ಬೆಂಗಳೂರು [ಅ.07]:  ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್‌ ಸಹೋದರ ಚೆನ್ನರಾಜ್‌ ಹಟ್ಟಿಹೊಳಿ ಅವರು ಕಾಂಗ್ರೆಸ್‌ನ ಅನರ್ಹಗೊಂಡಿರುವ ಶಾಸಕ ರಮೇಶ್‌ ಜಾರಕಿಹೊಳಿ ಅವರನ್ನು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಈ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚೆನ್ನರಾಜ್‌ ಅವರು ರಮೇಶ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  

ಈ ಬಗ್ಗೆ ಮಾಧ್ಯಮಗಳಿಂದ ವಿಷಯ ತಿಳಿದುಕೊಂಡಿದ್ದೇನೆ. ಅವರಿಬ್ಬರ ನಡುವೆ ಮೊದಲಿಂದಲೂ ಉತ್ತಮ ಸಂಬಂಧವಿದೆ. ಹಾಗಾಗಿ ಭೇಟಿ ಮಾಡಿರಬಹುದು ಎಂದು ನಗುತ್ತಲೇ ಉತ್ತರ ನೀಡಿದರು.