Asianet Suvarna News Asianet Suvarna News

Mandya : ಮತ್ತೊಬ್ಬರಿಂದ ಬುದ್ಧಿ ಹೇಳಿಸಿಕೊಳ್ಳುವ ಅಗತ್ಯವಿಲ್ಲ

ಮೇಲುಕೋಟೆ ಕ್ಷೇತ್ರದ ಶಾಸಕನಾದ ಬಳಿಕ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಿದ್ದೇನೆ. ಕ್ಷೇತ್ರ ಅಭಿವೃದ್ಧಿ ವಿಚಾರದಲ್ಲಿ ಮತ್ತೊಬ್ಬರಿಂದ ಬುದ್ಧಿ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು.

I Dont want To Take Advise from Others Says Puttaraju snr
Author
First Published Dec 16, 2022, 5:37 AM IST

 ಪಾಂಡವಪುರ (ಡಿ. 16): ಮೇಲುಕೋಟೆ ಕ್ಷೇತ್ರದ ಶಾಸಕನಾದ ಬಳಿಕ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಿದ್ದೇನೆ. ಕ್ಷೇತ್ರ ಅಭಿವೃದ್ಧಿ ವಿಚಾರದಲ್ಲಿ ಮತ್ತೊಬ್ಬರಿಂದ ಬುದ್ಧಿ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್‌ (TAMCMS)  ರೈತ ಸಭಾಂಗಣದಲ್ಲಿ ನಡೆದ ಪಂಚರತ್ನ ರಥ ಯಾತ್ರೆಯ ಪೂರ್ವಭಾವಿ ಹಾಗೂ ಪುನೀತೋತ್ಸವ ಯಶಸ್ಸಿನ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ನಾನು 2004ರಲ್ಲಿ ಮೊದಲ ಬಾರಿಗೆ ಶಾಸಕನಾಗಿದ್ದ (MLA)  ವೇಳೆ ಕ್ಷೇತ್ರ ಹೇಗಿತ್ತು. ಇದೀಗ ಕ್ಷೇತ್ರ ಹೇಗಿದೆ ಎನ್ನುವುದನ್ನು ಕ್ಷೇತ್ರದ ಜನತೆಯೇ ಹೇಳುತ್ತಿದ್ದಾರೆ. ನಾನು ಶಾಸಕನಾಗ ಬಳಿಕ ಸರ್ಕಾರಗಳಿಂದ ನೂರಾರು ಕೋಟಿ ಅನುದಾನವನ್ನು ತಂದು ಜಿಲ್ಲೆಗೆ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸುವ ಕೆಲಸ ಮಾಡಿದ್ದೇನೆ ಎಂದರು.

ನಾನು ಶಾಸಕನಾದ ಬಳಿಕ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಎಷ್ಟರ ಮಟ್ಟಿಗೆ ಕೆಲಸ ಮಾಡಿದ್ದೇನೆ. ಏನೇನು ಕೆಲಸ ಮಾಡಿದ್ದೇನೆ ಎನ್ನುವ ಅಂಕಿ ಅಂಶಗಳ ಮೂಲಕ ಮುಂದಿನ ದಿನಗಳಲ್ಲಿ ಪುಸ್ತಕ ರೀತಿಯಲ್ಲಿ ಹೊರತಂದು ಪಂಚಾಯ್ತಿ ಮಟ್ಟದಲ್ಲಿ ಹಂಚಿಕೆ ಮಾಡುತ್ತೇನೆ. ಅಭಿವೃದ್ಧಿ ವಿಚಾರವಾಗಿ ಇನ್ನೊಬ್ಬರಿಂದ ಬುದ್ಧಿ ಹೇಳಿಸಿಕೊಳ್ಳುವ ಅಗತ್ಯ ನನಗಿಲ್ಲ ಎಂದು ವಿರೋಧಿಗಳ ವಿರುದ್ಧ ಕಿಡಿಕಾರಿದರು.

ಸಂಸದನಾಗಿದ್ದಾಗ ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಿಸಿದ್ದೇನೆ. ನಾಗಮಂಗಲದ ಬಳಿ ನೂರು ಕೋಟಿ ವೆಚ್ಚದಲ್ಲಿ ಆಯುವೇದ ಆಸ್ಪತ್ರೆ ಮಾಡಿಸಿದ್ದೇನೆ. ಶ್ರೀರಂಗಪಟ್ಟಣ-ಬೀದರ್‌ ರಸ್ತೆ ಅಭಿವೃದ್ಧಿ ಪಡಿಸಿದ್ದೇನೆ. ಸಣ್ಣ ನೀರಾವರಿ ಸಚಿವನಾಗಿದ್ದ ವೇಳೆ ನೂರಾರು ಕೋಟಿಯಲ್ಲಿ ಏತ ನೀರಾವರಿ ಯೋಜನೆಗಳು, ಕೆರೆಗಳ ನಿರ್ಮಾಣ ಮಾಡಿಸಿ ಪ್ರಗತಿಗೆ ಒತ್ತು ನೀಡಿದ್ದೇನೆ. ಗ್ರಾಮೀಣ ರಸ್ತೆಗಳು, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳು, ತಾಲೂಕುಗೆ ಮೂರು ಪ್ರಥಮ ಧರ್ಜೆ ಕಾಲೇಜು, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಹಲವಾರು ವಿದ್ಯುತ್‌ ಸಬ… ಸ್ಟೇಷನ್‌ಗಳ ಮಂಜೂರು ಮಾಡಿಸಿದ್ದೇನೆ ಎಂದರು.

ಕಾಂಗ್ರೆಸ್‌ನಿಂದ ಪಕ್ಷ ಅಡಮಾನ:

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಕಾಂಗ್ರೆಸ್‌ ಪಕ್ಷವನ್ನು ಕ್ಷೇತ್ರದಲ್ಲಿ ಚುನಾವಣೆ ವೇಳೆ ಮತ್ತೊಂದು ಪಕ್ಷಕ್ಕೆ ಅಡಮಾನ ಇಡುತ್ತಾರೆ. ಇವರಿಂದ ನನಗೆ ಬುದ್ಧಿ ಮಾತು ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಅಭ್ಯರ್ಥಿ ಹಾಕಿ ಸಂಘಟನೆ ಮಾಡಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಹಾಕಿ ಎಂಎಲ…ಎ ಮಾಡಿ ಬ್ಯಾಡ ಎಂದವರು ಯಾರು. ಚುನಾವಣೆಗೆ ಹೆದರಿ ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ ಎಂದು ಸವಾಲು ಹಾಕಿದರು.

ಕೋವಿಡ್‌ (Covid)  ವೇಳೆ ಕ್ಷೇತ್ರದಲ್ಲಿ ಜನರ ಮಧ್ಯೆ ಇದ್ದು ಸೇವೆ ಮಾಡಿದ್ದಾರೆ ಎನ್ನುವುದು ಕ್ಷೇತ್ರದ ಜನರಿಗೆ ಗೊತ್ತಿದೆ. ಕ್ಷೇತ್ರದಲ್ಲಿ ಹಲವು ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ದುದ್ದ ಹೋಬಳಿಯ ಏತನೀರಾವರಿ ಯೋಜನೆ ಮುಕ್ತಾಯ ಹಂತದಲ್ಲಿದ್ದು ನೀರೆತ್ತುವ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಪುನೀತೋತ್ಸವದಲ್ಲಿ ಶ್ರಮಿಸಿದ ಪಟ್ಟಣದ ಪೌರ ಕಾರ್ಮಿಕರನ್ನು ಶಾಸಕ ಸಿ.ಎಸ್‌.ಪುಟ್ಟರಾಜು ಅಭಿನಂದಿಸಿದರು. ಸಭೆಯಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ರಮೇಶ್‌, ಮಾಜಿ ಶಾಸಕರಾದ ಜಿ.ಬಿ. ಶಿವ ಕುಮಾರ್‌, ಮನ್ಮುಲ… ಅಧ್ಯಕ್ಷ ಬಿ.ಆರ್‌.ರಾಮಚಂದ್ರು, ಪಂಚರತ್ನ ಮೇಲುಕೋಟೆ ಉಸ್ತುವಾರಿ ಮಾಜಿ ಮೇಯರ್‌ ಲಿಂಗಪ್ಪ, ತಾಲೂಕು ಅಧ್ಯಕ್ಷ ಎಸ್‌.ಮಲ್ಲೇಶ್‌, ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷ ಶಿವಣ್ಣ, ಜಿ ಪಂ ಮಾಜಿ ಸದಸ್ಯ ಸಿ. ಅಶೋಕ್‌, ಪಿ ಎಲ್ಡಿ ಬ್ಯಾಂಕ್‌ ಅಧ್ಯಕ್ಷ ಎಂ. ಸಿ.ಯಶವಂತ್‌ಕುಮಾರ್‌, ಟಿಎಪಿಸಿಎಂಎಸ್‌ ಅಧ್ಯಕ್ಷ ಡಿ.ಶ್ರೀನಿವಾಸ್‌, ಪುರಸಭೆ ಅಧ್ಯಕ್ಷೆ ಅರ್ಚನಚಂದ್ರು, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಗುರುಸ್ವಾಮಿ, ನಂಜೇಗೌಡ, ವೈರಮುಡಿಗೌಡ, ಲಿಂಗರಾಜು, ದ್ಯಾವಪ್ಪ ಸೇರಿದಂತೆ ಹಲವು ಹಾಜರಿದ್ದರು.

Follow Us:
Download App:
  • android
  • ios