ಧಾರವಾಡ [ಮಾ.02]:  ಸರ್ಕಾರದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ನಾನು ಪಕ್ಷದ ಪ್ರಧಾನ ಕಾರ್ಯದರ್ಶಿ ಆಗಿ ಕೆಲಸ ಮಾಡುತ್ತಿದ್ದೇನೆ. ಆಡಳಿತದಲ್ಲಿ ಮೂಗು ತೂರಿಸುವ ಕೆಲಸ ಮಾಡುವುದಿಲ್ಲ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರಿಗೂ ವಯಸ್ಸಿಗೂ ಸಂಬಂಧವೇ ಇಲ್ಲ. ಅವರು ಯುವಕರಂತೆಯೇ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಮೃದುಧೋರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಬರುವ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರ ಧೋರಣೆ ಏನು ಎಂಬುದು ತಮಗೆ ತಿಳಿಯಲಿದೆ ಎಂದರು.

ದೊಡ್ಡ ಗೌಡರಿಗೆ ರವಿ ಗುದ್ದು, ರಾಜಕಾರಣದ ದಿಕ್ಕು ಬದಲಾಯಿಸುವ ಮದ್ದು!...

ಯಾರಿಗೂ ನೋವಾಗಬಾರ್ದು:  ಸಾವರ್ಕರ್‌ ಬಗ್ಗೆ ಒಬ್ಬರು ಮಾತನಾಡುವುದು, ದೊರೆಸ್ವಾಮಿ ಬಗ್ಗೆ ಇನ್ನೊಬ್ಬರು ಮಾತನಾಡುವುದೂ ಎರಡೂ ಸರಿಯಲ್ಲ. ದೊರೆಸ್ವಾಮಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು. ಬೇರೆಯವರ ಮನಸ್ಸಿಗೆ ನೋವಾಗುವ ಸಂದರ್ಭ ಅವರು ಸೇರಿದಂತೆ ಯಾರಿಂದಲೂ ಸೃಷ್ಟಿಯಾಗಬಾರದು. ಸಾವರ್ಕರ್‌ ಬಗ್ಗೆ ಮಾತನಾಡುವುದು ಸಹ ಸಹಿಸಿಕೊಳ್ಳಲು ಆಗುವುದಿಲ್ಲ ಎಂದರು.