ಎಸ್ಟಿಗೆ ಕಾಡುಗೊಲ್ಲರ ಸೇರ್ಪಡೆಗೆ ನನ್ನ ಸಹಕಾರವಿದೆ : ಶಾಸಕ ಶ್ರೀನಿವಾಸ್
ಕಾಡುಗೊಲ್ಲ ಸಮುದಾಯದ ಎಸ್‌ಟಿ ಮೀಸಲಾತಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಗುಬ್ಬಿ : ಕಾಡುಗೊಲ್ಲ ಸಮುದಾಯದ ಎಸ್‌ಟಿ ಮೀಸಲಾತಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಹಾಗಲವಾಡಿ ಹೋಬಳಿಯ ಜುಂಜಪ್ಪನಹಟ್ಟಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಿಸಿ ರಸ್ತೆಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದರು.
ಜಲಜೀವನ್ ಮಿಷನ್ ಕಳಪೆ ಕಾಮಗಾರಿ ನನ್ನ ಗಮನದಲ್ಲೂ ಇದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಗುಣಮಟ್ಟದ ಕಾಮಗಾರಿ ಮಾಡಲು ತಿಳಿಸುತ್ತೇನೆ. ಪ್ರತಿ ಗ್ರಾಮಕ್ಕೂ ಹೊಸ ಪೈಪ್‌ಲೈನ್ ಮಾಡಿ ಕಾಮಗಾರಿ ಮಾಡಲು ಸೂಚಿಸುತ್ತೇನೆ. ಪ್ರತಿ ಮನೆಮನೆಗೆ ನಲ್ಲಿ ಸಂಪರ್ಕ ಕಾಮಗಾರಿ ತಾಲೂಕಿನಲ್ಲಿ ಬಹುತೇಕ ಆಗಿದ್ದು, ಉಳಿದ ಎಲ್ಲ ಕಾಮಗಾರಿಗಳನ್ನು ಕೂಡಲೇ ಮಾಡಿಸುತ್ತೇನೆ. ಮುಂದಿನ ವಾರ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಘವೇಂದ್ರ, ಕರಿಬಸಮ್ಮ, ಉಪಾಧ್ಯಕ್ಷೆ ನಳಿನಮ್ಮ ಉಮೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ರಮೇಶ್, ವನಿತಾ ರಂಗಸ್ವಾಮಿ, ಮಂಜುನಾಥ್, ಮುಖಂಡರಾದ ಅನಿಲ್‌ಕುಮಾರ, ಉಮೇಶ್, ಯರಣ್ಣ, ಮುದ್ದಣ, ಓಂಕಾರ್, ಕಿಟ್ಟಪ್ಪ, ಮಹೇಶ್, ಈಶಣ್ಣ, ಸಿದ್ದರಾಜು, ವೇಣುಗೋಪಾಲ್, ಹೇಮಂತ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಸಮುದಾಯ ಒಡೆಯುವುದು ಗೊತ್ತಿಲ್ಲ. ಒಗ್ಗೂಡಿಸುವುದಷ್ಟೇ ಗೊತ್ತು
ತುಮಕೂರು : ಸಮುದಾಯ ಒಡೆಯುವುದು ಗೊತ್ತಿಲ್ಲ. ಒಗ್ಗೂಡಿಸುವುದಷ್ಟೇ ಗೊತ್ತು ಎಂದು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾರ್ಮಿಕವಾಗಿ ನುಡಿದರು.
ತುಮಕೂರಿನ ಕನ್ನಡಭವನದಲ್ಲಿ ಶ್ರೀಕೃಷ್ಣ ಗೆಳೆಯರ ಬಳಗ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮ ಮತ್ತು ಗೊಲ್ಲಗಿರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಗೊಲ್ಲ ಸಮುದಾಯದಲ್ಲಿ ಸಂಘಟನೆ ಎಂಬುದು ಕುಸಿತ ಕಾಣುತ್ತಿದೆ. ಇದಕ್ಕೆ ಕಾರಣ ನಮ್ಮಲ್ಲಿರುವ ಗೊಲ್ಲ, ಕಾಡುಗೊಲ್ಲ ಎಂಬ ಗೊಂದಲ. ನಾನಾಗಲಿ, ನಮ್ಮ ಕುಟುಂಬದವರಾಗಲಿ ಎಂದಿಗೂ ಕಾಡುಗೊಲ್ಲರನ್ನು ಎಸ್ಟಿಜಾತಿ ಪಟ್ಟಿಗೆ ಸೇರಿಸಲು ವಿರೋಧ ಮಾಡಿಲ್ಲ. ಆದರೆ ಕೆಲವರು ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ನನಗೆ ಸಮುದಾಯ ಒಡೆಯುವುದು ಗೊತ್ತಿಲ್ಲ. ಒಗ್ಗೂಡಿಸುವುದಷ್ಟೇ ಗೊತ್ತು. ಛಿದ್ರಗೊಂಡಿರುವ ಗೊಲ್ಲ ಸಮುದಾಯದ ಸಂಘಟನೆಗಳು ಒಂದೇ ವೇದಿಕೆಗೆ ಬಂದು ಹೋರಾಟ ರೂಪಿಸಿದಾಗ ಮಾತ್ರ ನಮ್ಮ ಬೇಡಿಕೆಗಳು ಈಡೇರಲು ಸಾಧ್ಯ ಎಂದು ಶಾಸಕಿ ಪೂರ್ಣೀಮ ನುಡಿದರು.
ಮೇ 2ನೇ ವಾರ ಚುನಾವಣೆ ನಡೆವ ನಿರೀಕ್ಷೆ
ಬೆಂಗಳೂರು(ಮಾ.19): ವಿಧಾನಸಭೆಯ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಂಪೂರ್ಣ ಸಿದ್ಧತೆಗಳನ್ನು ಈಗಾಲೇ ಕೈಗೊಂಡಿದ್ದು, ಬಹುತೇಕ ಇದೇ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಮೇ 2ನೇ ವಾರ ಚುನಾವಣೆ ನಡೆವ ನಿರೀಕ್ಷೆಯಿದೆ.
ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಅಲ್ಲದೇ, ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ರಾಜ್ಯಕ್ಕೆ ಆಗಮಿಸಿ ಮೂರು ದಿನಗಳ ಸಿದ್ಧತೆಗಳ ಕುರಿತು ಸಂಪೂರ್ಣವಾಗಿ ಪರಿಶೀಲನೆ ನಡೆಸಿದೆ. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದ್ದು, ಇದೇ ತಿಂಗಳ ಕೊನೆಯ ವಾರದಲ್ಲಿ ಅಥವಾ ಏಪ್ರಿಲ್‌ನ ಮೊದಲ ವಾರದಲ್ಲಿ ಅಧಿಕೃತವಾಗಿ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ ಎಂದು ಮೂಲಗಳು ಹೇಳಿವೆ.
ಯುಗಾದಿ ಹಬ್ಬದಂದೇ 126 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ ಪ್ರಕಟ?: ಸಂಖ್ಯಾಶಾಸ್ತ್ರ ಆಧರಿಸಿ ಘೋಷಣೆ?