ಬೆಂಗಳೂರು [ಡಿ.06]: ನನಗೆ ಈ ಉಪಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಕಿರುಕುಳ ಆಗಿದೆ. ಚುನಾವಣೆ ನಂತರ ಈ ಬಗ್ಗೆ ಬಹಿರಂಗಪಡಿಸುತ್ತೇನೆ ಎಂದು ಶಿವಾಜಿನಗರ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಹೇಳಿದ್ದಾರೆ.

ಗುರುವಾರ ಕ್ಷೇತ್ರದ ದಿ ಯುನೈಟೆಡ್‌ ಥಿಯಾಲಾಜಿಕಲ್‌ ಕಾಲೇಜಿನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಮತದಾರರು ಮತಗಟ್ಟೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಅಭ್ಯರ್ಥಿ ಆಯ್ಕೆಗೆ ಮತದಾನ ಮಾಡುವ ಮೂಲಕ ಈ ಹಬ್ಬ ಆಚರಿಸಬೇಕು ಎಂದರು. 

ಮತ್ತೆ ಆಪರೇಷನ್‌ ನಡೆಸಿದ್ರೆ ಜನ ಅಟ್ಟಾಡಿಸಿ ಹೊಡೀತಾರೆ...

ಈ ಬಾರಿ ಜನರು ನನ್ನನ್ನು ಕೈಬಿಡುವುದಿಲ್ಲ ಎಂಬ ನಂಬಿಕೆ ಇದೆ. ಈ ಚುನಾವಣೆಯಲ್ಲಿ ನನಗೆ ಸಾಕಷ್ಟುಕಿರುಕುಳ ಆಗಿದೆ. ಅದೆಲ್ಲವನ್ನೂ ಚುನಾವಣೆ ನಂತರ ಬಹಿರಂಗಪಡಿಸುತ್ತೇನೆ ಎಂದರು.

ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಿಜ್ವಾನ್ ಅರ್ಷದ್ ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಸರವಣ ಸ್ಪರ್ಧೆ ಮಾಡಿದ್ದರು. ಡಿಸೆಂಬರ್ 9 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.