್ಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಇದೊಂದು ಎಲೆಕ್ಷನ್‌ ಗಿಮಿಕ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಗೆಜ್ಜಲಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚುನಾವಣಾ (Election)  ಗಿಮಿಕ್‌ ಮಾಡಿಕೊಂಡು ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುವುದಿಲ್ಲ. ಆ ಕೆಲಸ ಈಗಿನ ಸರ್ಕಾರದಿಂದ ನಡೆಯುತ್ತಿದೆ. ಮೀಸಲಾತಿ (Resarvation)  ವಿಚಾರದಲ್ಲಿ ಕಾನೂನಾತ್ಮಕವಾಗಿ ಮತ್ತು ವೈಜ್ಞಾನಿಕವಾಗಿ ಆಲೋಚನೆ ಮಾಡಿ ಸಮುದಾಯಗಳ ಬೇಡಿಕೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದು ಸರ್ಕಾರಗಳ ಕರ್ತವ್ಯವಾಗಬೇಕು ಎಂದು Kumaraswamy  ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯಾವ ಯಾವ ಸಮಾಜಗಳಲ್ಲಿ ಏನೆಲ್ಲಾ ಪರಿಸ್ಥಿತಿಗಳಿವೆ ಎಂಬುದನ್ನು ಪ್ರಾಮಾಣಿಕವಾಗಿ ಅರಿಯಬೇಕು. ವಾಸ್ತವಾಂಶಗಳ ಹಿನ್ನೆಲೆಯಲ್ಲಿ ಎಲ್ಲವೂ ತೀರ್ಮಾನವಾಗಬೇಕು. ಆಗ ಸಮುದಾಯಗಳಿಗೆ ಶಾಶ್ವತವಾದ ಪರಿಹಾರ ಸೂಚಿಸಿ ಅನುಕೂಲ ಕಲ್ಪಿಸಿಕೊಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಚುನಾವಣಾ ಉದ್ದೇಶದಿಂದ ಸಮುದಾಯಗಳ ಮೂಗಿಗೆ ತುಪ್ಪ ಸವರುವುದು ಆ ಸಮಾಜದವರನ್ನು ವಂಚಿಸಿದಂತೆಯೇ ಸರಿ. ಪಂಚಮಸಾಲಿ ಸಮಾಜ ಕೃಷಿಯನ್ನೇ ನಂಬಿ ಬದುಕುತ್ತಿರುವ ಸಮಾಜ. ಅವರಲ್ಲೂ ಬಡತನವಿದೆ. ವೀರಶೈವ ಸಮಾಜದಲ್ಲೂ ಹಲವಾರು ಪಂಗಡಗಳಿದ್ದು, ಒಂದೊಂದು ಪಂಗಡ ಒಂದೊಂದು ವೃತ್ತಿ ಮಾಡುತ್ತಿದೆ. ಪಂಚಮಸಾಲಿ ಜನಾಂಗದವರು ಕೃಷಿಯನ್ನೇ ನಂಬಿರುವುದರಿಂದ ರೈತರ ಪರಿಸ್ಥಿತಿ ಏನೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಾಗಿ, ಅವರು ಬೇಡಿಕೆ ಇಟ್ಟಿರುವುದರಲ್ಲಿ ತಪ್ಪಿಲ್ಲ. ಅದನ್ನು ಯಾರೂ ಅಲ್ಲಗೆಳೆಯಲಾಗುವುದೂ ಇಲ್ಲ. ಆದರೆ, ಮೀಸಲು ಕಲ್ಪಿಸುವಾಗ ಕಾನೂನಾತ್ಮಕ, ವಾಸ್ತವಾಂಶಗಳನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.

Latest Videos
Follow Us:
Download App:
  • android
  • ios