Asianet Suvarna News Asianet Suvarna News

ಲಕ್ಷ್ಮಿ ಹೆಬ್ಬಾಳಕರ ಬಿಜೆಪಿಗೆ ಬಂದರೆ ಸ್ವಾಗತ: ಡಿಸಿಎಂ ಲಕ್ಷ್ಮಣ ಸವದಿ

ಹೆಬ್ಬಾಳಕರ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರುವ ವಿಚಾರದಲ್ಲಿ ಹಾಗೆ ಹೇಳಿರಬಹುದು| ಉಪಚುನಾವಣೆ ಬಳಿಕ ಇನ್ನಷ್ಟು ಜನ ಕಾಂಗ್ರೆಸ್‌ನಿಂದ ಬಿಜೆಪಿಗೆ ಬರಬಹುದು| ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಅಂತಾ ಅಲ್ಲಿನ ಬಹುತೇಕರಿಗೆ ಮನವರಿಕೆ ಆಗಿದೆ| ಅಲ್ಲಿನ ವಾತಾವರಣ ನೋಡಿ ಬಿಜೆಪಿಗೆ ಬಂದ್ರೆ ಒಳ್ಳೆ ಭವಿಷ್ಯ ಅಂತಾ ಅನೇಕರು ತಿಳಿದಿದ್ದಾರೆ| ಮುಂದಿನ ದಿನಗಳಲ್ಲಿ ಇನ್ನು ಬಹಳಷ್ಟು ಜನ ಬಿಜೆಪಿಗೆ ಬರಬಹುದು ಎಂದ ಸವದಿ|

I Heartly Welcome to If Laxmi Hebbalkar Join to BJP
Author
Bengaluru, First Published Nov 24, 2019, 10:38 AM IST

ಅಥಣಿ(ನ.24): ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನನ್ನ ಸಹೋದರಿ ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ.ಅವರು ಸಿಕ್ಕರೆ ಈ ಬಗ್ಗೆ ಮಾತನಾಡುತ್ತೇನೆ. ರಾಜಕೀಯ ದೃವೀಕರಣ ಹಿನ್ನೆಲೆ ಅವರು ಕಾಂಗ್ರೆಸ್ ಪಕ್ಷ್ ಬಿಟ್ಟು ಬಿಜೆಪಿಗೆ  ಬರಬಹುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. 

ಬೆಳಗಾವಿ ರಾಜಕೀಯ ಬದಲಿಸಬಲ್ಲೇ ಎಂಬ ಹೆಬ್ಬಾಳಕರ ಹೇಳಿಕೆಗೆ ಭಾನುವಾರ ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರುವ ವಿಚಾರದಲ್ಲಿ ಹಾಗೆ ಹೇಳಿರಬಹುದು. ಉಪಚುನಾವಣೆ ಬಳಿಕ ಇನ್ನಷ್ಟು ಜನ ಕಾಂಗ್ರೆಸ್‌ನಿಂದ ಬಿಜೆಪಿಗೆ ಬರಬಹುದು. ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಅಂತಾ ಅಲ್ಲಿನ ಬಹುತೇಕರಿಗೆ ಮನವರಿಕೆ ಆಗಿದೆ. ಅಲ್ಲಿನ ವಾತಾವರಣ ನೋಡಿ ಬಿಜೆಪಿಗೆ ಬಂದ್ರೆ ಒಳ್ಳೆ ಭವಿಷ್ಯ ಅಂತಾ ಅನೇಕರು ತಿಳಿದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಬಹಳಷ್ಟು ಜನ ಬಿಜೆಪಿಗೆ ಬರಬಹುದು ಎಂದು ತಿಳಿಸಿದ್ದಾರೆ. 

ಬೆಳಗಾವಿ ರಾಜಕಾರಣ ಬದಲು ಮಾಡಿ ತೋರಿಸ್ತೇನೆ: ಲಕ್ಷ್ಮೀ ಹೆಬ್ಬಾಳಕರ

ಶನಿವಾರ ಸಿಎಂ ಯಡಿಯೂರಪ್ಪ ಅವರು ನನ್ನ ಭಾಷಣದ ಬಳಿಕ‌ ಭಾವುಕರಾಗಿದ್ದರು.ನಾನೇ ಅಭ್ಯರ್ಥಿ ಆಗಬೇಕು ಅಂತ ಕಾರ್ಯಕರ್ತರು ಬಯಸಿದ್ರು, ಹೀಗಾಗಿ ಕಾರ್ಯಕರ್ತರಲ್ಲಿ ಗೊಂದಲಗಳಿದ್ದವು. ನಿನ್ನೆ ಸಿಎಂ ಬಂದ ಮೇಲೆ ಆ ಗೊಂದಲಗಳಿಗೆಲ್ಲ ತೆರೆ ಬಿದ್ದಿದೆ ಎಂದು ಹೇಳಿದ್ದಾರೆ. 

ನಾನು ಬಿಚ್ಚು ಮನಸ್ಸಿನಿಂದ ಎಲೆಕ್ಷನ್ ಮಾಡ್ತೇನೋ ಇಲ್ಲೋ ಅನ್ನೋ ಸಂಶಯ ಸಿಎಂ ಯಡಿಯೂರಪ್ಪ ಅವರಿಗಿತ್ತು. ಆದರೆ ನಿನ್ನೆ ಅವರಿಗೆ ಎಲ್ಲವೂ ಕ್ಲಿಯರ್ ಆಗಿ ಭಾವುಕರಾಗಿದ್ದರು ಎಂದು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.
 

Follow Us:
Download App:
  • android
  • ios