ನಾನು ಯಾರಿಗೂ ರಸ್ತೆಗೆ ನನ್ನ ಹೆಸರಿಡಿ ಎಂದು ಹೇಳಿಯೇ ಇಲ್ಲ: ಸಿದ್ದರಾಮಯ್ಯ
ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ. ಮೈಸೂರು ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೇ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು(ಜ.11): ನಾನು ಯಾರಿಗೂ ರಸ್ತೆಗೆ ನನ್ನ ಹೆಸರಿಡಿ ಎಂದು ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ. ಮೈಸೂರು ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೇ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ ಎಂದರು.
ಮೈಸೂರು: ಪ್ರಿನ್ಸೆಸ್ ರಸ್ತೆ ಎಂಬುದಕ್ಕೆ ದಾಖಲೆ ಸಲ್ಲಿಸಿದ ಸಂಸದ ಯದುವೀರ್
ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆ ಚರ್ಚೆಯನ್ನ ಮಾಡಿಲ್ಲ ಎಂದು ಅವರು ಹೇಳಿದರು.
ಬೃಹತ್ ನಗರ ಪಾಲಿಕೆ ಮೇಲ್ದರ್ಜೆಗೇರಿಸಲು ಸಿಎಂಗೆ ಜಿಟಿಡಿ ಮನವಿ
ಮೈಸೂರು: ನಗರ ಮತ್ತು ಹೊರವಲಯದ ಪ್ರದೇಶವು ವರ್ಷದಿಂದ ವರ್ಷಕ್ಕೆ ವಿಸ್ತಾರವಾಗುತ್ತಿರುವ ಪರಿಣಾಮ ನಗರ ಪಾಲಿಕೆಯನ್ನು ಬೃಹತ್ ನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಶಾಸಕ ಜಿ.ಟಿ. ದೇವೇಗೌಡ ಮನವಿ ಮಾಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಬೃಹತ್ ನಗರಪಾಲಿಕೆ ಮಾಡುವುದರ ಕುರಿತು ಇರುವ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.
ಕಳೆದ 30 ವರ್ಷಗಳಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ವಾಣಗೊಂಡಿರುವ ಹಾಗೂ ಪ್ರಾಧಿಕಾರದ ಅನುಮೋದನೆ ಆದ ಬಳಿಕ ನಿರ್ವಾಣಗೊಂಡಿರುವ ಖಾಸಗಿ ಬಡಾವಣೆಗಳನ್ನು ಸ್ಥಳೀಯ ಸಂಸ್ಥೆಗಳಾದ ಮೈಸೂರು ನಗರ ಪಾಲಿಕೆ, ಪಪಂ, ನಗರಸಭೆ ಹಾಗೂ ಗ್ರಾಪಂಗಳಿಗೆ ಒಂದೇ ಬಾರಿಗೆ ಖಾತೆ ಮಾಡಿ ಹಸ್ತಾಂತರ ಮಾಡಲಾಗುತ್ತಿದೆ. ಈ ಬಡಾವಣೆಗಳ ಪರಿಸ್ಥಿತಿ ಹೇಳತೀರದು. ಬಡಾವಣೆಗಳಿಗೆ ಮೂಲ ಸೌಲಭ್ಯಗಳು ಇಲ್ಲದೆ ಅಲ್ಲಿನ ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಎಂಡಿಎನಲ್ಲಿ ನಿಧಿ- 1 ಮತ್ತು ನಿಧಿ - 2 ಎಂದು ceಡಿ ಯಾವುದೆ ಬಡಾವಣೆಗಳ ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ, ಆದ್ದರಿಂದ ಇಂತಹ ಬಡಾವಣೆಗಳನ್ನು ಅಭಿವೃದ್ಧಿಪಡಿಸಲು ಗ್ರಾಪಂ, ಪಪಂಗಳಲ್ಲಿ ಅನುದಾನವಿಲ್ಲದ ಕಾರಣ ಈ ಬಡಾವಣೆಗಳನ್ನು ಒಂದು ಬಾರಿ ಅಭಿವೃದ್ಧಿಪಡಿಸಲು ಅನುದಾನ ನೀಡುವಂತೆ ಮನವಿ ಮಾಡಿದರು.
ನಗರದ ಒಳಚರಂಡಿ ನೀರು, ಮಳೆ ನೀರು ಚರಂಡಿ ಮೂಲಕ ನದಿ ಮತ್ತು ಕೆರೆ ಸೇರುತ್ತಿದೆ. ಆದ್ದರಿಂದ ಮೈಸೂರು ನಗರಕ್ಕೆ ಹೊಸದಾಗಿ ಒಳಚರಂಡಿ ವ್ಯವಸ್ಥೆ ಹಾಗೂ ಎಸ್.ಬಿ.ಆರ್ ತಾಂತ್ರಿಕತೆಯ ಮಲಿನ ನೀರು ಸಂಸ್ಕರಣಾ ಘಟಕ ಸ್ಥಾಪಿಸಲು 600 ಕೋಟಿ ರೂ. ಅನುದಾನದ ಅವಶ್ಯಕತೆ ಇದೆ ಎಂದು ಸಭೆಗೆ ತಿಳಿಸಿದರು.
ವಿಜಯನಗರ 4ನೇ ಹಂತದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿದರು. ಡಿ. ದೇವರಾಜು ಅರಸು ನಾಲೆಯ ಕೊನೆಯ ಭಾಗಕ್ಕೆ ಸರಿಯಾದ ಪ್ರವಾಣದಲ್ಲಿ ನೀರು ಹೋಗದೆ ಅಲ್ಲಿನ ರೈತರಿಗೆ ಬಹಳ ತೊಂದರೆ ಆಗುತ್ತಿದೆ. ಆದ್ದರಿಂದ ನಾಲೆಯ ಕೊನೆಯ ಭಾಗಕ್ಕೆ ನೀರು ಹೋಗಲು 141 ಕೋಟಿ ರೂ. ಅನುದಾನ ಒದಗಿಸುವಂತೆ ಅವರು ಕೋರಿದರು.
ಮೈಸೂರು ತಾಲೂಕು ವ್ಯಾಪ್ತಿಯ ಸ್ಮಶಾನಗಳ ಒತ್ತುವರಿ, ಕೆರೆಗಳ ಒತ್ತುವರೆ ಹಾಗೂ ನಾಲೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ ಪ್ರಸ್ತಾಪವಿಟ್ಟರು. ನಗರದ ಪೊಲೀಸ್ ಸರಹದ್ದನ್ನು ತಾಲ್ಲೂಕಿಗೆ ವಿಸ್ತರಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಮೈಸೂರಿನ ಪ್ರವಾಸೋದ್ಯಮದ ದೃಷ್ಟಿಯಿಂದ ಮೈಸೂರು ವಿವಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅವಶ್ಯವಾಗಿರುವ ಮೂಲಸೌಕರ್ಯ ಒದಗಿಸಬೇಕು. ಮೈಸೂರು ವಿವಾನ ನಿಲ್ದಾಣ ಅಭಿವೃದ್ದಿ ಕುರಿತು ಕೇಂದ್ರ ಸರ್ಕಾರದೊಡನೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮೈಸೂರು ಪ್ರಿನ್ಸೆಸ್ ರಸ್ತೆ ಹೆಸರಿನ ಹಿಂದೆ ಇಷ್ಟೊಂದು ದೊಡ್ಡ ಇತಿಹಾಸ ಇದೆಯೇ?
ಹುಯಿಲಾಳು ಹತ್ತಿರ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಸೇರಿದಂತೆ ಶ್ರೀರಾಂಪುರದಿಂದ ಜಯಪುರ ಮಾರ್ಗವಾಗಿ ಎಚ್.ಡಿ. ಕೋಟೆ ಸೇರುವ ರಸ್ತೆ ಅಭಿವೃದ್ಧಿ ಕುರಿತು ಚರ್ಚಿಸಿದರು. ಈಗ ಶ್ರೀರಾಂಪುರದಿಂದ ಉದ್ಬೂರು ಗೇಟ್ ವರೆಗೆ ಜೋಡಿ ರಸ್ತೆ ಮಂಜೂರಾಗಿದ್ದು, ಉಳಿದ ರಸ್ತೆಯನ್ನು ಜೋಡಿ ರಸ್ತೆಯನ್ನಾಗಿ ನಿರ್ಮಿಸುವಂತೆ ಅವರು ಕೋರಿದರು.
ಎಚ್.ಡಿ.ಕೋಟೆ ಶಾಸಕ ಅನಿಲ್ ಕುಮಾರ್ ಮಾತನಾಡಿ, ಎಚ್.ಡಿ. ಕೋಟೆವರೆಗೆ ಜೋಡಿ ರಸ್ತೆ ನಿರ್ಮಿಸುವಂತೆ ಕೋರಿದರು. ಎಲ್ಲದಕ್ಕೂ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡಲೇ ಆರ್ಥಿಕ ಇಲಾಖೆ, ನಗರಾಭಿವೃದ್ಧಿ ಇಲಾಖೆಯೊಡನೆ ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇಲಾಖೆಗಳೊಡನೆ ಚರ್ಚಿಸಿ ಬಜೆಟ್ ನಲ್ಲಿ ಹಣ ನೀಡುವುದಾಗಿ ತಿಳಿಸಿದರು. ನಗರದ ಮುಖ್ಯ ರಸ್ತೆಗಳ ವೈಟ್ ಟ್ಯಾಪಿಂಗ್ ಗಾಗಿ 350 ಕೋಟಿ ನೀಡುವುದಾಗಿ ಹಾಗೂ ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಬಿಲ್ಡಿಂಗ್ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದರು. ನಗರದ ಅಭಿವೃದ್ಧಿಗೆ 350 ಕೋಟಿ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು.